Saturday, April 19, 2025

Latest Posts

DK Shivakumar : ಡಿಸಿಎಂ ಡಿಕೆಶಿಗೆ ಮತ್ತೆ ಬಿಗ್ ಶಾಕ್ ನೀಡಿದ ಸಿಬಿಐ

- Advertisement -

Banglore News : ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿಯಲ್ಲಿ ಕೇಂದ್ರಿಯ ತನಿಖಾ ಸಂಸ್ಥೆ (ಸಿಬಿಐ) ದಾಖಲಿಸಿರುವ ಎಫ್​ಐಆರ್​ ಅನ್ನು ರದ್ದುಗೊಳಿಸಲು ನಿರಾಕರಿಸುವ ಮೂಲಕ ಕರ್ನಾಟಕ ಹೈಕೋರ್ಟ್​ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಗೆ ಬಿಗ್​ ಶಾಕ್​ ನೀಡಿದೆ.

ಸಿಬಿಐ ತನಿಖೆ ಇದ್ದ ತಡೆಯಾಜ್ಞೆ ತೆರವುಗೊಳಿಸಿದ್ದು, ಡಿಕೆಶಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ.
ಸಿಬಿಐ ದಾಖಲಿಸಿರುವ ಎಫ್​ಐಆರ್​ನ ಕಾನೂನುಬದ್ಧತೆಯನ್ನು ಪ್ರಶ್ನೆ ಮಾಡಿ ಡಿ.ಕೆ.ಶಿವಕುಮಾರ್​ ಅರ್ಜಿ ಸಲ್ಲಿಸಿದ್ದರು. ಇದರ ಸುದೀರ್ಘ ವಿಚಾರಣೆ ನಡೆಸಿದ್ದ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಕೆ. ನಟರಾಜನ್​, ಎಫ್​ಐಆರ್​ ರದ್ದು ಕೋರಿ ಅರ್ಜಿದಾರರು ನ್ಯಾಯಾಲಯ ಮೆಟ್ಟಿಲೇರುವಲ್ಲಿ ಸಾಕಷ್ಟು ವಿಳಂಬ ಮಾಡಿದ್ದು, ಈ ಹಂತದಲ್ಲಿ ನಾವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಈಗಾಗಲೇ ತನಿಖೆಯು ಅಂತಿಮ ಹಂತದಲ್ಲಿದ್ದು, ಆರೋಪಿಗಳಿಂದ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಸಾಕಷ್ಟು ಸಾಕ್ಷಿಗಳನ್ನು ಸಹ ಸಂಗ್ರಹಿಸಲಾಗಿದೆ. ಆರೋಪ ಪಟ್ಟಿ ಸಲ್ಲಿಸುವ ಹಂತಕ್ಕೆ ಬಂದಿದ್ದು, ಈ ಸಂದರ್ಭದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಆದರೆ, ತನಿಖಾಧಿಕಾರಿಗಳು ಸಲ್ಲಿಸುವ ಆರೋಪ ಪಟ್ಟಿಯನ್ನು ಪ್ರಶ್ನೆ ಮಾಡಲು ಮತ್ತು ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಲು ಅರ್ಜಿದಾರರು ಸ್ವತಂತ್ರರಾಗಿದ್ದಾರೆ ಎಂದು ಕೋರ್ಟ್​ ಅಭಿಪ್ರಾಯ ಪಟ್ಟಿದೆ.

ಪ್ರಕರಣ ಹಿನ್ನೆಲೆ :
ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ಪ್ರತ್ಯೇಕವಾಗಿ ನಡೆಸಿದ ತನಿಖೆಯ ಫಲಿತಾಂಶಗಳ ಆಧಾರದ ಮೇಲೆ ಸಿಬಿಐ ಡಿಕೆಶಿ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಎಫ್​ಐಆರ್​ ದಾಖಲಿಸಿದೆ. 2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆಶಿಗೆ ಸಂಬಂಧಿಸಿದ ಪ್ರದೇಶಗಳ ಮೇಲೆ ದಾಳಿ ನಡೆಸಿತು. ಇದರ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿತು. ಇಡಿ ತನಿಖೆಯ ಬಳಿಕ ಸಿಬಿಐ ಮಧ್ಯಪ್ರವೇಶಿಸಿ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು.

2019ರ ಸೆಪ್ಟೆಂಬರ್ 25ರಂದು ಅಂದಿನ ಸರ್ಕಾರ ತನಿಖೆಗೆ ಅನುಮತಿ ನೀಡಿತು. ಅಂತಿಮವಾಗಿ ಡಿಕೆಶಿ ವಿರುದ್ಧ 2020ರ ಅಕ್ಟೋಬರ್ 3ರಂದು ಎಫ್​ಐಆರ್​ ದಾಖಲಿಸಿತು. ಸಿಬಿಐ ದಾಖಲಿಸಿರುವ ಈ ಎಫ್‌ಐಆರ್ ಕಾನೂನು ಬಾಹಿರವಾಗಿದ್ದು, ತನಿಖೆ ರದ್ದುಪಡಿಸಬೇಕು ಎಂದು ಕೋರಿ 2022ರ ಜುಲೈನಲ್ಲಿ ಡಿ.ಕೆ.ಶಿವಕುಮಾರ್ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಸಿಬಿಐ ತನಿಖೆಗೆ 2023ರ ಫೆ.10ರಂದು ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದೀಗ ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ಇದ್ದ ತಡೆಯಾಜ್ಞೆ ತೆರವಾದಂತಾಗಿದೆ.

ಜಲಶಕ್ತಿ ಮಂತ್ರಿಗಳ ಜೊತೆ ಕರವೇ ನಾರಾಯಣ ಗೌಡ ಭೇಟಿಗೆ ಅವಕಾಶ; ಪ್ರಹ್ಲಾದ್ ಜೋಶಿ

ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಕಾಳಿಂಗ ‌ಸರ್ಪ ಪ್ರತ್ಯಕ್ಷ

ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಜೆಪಿ ಪ್ರತಿಭಟನೆ; 90% ಸರ್ಕಾರ..!

 

- Advertisement -

Latest Posts

Don't Miss