Friday, July 4, 2025

Latest Posts

ಪೊಲೀಸ್ ಪೇದೆಗೆ ಸೋಂಕು ಎರಡು ಠಾಣೆಗಳೇ ಸೀಲ್ ಡೌನ್

- Advertisement -

ಕರ್ನಾಟಕ ಟಿವಿ ಮಂಡ್ಯ : ಕೃಷ್ಣರಾಜಪೇಟೆ ಪಟ್ಟಣ  ಪೊಲೀಸ್ ಠಾಣೆಯ ಕ್ರೈಂ ವಿಭಾಗದ ಮುಖ್ಯಪೇದೆ ನಾಗರಾಜು ಅವರಿಗೆ ಕೊರೋನಾ ಪಾಸಿಟಿವ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಪಟ್ಟಣ ಪೋಲಿಸ್ ಠಾಣೆ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದೆ.

ಕೆ.ಆರ್.ಪೇಟೆ ಪಟ್ಟಣ ಠಾಣೆ ಮತ್ತು ಗ್ರಾಮಾಂತರ ಠಾಣೆಯ ಕೆಲಸಗಳು ಪರ್ಯಾಯವಾಗಿ ಕಿಕ್ಕೇರಿ ಠಾಣೆಯಲ್ಲಿ ನಡೆಯಲಿವೆ ಎಂದು ವಿವರಿಸಿದ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಂ ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಲು 30 ಜನರು  ಪೊಲೀಸ್ ಸಿಬ್ಬಂಧಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ತಿಳಿಸಿದರು..ಕೋವಿಡ್ ಕರ್ತವ್ಯಕ್ಕೆ ಧಕ್ಕೆ ಉಂಟಾಗದಂತೆ ವಿಶೇಷ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ. ಕ್ವಾರಂಟೈನ್ ಕೇಂದ್ರಗಳಿಗೆ ವಿಶೇಷ ಭದ್ರತೆಯನ್ನು ಒದಗಿಸಲಾಗಿದೆ. ಗ್ರಾಮಕ್ಕೆ ಹೊರ ರಾಜ್ಯಗಳಿಂದ  ನುಸುಳಿ ಆಗಮಿಸಿರುವ ಜನರ ಬಗ್ಗೆ ಗ್ರಾಮಸ್ಥರು ಕೂಡಲೇ ಮಾಹಿತಿಯನ್ನು ನೀಡಬೇಕು..ತಾಲ್ಲೂಕಿಗೆ ಯಾರೇ ಹೊಸದಾಗಿ ಆಗಮಿಸಿದರೆ 14ದಿನಗಳು ಹೋಂ ಕ್ವಾರಂಟೈನ್ ನಲ್ಲಿರುವುದು, ಕೋರೋನಾ ಸ್ವಾಬ್ ಟೆಸ್ಟ್ ಗೆ ಒಳಗಾಗುವುದು ಕಡ್ಡಾಯವಾಗಿದೆ ಎಂದು ಎಸ್ ಪಿ ಪರಶುರಾಂ ಹೇಳಿದರು

Mandya Dist KR Pete Police station

ಈ ಸಂದರ್ಭದಲ್ಲಿ ಶ್ರೀರಂಗಪಟ್ಟಣ ಡಿವೈಎಸ್ ಪಿ ಅರುಣ್ ನಾಗೇಗೌಡ, ನಾಗಮಂಗಲ ಡಿವೈಎಸ್ ಪಿ ಕೆ.ಬಿ.ವಿಶ್ವನಾಥ್, ಸರ್ಕಲ್ ಇನ್ಸ್ ಪೆಕ್ಟರ್ ಗಳಾದ ಯೋಗೇಶ್, ಕೆ.ಎನ್.ಸುಧಾಕರ್, ಸಬ್ ಇನ್ಸ್ ಪೆಕ್ಟರ್ ಗಳಾದ ಬ್ಯಾಟರಾಯಗೌಡ, ಡಿ.ಲಕ್ಷ್ಮಣ್ ಮತ್ತು ಪೊಲೀಸ್ ಸಿಬ್ಬಂಧಿಗಳು ಉಪಸ್ಥಿತರಿದ್ದರು.

Mandya SP Parashuram

ಪ್ರವಿಣ್ ಕುಮಾರ್ ಜಿಟಿ, ಕರ್ನಾಟಕ ಟಿವಿ, ಮಂಡ್ಯ

- Advertisement -

Latest Posts

Don't Miss