Political News : ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್ಗಳನ್ನು ಹಂಚಿದ್ದೇವೆ ಎಂದಿದ್ದ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರುಣ ಕ್ಷೇತ್ರದ ಮಡಿವಾಳ ಸಮುದಾಯದವರನ್ನು ಸಂಘಟನೆ ಮಾಡಬೇಕೆಂದು, ಸಾವಿರಾರು ಜನರನ್ನು ಸೇರಿಸಿ ಕುಕ್ಕರ್ ಮತ್ತು ಇಸ್ತ್ರಿಪೆಟ್ಟಿಗೆಗಳನ್ನು ನೀಡಲಾಗಿತ್ತು. ಆ ಸಮಾಜದ ರಾಜ್ಯಾಧ್ಯಕ್ಷ ನಂಜಪ್ಪ, ನನ್ನ ತಂದೆ ಸಿದ್ದರಾಮಯ್ಯರ ಕೈಯಿಂದಲೇ ಗಿಫ್ಟ್ ಕೊಡಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ, ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ನಂಜನಗೂಡಿನಲ್ಲಿ ನಡೆದ ತಾಲ್ಲೂಕು ಮಡಿವಾಳರ ಸಮುದಾಯ ಭವನದ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಯತೀಂದ್ರ ನೀಡಿದ್ದ ಸಾಮಾಜಿಕ ಜಾಲತಾಣದಲ್ಲಿ ಹರಡಿದೆ.
ಚುನಾವಣೆಯಲ್ಲಿ ಕುಕ್ಕರ್ ಹಂಚಿಕೆ ಮಾಡಿ ಗೆಲುವು ಸಾಧಿಸಿದ್ದೇವೆ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಚುನಾವಣಾ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ದಾರೆಂದು ದೂರು ಕೊಡಲು ಬಿಜೆಪಿ ನಿರ್ಧಾರ ಮಾಡಿದೆ. ಇದನ್ನೇ ರಾಜಕೀಯ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದೆ. ಸಿದ್ದರಾಮಯ್ಯ ಶಾಸಕ ಸ್ಥಾನವನ್ನು ಅನರ್ಹ ಮಾಡುವಂತೆ ಕೋರಿ ಬಿಜೆಪಿ ದೂರು ಕೊಡಲು ಮುಂದಾಗಿದೆ.
ಬಸವರಾಜ್ ಬೊಮ್ಮಾಯಿ : ಯತೀಂದ್ರ ಹೇಳಿಕೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು. ಕುಕ್ಕರ್ ಹಾಗೂ ಇಸ್ತ್ರಿ ಪೆಟ್ಟಿಗೆಯನ್ನು ಹಂಚಿಕೆ ಮಾಡಿದ್ದರಿಂದಲೇ ತನ್ನ ತಂದೆ ಗೆಲ್ಲಲು ಕಾರಣವಾಯಿತು ಎಂದು ಯತೀಂದ್ರ ಹೇಳಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ತಕರಾರು ಅರ್ಜಿ ಇದೆ. ಯತೀಂದ್ರ ಹೇಳಿದ್ದಕ್ಕೆ ಸಾಕ್ಷ್ಯಾಧಾರ ಇದ್ದರೆ ಆಯೋಗ ಈ ಸಂಬಂಧ ಕ್ರಮ ಕೈಗೊಳ್ಳಬೇಕು.
ಕೆ.ಎಸ್ ಈಶ್ವರಪ್ಪ : ಸಿಎಂ ಸಿದ್ದರಾಮಯ್ಯ ತಮ್ಮ ಕ್ಷೇತ್ರದಲ್ಲಿ ಲಂಚ ಕೊಟ್ಟು, ಆಮಿಷ ತೋರಿಸಿ ಗೆದ್ದಿದ್ದಾರೆ. ಚುನಾವಣಾ ಆಯೋಗ ತಕ್ಷಣ ಗಂಭೀರವಾಗಿ ಪರಿಗಣಿಸಬೇಕು.
‘ಅಬ್ಬಕ್ಕ, ಓಬವ್ವ,ರಾಣಿ ಚೆನ್ನಮ್ಮಂಥವರ ರಾಜ್ಯದಿಂದ ನಾನು ಬಂದಿದ್ದೇನೆ’
Cogress: ಗ್ಯಾರಂಟಿ ಕೂಪನ್ ಹಂಚಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ವಜಾ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
Jagadish Shettar : ಬಿಜೆಪಿಗೆ ಹೋಗುವ ಆ ನಾಲ್ಕು ಜನರ ಹೆಸರು ಹೇಳಲಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸವಾಲು