Friday, June 20, 2025

Latest Posts

KC Raghu : ಖ್ಯಾತ ಆಹಾರ ತಜ್ಞ ಕೆ.ಸಿ ರಘು ವಿಧಿವಶ

- Advertisement -

Banglore News : ನಾಡಿನ ಹೆಸರಾಂತ, ಖ್ಯಾತ ಆಹಾರ ತಜ್ಞ ಕೆ.ಸಿ ರಘು ಅವರು ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರಘು ಇಂದು(ಅಕ್ಟೋಬರ್ 15) ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಶ್ವಾಸಕೋಶದ ಕ್ಯಾನ್ಸರ್‌ಗೆ ತುತ್ತಾಗಿದ್ದ ಅವರು, ಇಂದು ಬೆಳಗ್ಗೆ ಬೆಂಗಳೂರಿನ ದಾಸರಹಳ್ಳಿಯ ಅಮೃತ ನಗರದಲ್ಲಿರುವ ಅವರ ನಿವಾಸದಲ್ಲಿ 7.30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅವರ ಪತ್ನಿ ಆಶಾ ರಘು ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ ಎನ್ನಲಾಗಿದೆ.

ಕೆ.ಸಿ. ರಘು ಅವರು ಹಲವು ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದರು. ಅನೇಕ ದಿನಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆಯುತ್ತಿದ್ದರು. ಸಾಮಾನ್ಯ ವಿಜ್ಞಾನ ಮತ್ತು ಆರ್ಥಿಕತೆಯ ವಿಷಯಗಳನ್ನು ಅತಿಥಿ ಉಪನ್ಯಾಸಕರಾಗಿ ನಿರ್ವಹಿಸಿದ್ದಾರೆ.

hailyala road story ಬಿಲ್ ಕಲೆಕ್ಟರ್ ನ ಬರ್ಬರ ಹತ್ಯೆ ಕಾರಣ ಮಾತ್ರ ನಿಗೂಢ.!

Blackmail: ಪ್ರಿಯಕರನ ಕಿರುಕುಳಕ್ಕೆ ನೇಣಿಗೆ ಶರಣಾದ ವಿವಾಹಿತ ಮಹಿಳೆ;

ಬಾಕಿ ಹಣ ಪಾವತಿ ಮಾಡದಿದ್ದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ; ಡಿ.ಕೆಂಪಣ್ಣ

- Advertisement -

Latest Posts

Don't Miss