Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ರಾಜ್ದಲ್ಲಿ ಬರಗಾಲ ತಾಂಡವವಾಡುತ್ತಿದೆ. ನಮ್ಮ ಪಕ್ಷದಿಂದ ಈಗಾಗಲೇ ಬರ ಅಧ್ಯಯನ ತಂಡ ರಚನೆ ಮಾಡಿ ಬರಗಾಲದ ಬಗ್ಗೆ ಅಧ್ಯಯನ ನಡೆಸುತ್ತಿದೆ. ಬರ ವಿಚಾರದ ಬಗ್ಗೆ ಚಿಂತನೆ ಮಾಡಬೇಕಿರೋ ಸರ್ಕಾರ ಯಾವುದೇ ಚಕಾರ ಎತ್ತುತ್ತಿಲ್ಲ. ರಾಜ್ಯದಲ್ಲಿ ಅನೇಕ ಜನ ರೈತರ ಆತ್ಮಹತ್ಯೆಗಳಾಗುತ್ತಿವೆ. ರಾಜ್ಯದಲ್ಲಿ ಇಷ್ಟೆಲ್ಲ ಸಮಸ್ಯೆ ಇದ್ರೂ ಸಿಎಂ ಮಾತ್ರ ಸಂತಸದಿಂದ ಡ್ಯಾನ್ಸ್ ನಲ್ಲಿ ತೊಡಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ದ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.
ಶೀಘ್ರವೇ ಸಿಎಂ ಈ ಬಗ್ಗೆ ಸೂಕ್ತ ಚಿಂತನೆ ಮಾಡಬೇಕು. ರೈತರ ಆತ್ಮಹತ್ಯೆಗಳನ್ನ ತಡೆಯಲು ಸರ್ಕಾರ ಮುಂದಾಗಬೇಕು. ಇದನ್ನೆಲ್ಲ ಬಿಟ್ಟು ಸಿಎಂ ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ. ಕೇವಲ ಸಿಎಂ ವಿಚಾರವಾಗಿ ರಾಜ್ಯ ಸರ್ಕಾರ ಮುಳುಗಿಹೋಗಿದೆ. ಅವರಲ್ಲಿ ಸಿದ್ಧರಾಮಯ್ಯ ಹಾಗೂ ಡಿಕೆಶಿ ಎರಡು ಬಣಗಳಿವೆ. ರಾಜ್ಯ ಸರ್ಕಾರ ತನ್ನ ನ್ಯೂನತೆಗಳನ್ನ ಮರೆಮಾಚುತ್ತಿದೆ ಎಂದಿದ್ದಾರೆ.
ಅಲ್ಲದೇ, ಕಪ್ಪು ಹಣದ ವಿಚಾರ ವಿಷಯಾಂತರ ಮಾಡುವ ಮೂಲಕ ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ. ನಾವು ಯಾವುದೇ ಆಪರೇಶನ್ ಕಮಲ ಮಾಡುತ್ತಿಲ್ಲ. ಆಪರೇಶನ್ ಕಮಲ ಮಾಡುವ ಅವಶ್ಯಕತೆ ನಮಗೆ ಬಂದಿಲ್ಲ. ಸರ್ಕಾರದ ನಾಯಕರು ತಮ್ಮ ಜವಾಬ್ದಾರಿಯನ್ನ ಮರೆತು ಕೇವಲ ಸಿಎಂ ವಿಚಾರವಾಗಿ ಕಿತ್ತಾಡಿಕೊಳ್ಳುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಅಸಮಾಧಾನ ಹೊರಹಾಕಿದ್ದಾರೆ.
ಇನ್ನು ವಿರೋಧ ಪಕ್ಷದ ನಾಯಕರ ಆಯ್ಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಶ್ರೀರಾಮುಲು, ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡೋದು ನಮ್ಮ ಪಕ್ಷಕ್ಕೆ ಬಿಟ್ಟಿದ್ದು. ಅದನ್ನು ಕೇಳೋಕೆ ಅವರ್ಯಾರು ? ಯಾವಾಗ ವಿಪಕ್ಷ ನಾಯಕನ ಆಯ್ಕೆ ಮಾಡಬೇಕು ಅನ್ನೋದು ನಮಗೆ ಗೊತ್ತಿದೆ. ಈ ಬಗ್ಗೆ ನಮ್ಮಪಕ್ಷ ನಿರ್ಧಾರ ತೆಗೆದುಕೊಳ್ಳುತ್ತದೆ. ಅವರು ತಮ್ಮ ನಾಟಕೀಯ ಬೆಳವಣಿಗೆ ಬಿಟ್ಟು ಸರ್ಕಾರದ ಕೆಲಸ ಮಾಡಲಿ. ಈ ಅಧಿವೇಶನದ ಒಳಗಾಗಿ ನಮ್ಮ ಪಕ್ಷ ವಿಪಕ್ಷ ನಾಯಕರ ಆಯ್ಕೆ ಮಾಡಲಿದೆ. ಬರ ಅಧ್ಯಯನ ಕುರಿತು ಕೇಂದ್ರಕ್ಕೆ ಈಗಾಗಲೇ ವರದಿ ಹೋಗಿದೆ. ಕೇಂದ್ರದಿಂದ ಅವಶ್ಯಕ ಅನುದಾನದ ಬಿಡುಗಡೆ ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ತೀರ್ಮಾನ ಮಾಡುತ್ತೆ. ಲೋಕಸಭಾ ಚುನಾವಣೆಗೆ ನಾನು ಸ್ಪರ್ಧೆ ಮಾಡುವ ಯಾವುದೇ ವಿಚಾರ ಇಲ್ಲ. ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಲಿದ್ದೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನ ಈ ಅಪಾರ್ಟ್ಮೆಂಟ್ನಲ್ಲಿ ನಾಯಿಯನ್ನು ಸಾಕಲು 10 ಸಾವಿರ ರೂ. ಕೊಡಬೇಕಂತೆ!
ಮೂರು ದಿನ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ, ಜಿಲ್ಲೆಯಾದ್ಯಂತ ಹೈ ಅಲರ್ಟ್