ಐಟಿ, ಇಡಿ, ಸಿಬಿಐ ಕೇಂದ್ರದ ವ್ಯಾಪ್ತಿಯಲ್ಲಿವೆ: ಅವರು ಮಾಡಿದ್ದೇ ಆಟ ಎಂದ ಲಾಡ್

Dharwad Political News: ಧಾರವಾಡ: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ ಸಿಕ್ಕ 40 ಕೋಟಿ ಹಣ ಕಾಂಗ್ರೆಸ್‌ಗೆ ಸೇರಿದ್ದು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ.

ಧಾರವಾಡದಲ್ಲಿ ಮಾತನಾಡಿರುವ ಅವರು, ವಿರೋಧ ಪಕ್ಷದವರು ಸಾಮಾನ್ಯವಾಗಿ ಈ ರೀತಿಯ ಆರೋಪ ಮಾಡಿಯೇ ಮಾಡುತ್ತಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಐಟಿ, ಇಡಿ, ಸಿಬಿಐ ಎಲ್ಲವೂ ಅವರ ಕೈಯಲ್ಲಿದೆ. ಅವರು ಮಾಡಿದ್ದೇ ಆಟ. ಈಗ ಎಲ್ಲವೂ ತನಿಖೆ ನಡೆಯುತ್ತಿದೆ. ತನಿಖೆ ಮುಗಿಯವವರೆಗೂ ಕಾಯೋಣ ಎಂದರು.

ಅಬಕಾರಿ ಇಲಾಖೆಯು ಮದ್ಯ ವ್ಯಾಪಾರಿಗಳಿಂದ ಲಂಚ ಪಡೆಯುತ್ತಿದೆ ಎಂದು ಮದ್ಯ ವ್ಯಾಪಾರಿಗಳು ಪತ್ರ ಬರೆದಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಲಾಡ್, ಈ ವಿಚಾರ ಸಿಎಂ ಗಮನಕ್ಕೆ ಹೋಗಿದೆ. ಅವರು ಅದಕ್ಕೆ ಪರಿಹಾರ ಕಂಡು ಹಿಡಿಯುತ್ತಾರೆ ಎಂದರು.

‘ನಮಗೆ ಹಣ ಸಂಗ್ರಹ ಮಾಡಿ ಕೊಡುವ ಪರಿಸ್ಥಿತಿ ಇಲ್ಲ’

ಶಾಸಕ ಸ್ವರೂಪ್ ಗೆ ವಿದ್ಯುತ್ ಶಾಕ್..! ಆಗಿದ್ದೇನು ಗೊತ್ತಾ..?

Call Record : ಅನುಮತಿ ಇಲ್ಲದೆ ಕಾಲ್ ರೆಕಾರ್ಡ್ ಮಾಡುವುದು ಕಾನೂನು ಉಲ್ಲಂಘನೆ

About The Author