Bengaluru News: ಬೆಂಗಳೂರು: ಎಚ್. ಕಾಂತರಾಜು ನೇತೃತ್ವದ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ‘ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2015’ ವರದಿಯನ್ನು (Caste Census) ಸ್ವೀಕರಿಸಲು ರಾಜ್ಯ ಸರಕಾರ ನಿರ್ಧರಿಸಿದ ಬೆನ್ನಲ್ಲೇ ಒಕ್ಕಲಿಗ ಸಮುದಾಯದಿಂದ ವಿರೋಧ ವ್ಯಕ್ತಗೊಂಡಿವೆ. ಒಕ್ಕಲಿಗ ಸಮುದಾಯದ ಸ್ವಾಮೀಜಿಗಳ ನೇತೃತ್ವದದಲ್ಲಿ ಸಭೆ ನಡೆಸಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವರದಿಯ ಸ್ವೀಕರಿಸದಂತೆ ಆಗ್ರಹಿಸಲು ನಿರ್ಧರಿಸಲಾಗಿದೆ.
ಹಿಂದುಳಿದ ವರ್ಗಗಳ ಆಯೋಗ ನವೆಂಬರ್ನಲ್ಲಿ ವರದಿ ಸಲ್ಲಿಸಲಿದೆ ಎಂಬ ಚಿಂತನೆ ಹಿನ್ನೆಲೆಯಲ್ಲಿ ರಾಜ್ಯ ಒಕ್ಕಲಿಗರ ಸಂಘ ಸಭೆ ಕರೆದಿತ್ತು. ಜತೆಗೆ ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ನಡುವೆ ಒಮ್ಮತ ಇಲ್ಲದಿರುವುದು ಕೂಡ ಪ್ರಕಟಗೊಂಡಿದೆ.
ಯಾವುದೇ ಕಾರಣಕ್ಕೂ ಸರ್ಕಾರ ಕಾಂತರಾಜ ಆಯೋಗದ ವರದಿ ಜಾರಿ ಮಾಡಬಾರದು. ಹೊಸ ಜಾತಿಗಣತಿ ನಡೆಸಬೇಕು ಎಂದು ಸಮುದಾಯದ ಮಠಾಧೀಶರು ಮತ್ತು ವಿವಿಧ ರಾಜಕೀಯ ಮುಖಂಡರ ಸಮ್ಮುಖದಲ್ಲಿ ನಿರ್ಣಯ ತೆಗೆದುಕೊಳ್ಳುವ ಮೂಲಕ ಸರ್ಕಾರಕ್ಕೆ ಸವಾಲು ಹಾಕಿದೆ. ಒಕ್ಕಲಿಗರ ಸಂಘದ ಈ ನಿರ್ಣಯದ ಬಿಸಿ ಮುಂದಿನ ದಿನಗಳಲ್ಲಿ ಆಡಳಿತಾರೂಧ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟಲಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲೇ ಈ ನಿರ್ಣಯ ಆಗಿರುವುದೇ ಅದಕ್ಕೆ ಕಾರಣ
ಸಭೆಯಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ, ಪಟ್ಟನ ಯಕನಹಳ್ಳಿ ಮಠದ ಶ್ರೀನಂಜಾವಧೂತ ಸ್ವಾಮೀಜಿಯವರು ಮತ್ತು ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಭಾಗವಹಿಸಿದ್ದರು. ಅವರೆಲ್ಲರೂ ವರದಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ, ರಾಜ್ಯದಲ್ಲಿರುವ ಒಕ್ಕಲಿಗ ಸಮುದಾಯದ ಹಿತದೃಷ್ಟಿಯಿಂದ ಎಚ್.ಕಾಂತರಾಜು ಅವರು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ನಡೆಸಿರುವ ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿದರು.
ಸಿಎಂ ಬಳಿ ನಿಯೋಗ: ಕಾಂತರಾಜ ಆಯೋಗದ ವರದಿ ಸಂಬಂಧ ತಕ್ಷಣದಲ್ಲೇ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ನಿರ್ಧರಿಸಲಾಗಿದೆ.
ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ಸಿ. ಎಸ್. ಚೆಲುವರಾಯಸ್ವಾಮಿ, ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ, ಸಂಘದ ಅಧ್ಯಕ್ಷ ಡಿ. ಹನುಮಂತಯ್ಯ ಗೌರವಾಧ್ಯಕ್ಷ ಕೆಂಚಪ್ಪಗೌಡ ಒಕ್ಕಲಿಗ ಸಮುದಾಯ ಜನಪ್ರತಿನಿಧಿಗಳು, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ದೆಹಲಿಯಲ್ಲೂ ಚರ್ಚೆ
“ಜಾತಿ ಗಣತಿ” ವಿವಾದ ಈಗ ದೆಹಲಿಯ ಬಿಜೆಪಿ ಎಡಸಾಲೆಯಲ್ಲೂ ಸದ್ದು ಮಾಡಿದೆ. ಈ ಬಗ್ಗೆ ರಾಜ್ಯ ನಾಯಕರಿಂದ ಡೆಲ್ಲಿ ನಾಯಕರು ಮಾಹಿತಿ ಪಡೆದಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ಗಡ್ಕರಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ಭಾಗಿಯಾಗಿದ್ದ ರಾಷ್ಟ್ರೀಯ ಹಿಂದುಳಿದ ವರ್ಗದ ನಾಯಕರ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗಿದೆ.
ಸರ್ಕಾರಿ ಶಾಲೆಯ ಮಕ್ಕಳ ಅಭಿವೃದ್ಧಿಯತ್ತ ಚಿತ್ತಹರಿಸಿದ ಕಾಂಗ್ರೆಸ ಶಾಸಕ
‘ಅವರಲ್ಲಿ ಹೊಂದಾಣಿಕೆ ಇಲ್ಲ ಅನ್ನೋದು ಗೊತ್ತಾಗ್ತಿದೆ. ಬೆಳಗ್ಗೆ ಎದ್ರೆ ನಾಯಿ, ನರಿ ತರ ಕಿತ್ತಾಡ್ತಿದ್ದಾರೆ’
‘ಆ ನಾಲ್ಕು ಜನರ ನಡುವೆ ಜಗಳ ಹಚ್ಚಿ, ಸಿದ್ದರಾಮಯ್ಯ ಸಿಎಂ ಆಗಿರಬೇಕು ಅಂದುಕೊಂಡಿದ್ದಾರೆ’

