Chitradurga News : ಶಾಲೆಯ ಮುಖ್ಯಶಿಕ್ಷಕನೋರ್ವ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ಎರಚಿ ಗಾಯಗೊಳಿಸಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಜೋಡಿ ಚಿಕ್ಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಘಟನೆ ಸಂಬಂಧ ದೂರು ದಾಖಲಾಗಿದ್ದು, ಜೋಡಿಚಿಕ್ಕೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಂಗಸ್ವಾಮಿ ಎಂಬುವವರನ್ನು ಸೇವೆಯಿಂದ ಅಮಾನತು ಮಾಡಿ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ. ಶಿವಶಂಕರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಅಕ್ಟೋಬರ್ 25ರಂದು ಘಟನೆ ನಡೆದಿದ್ದು, ಗಾಯಾಳು ಬಾಲಕಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಶಾಚಾಲಯ ಶುಚಿಗೊಳಿಸಲು ವಿದ್ಯಾರ್ಥಿಗಳನ್ನು ಬಳಸಿಕೊಂಡು ಕರ್ತವ್ಯ ಲೋಪ ಎಸಗಿದ್ದೀರಾ. ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನ ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹೊರಡಿಸಿರುವ ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.
ಪೋಕ್ಸೋ ಪ್ರಕರಣ-ಹುಬ್ಬಳ್ಳಿ ಕಸಬಾ ಠಾಣೆಯ ಪೊಲೀಸರಿಂದ ಸಂತ್ರಸ್ತೆಗೆ ಮಾನಸಿಕ ಕಿರುಕುಳ ಆರೋಪ