Shakthi yojane century; ಶಕ್ತಿ ಯೋಜನೆಯ ಶತದಿನದ ಸಂಭ್ರಮ ಹಂಚಿಕೊಂಡ ಸಿಎಂ..!

ರಾಜ್ಯ ಸುದ್ದಿ: ಶಕ್ತಿ ಯೋಜನೆ ಜಾರಿಗೊಂಡ ಈ ನೂರು ದಿನಗಳಲ್ಲಿ ಅಸಂಖ್ಯ ತಾಯಂದಿರಲ್ಲಿ ನೆಮ್ಮದಿಯ ನಿಟ್ಟುಸಿರಿಗೆ, ಲಕ್ಷಾಂತರ ವಿದ್ಯಾರ್ಥಿನಿಯರ ಮುಖದಲ್ಲಿ ಮಂದಹಾಸಕ್ಕೆ ಕಾರಣವಾಗಿದೆ ಎಂಬುದು ಯೋಜನೆ ಜಾರಿಗೆ ಕೊಟ್ಟ ನನಗೆ ಅತ್ಯಂತ ಖುಷಿಯ ಸಂಗತಿ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲೆಗೆ ಹೋಗುವ ಪ್ರತಿ ಹೆಣ್ಣುಮಗಳು, ಕುಟುಂಬದ ಹೊಣೆಯನ್ನು ತನ್ನ ಹೆಗಲ ಮೇಲೆ ಹೊತ್ತು ನಿತ್ಯ ದುಡಿಮೆಗೆ ತೆರಳುವ ನಾಡಿನ ಅಕ್ಕ ತಂಗಿಯರು, ವೈದ್ಯಕೀಯ ಚಿಕಿತ್ಸೆಗಾಗಿ ಪ್ರಯಾಣ ಬೆಳೆಸುವ ಬಡತಾಯಂದಿರ ಬದುಕಿನ ಬವಣೆ ನಮ್ಮ ಶಕ್ತಿ ಯೋಜನೆಯ ಹಿಂದಿರುವ ಪ್ರೇರಕ ಶಕ್ತಿ. ಹೆಣ್ಣುಮಕ್ಕಳು ನಾಲ್ಕು ಗೋಡೆಗಳಿಗೆ ಸೀಮಿತವಾಗದೆ ಅವಕಾಶಗಳ ಜಗತ್ತಿನಲ್ಲಿ ತಮ್ಮನ್ನು ತೊಡಗಿಸಿಕೊಂಡು, ತಾವು ಸದೃಢರಾಗುವ ಜೊತೆಗೆ ಬಲಿಷ್ಠ ಸಮಾಜದ ಆಧಾರ ಸ್ತಂಭಗಳಾಗಬೇಕು ಎಂಬ ನಮ್ಮ ಉದ್ದೇಶವನ್ನು ಈಡೇರಿಸುವ ದಿಕ್ಕಿನಲ್ಲಿ ಶಕ್ತಿ ಯೋಜನೆ ಮುಂದಡಿಯಿಡುತ್ತಿದೆ.

ಈ ವರೆಗೆ ಒಟ್ಟು 64 ಕೋಟಿ ಮಹಿಳೆಯರು ( ಪ್ರಯಾಣ ಸಂಖ್ಯೆ ) ಉಚಿತ ಪ್ರಯಾಣ ಸೌಲಭ್ಯದ ಸದುಪಯೋಗ ಪಡೆದಿದ್ದು, ಇದಕ್ಕಾಗಿ ಸರ್ಕಾರವು ರೂ. 1,472 ಕೋಟಿ ವೆಚ್ಚ ಮಾಡಿದೆ. ಶಿಕ್ಷಣ, ಉದ್ಯೋಗ, ವೈದ್ಯಕೀಯ ಚಿಕಿತ್ಸೆ ಸೇರಿದಂತೆ ನಿತ್ಯಬದುಕಿನ ಅವಶ್ಯಕತೆಗಳಿಗಾಗಿ ಪ್ರಯಾಣ ಬೆಳೆಸುವ ಹೆಣ್ಣುಮಕ್ಕಳಿಗೆ ಈ ಯೋಜನೆ ವರದಾನವಾಗಿದೆ  ಟ್ವೀಟ್ ಮಾಡುವ ಮೂಲಕ ಖುಷಿ ಹಂಚಿಕೊಂಡಿದ್ದಾರೆ.

BanneruGatta; ಚಿರತೆಗಳ ಸರಣಿ ಸಾವು ತಪ್ಪಿಸಲು ಹೈ ಅಲರ್ಟ್ ಘೋಷಿಸಿದ ಸಚಿವರು..!

Chandrayana Ganesh; ಮದಿಹಾಳದಲ್ಲಿ ಪ್ರತಿಷ್ಠಾಪನೆಗೊಂಡಿದೆ ಚಂದ್ರಯಾನ-3 ಗಣಪತಿ

Gokul nivas: ಕೈಕಾಲು ಕಟ್ಟಿಹಾಕಿ ಮನೆ ಕಳ್ಳತನ ಮಾಡಿದ ಚೋರರು..!

About The Author