Thursday, February 6, 2025

Latest Posts

ಶೆಟ್ಟರ್ ನೇತೃತ್ವದ ಆಪರೇಷನ್ ಹಸ್ತ ಸಕ್ಸಸ್.. ಪ್ರಮುಖ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ

- Advertisement -

Political News: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣೆ ಗೆಲ್ಲೋಕೆ ಕಾಂಗ್ರೆಸ್ ಭರದ ಸಿದ್ಧತೆ ನಡೆಸ್ತಿದೆ. ಇದರ ಮಧ್ಯೆ ಮಾಜಿ ಶಾಸಕ ಚಿಕ್ಕನಗೌಡ ಹಾಗೂ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದೆ ಚಿಕ್ಕನಗೌಡರ ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಸದ್ಯ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಮ್ಮುಖದಲ್ಲಿ ಚಿಕ್ಕನಗೌಡರ ಜೊತೆ ಕುಂದಗೋಳ ಹಾಗೂ ಶಿಗ್ಗಾವಿಯ ಬಿಜೆಪಿ ಮುಖಂಡರು ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಜಗದೀಶ್ ಶೆಟ್ಟರ್.. ಇಂದು ಬೆಂಗಳೂರಿನಲ್ಲಿ ಕುಂದಗೋಳದ ಮಾಜಿ ಶಾಸಕರಾದ ಎಸ್.ಐ.ಚಿಕ್ಕನಗೌಡರ ಮತ್ತು ಕುಂದಗೋಳ ಹಾಗೂ ಶಿಗ್ಗಾಂವಿ ಮತಕ್ಷೇತ್ರದ ಮುಖಂಡರ ಜೊತೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ಬರೆದುಕೊಂಡಿದ್ದಾರೆ.

KPSC ಎಕ್ಸಾಂನಲ್ಲಿ ಮಾಂಗಲ್ಯ ಸರ ತೆಗೆಸಿದ ಸಿಬ್ಬಂದಿ

ಕಾಂಗ್ರೆಸ್’ನವರು ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ: Govind Karajola

ಕಮಲ ಪಡೆಗೆ ಮತ್ತೊಂದು ಶಾಕ್ ಕೊಟ್ಟ ಜಗದೀಶ್ ಶೆಟ್ಟರ್; ಬಿಜೆಪಿಯ ಮತ್ತೊಬ್ಬ ಮಾಜಿ ಶಾಸಕ ಕಾಂಗ್ರೆಸ್ಗೆ

- Advertisement -

Latest Posts

Don't Miss