National News : ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ಅದಕ್ಕಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಸಕಲ ಸಿದ್ಧತೆ ಕೈಗೊಳ್ಳುತ್ತಿದೆ. ಇದರ ಭಾಗವಾಗಿಯೇ ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರವು ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 200 ರೂ. ಇಳಿಸಿತ್ತು. ಬೆಲೆಯೇರಿಕೆಯ ಬಿಸಿಗೆ ತತ್ತರಿಸಿದ್ದ ಜನರಿಗೆ ಇದು ತುಸು ಅನುಕೂಲ ಆಗಿತ್ತು. ಆದರೆ, ಈ ಖುಷಿ ತುಂಬ ದಿನ ಇರುವ ಸಾಧ್ಯತೆ ಕಡಿಮೆ. ಏಕೆಂದರೆ, ಶೀಘ್ರದಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
ಹೌದು, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆ ಕಂಡಿದೆ. ಇದರಿಂದಾಗಿ ಭಾರತದ ತೈಲ ಕಂಪನಿಗಳಿಗೆ ಭಾರಿ ಪ್ರಮಾಣದಲ್ಲಿ ನಷ್ಟವಾಗುತ್ತಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್ ಕಚ್ಚಾ ತೈಲದ ಬೆಲೆ 95 ಡಾಲರ್ ಆಗಿರುವುದರಿಂದ ಭಾರತದಲ್ಲಿ ಕೂಡ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಶೀಘ್ರದಲ್ಲೇ ಏರಿಕೆ ಮಾಡುವ ಸಾದ್ಯತೆ ಇದೆ.
ಕೇಂದ್ರ ಸರ್ಕಾರವು ಕಳೆದ ವರ್ಷದ ಮೇ ತಿಂಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಸುಂಕ ಕಡಿತಗೊಳಿಸಿತ್ತು. ಆ ಮೂಲಕ ಜನರ ಹೊರೆಯನ್ನು ತುಸು ಕಡಿಮೆ ಮಾಡಿತ್ತು. ಇದರಿಂದಾಗಿ ಕಳೆದ ವರ್ಷದಿಂದಲೂ ಭಾರತದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆಯು 100 ರೂಪಾಯಿ ಆಸುಪಾಸಿನಲ್ಲಿತ್ತು. ಆದರೆ, ಹಣದುಬ್ಬರದ ಏರಿಕೆಯಿಂದಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯು ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗ್ತಿದೆ.
‘ಅಬ್ಬಕ್ಕ, ಓಬವ್ವ,ರಾಣಿ ಚೆನ್ನಮ್ಮಂಥವರ ರಾಜ್ಯದಿಂದ ನಾನು ಬಂದಿದ್ದೇನೆ’
Cauvery Meeting : ದೆಹಲಿಯಲ್ಲಿ ಕಾವೇರಿ ಸಭೆ : ಸಭೆಯಲ್ಲಿ ಸಿದ್ದರಾಮಯ್ಯ ಏನಂದ್ರು?