ಸ್ಯಾಂಡಲ್ವುಡ್ ಸ್ಟಾರ್ಗಳೇ ಎಲ್ಲಿದ್ದೀರಾ, ಕಾವೇರಿ ಹೋರಾಟವನ್ನು ಮರೆತುಬಿಟ್ರಾ? ಕಾವೇರಿ ಹೋರಾಟಕ್ಕೆ ಬರದ ನಿಮಗೆ ಧಿಕ್ಕಾರ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಕನ್ನಡಪರ ಸಂಘಟನೆ ಸದಸ್ಯರು ಇಂದು ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸಿದ್ರು. ದರ್ಶನ್, ಸುದೀಪ್, ಯಶ್, ಶಿವರಾಜ್ ಕುಮಾರ್ ಪೋಟೋ ಹಿಡಿದು ಆಕ್ರೋಶ ಹೊರಹಾಕಿದ್ರು.
ಯಾವಾಗ ಆಕ್ರೋಶ ಹೆಚ್ಚಾಯ್ತೋ ನಟ ದರ್ಶನ್ ಟ್ವೀಟ್ ಮಾಡಿದ್ರು. ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ ಎಂದು ದರ್ಶನ್ ಬರೆದುಕೊಂಡಿದ್ದಾರೆ.
ಮತ್ತೊಂದು ಕಡೆ ಕಿಚ್ಚ ಸುದೀಪ್ ಕೂಡಾ ಕಾವೇರಿ ಹೋರಾಟಕ್ಕೆ ಸಾಥ್ ಕೊಟ್ಟಿದ್ದಾರೆ. ಸ್ನೇಹಿತರೇ ನಮ್ಮ ಕಾವೇರಿ ನಮ್ಮ ಹಕ್ಕು. ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ. ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ. ನೆಲ-ಜಲ-ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ.
ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ ಎಂದು ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದಾರೆ.
ನಟ ರಾಘವೇಂದ್ರ ರಾಜಕುಮಾರ್ ಕೂಡಾ, ರೈತರ ಹೋರಾಟಕ್ಕೆ ನಾವು ಸ್ಪಂದಿಸಲೇಬೇಕು. ಫಿಲಂ ಛೇಂಬರ್ ಕರೆಗಾಗಿ ಕಾಯುತ್ತಿದ್ದೇವೆ ಎಂದರೆ, ರಕ್ತ ಕೊಟ್ಟೆವು ನೀರು ಬಿಡೆವು. ನೀರು ಇಲ್ಲದಿದ್ದಾಗ ತಮಿಳುನಾಡಿಗೆ ಹೇಗೆ ನೀರು ಕೊಡಲು ಸಾಧ್ಯ? ಎಂದು ದೊಡ್ಡಣ್ಣ ಹೇಳಿದ್ದಾರೆ.
CM in Delhi: ಸಿಎಂ ದೆಹಲಿಗೆ ಹೋಗಿರುವುದು ಸಂಸದರಿಗೆ ಭಾಷಣ ಮಾಡಲಿಕ್ಕಾ? ಕುಮಾರಸ್ವಾಮಿ..!
Chandan Shetty: ಚಂದನ್ ಶೆಟ್ಟಿ ಹುಟ್ಟುಹಬ್ಬದಂದು “ನಾದ ಯೋಗಿ” ಯೂಟ್ಯೂಬ್ ಚಾನಲ್ ಶುಭಾರಂಭ..!