ಮೈಸೂರಿನಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ: ವ್ಯಾಘ್ರನ ಬಂಧನಕ್ಕೆ ಮುಂದುವರೆದ ಶೋಧ ಕಾರ್ಯ

Mysuru News: ಮೈಸೂರು: ಮೈಸೂರಿನ್ಲಲಿ ಮಾನವ ಪ್ರಾಣಿ ಸಂಘರ್ಷ ಮುಂದುವರೆದಿದೆ. ಇತ್ತೀಚೆಗೆ ಜಿಲ್ಲೆಯ ನಂಜನಗೂಡು ತಾಲೂಕಿನ‌ ಮಹದೇವನಗರದಲ್ಲಿ ಜಾನುವಾರು ಮೇಲೆ ದಾಳಿ ಮಾಡಿ ರಕ್ಷಣೆಗೆ ಹೋದ ವೀರಭದ್ರ ಬೋವಿ ಎಂಬ ರೈತನ ಮೇಲೆ ಹುಲಿ ದಾಳಿ ನಡೆಸಿತ್ತು. ಈಗ ಇದೇ ರೀತಿಯ ಘಟನೆ ಮರುಕಳಿಸಿದೆ. ಮತ್ತೊಂದೆಡೆ ನಿನ್ನೆ ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಯಿಂದ ಮತ್ತೋರ್ವ ರೈತ ಪ್ರಾಣ ಕಳೆದುಕೊಂಡಿದ್ದಾನೆ. ರೈತ ಬಾಲಾಜಿ ನಾಯಕ್ (42) ಹುಲಿ ದಾಳಿಗೆ ಬಲಿಯಾಗಿದ್ದು ಹುಲಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಬಿ.ಮಟಕೆರೆ-ಹೊಸಕೋಟೆ ರಸ್ತೆಯಲ್ಲಿ ನಿನ್ನೆ ದನ ಮೇಯಿಸುವಾಗ ಹುಲಿ ದನಗಳ ಮೇಲೆ ದಾಳಿ ಮಾಡಿತ್ತು. ಆಗ ದನಗಳು ಹುಲಿಗೆ ಸಿಗದೆ ಚೆಲ್ಲಾ ಪಿಲ್ಲಿಯಾಗಿ ಓಡಿದವು. ದನಗಳು ಸಿಗದ ಹಿನ್ನೆಲೆ ಬಾಲಾಜಿ ಮೇಲೆ ಹುಲಿ ದಾಳಿ ನಡೆಸಿತ್ತು. ಬಳಿಕ ಮೃತದೇಹ ಕಾಡಿಗೆ ಎಳೆದುಕೊಂಡು ಹೋಗಿತ್ತು. ಇದನ್ನು ಗಮನಿಸಿದ ಅಕ್ಕ ಪಕ್ಕದ ಜಮೀನಿನವರು ಕೂಗಾಡಿದ್ದು ಶಬ್ದ ಕೇಳಿ ಮೃತದೇಹ ಬಿಟ್ಟು ಹುಲಿ ಓಡಿ ಹೋಗಿತ್ತು. ಹುಲಿಯು ರೈತನ ಒಂದು ಕಾಲು, ದೇಹದ ಕೆಲ ಭಾಗ ತಿಂದು ಹಾಕಿದೆ. ಮತ್ತೆ ಅದೇ ಸ್ಥಳಕ್ಕೆ ಹುಲಿ ಬರುವ ಸಾಧ್ಯತೆ ಹಿನ್ನೆಲೆ ಅರಣ್ಯ ಇಲಾಖೆ ಅಲರ್ಟ್ ಆಗಿದೆ. ಹುಲಿ ಸೆರೆಗೆ ಕಾರ್ಯಾಚರಣೆ ನಡೆಸುತ್ತಿದೆ.

ಹುಲಿ ದಾಳಿಯ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಹಶೀಲ್ದಾರ್ ಪರಶಿವಮೂರ್ತಿ, ಪಿಎಸ್‌ಐ ನಂದೀಶ್‌ ಕುಮಾರ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಪೊಲೀಸ್ ಸಿಬ್ಬಂದಿಗಳಾದ ನಾಗನಾಯಕ, ಇಮ್ರಾನ್ ಅಹಮದ್ಮ ಕೃಷ್ಣ, ಆನಂದ್, ಬಿ.ಮಟಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಜಿ.ಅಜಿತ್‌ಕುಮಾರ್, ಸದಸ್ಯರಾದ ದೇವದಾಸ್, ಕುರ್ಣೇಗಾಲ ಬೆಟ್ಟಸ್ವಾಮಿ, ಕೃಷ್ಣ, ಮುಖಂಡರಾದ ನಾರಾಯಣ ನಾಯ್ಕ, ಹೇಮಾಜಿನಾಯ್ಕ, ರಮೇಶ್, ರಾಮು, ಚಂದ್ರ, ಶಿವಾಜಿ ನಾಯ್ಕ, ಸುಂದರ, ಸುರೇಶ್, ಸಿದ್ದಯ್ಯ ಹಾಜರಿದ್ದರು. ಮೈಸೂರು ಅರಣ್ಯ ಅಧಿಕಾರಿಗಳಿಗೆ ಹುಲಿ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ರಾಂಪುರ ಕ್ಯಾಂಪ್ ನಿಂದ ಬಂದ ಪಾರ್ಥ ಹಾಗೂ ಧರ್ಮ ಆನೆಗಳ ಮೂಲಕ ಹುಲಿ ಕೂಂಬಿಂಗ್ ನಡೆಯುತ್ತಿದೆ. ಕಾಡಂಚಿನ ವಿವಿಧ ಗ್ರಾಮಗಳ ಜಮೀನಿನಲ್ಲಿ ಹುಲಿ ಓಡಾಟ ಶುರುಮಾಡಿದೆ ಎಂಬ ಮಾಹಿತಿ ಸಿಕ್ಕಿದ್ದು ಒಂದು ಕಡೆ ಹೆಜ್ಜೆ ಗುರುತು ಕಾಣಿಸಿದೆ ಅಂತ ಸಿಬ್ಬಂದಿಗಳು ಆ ಸ್ಥಳಕ್ಕೆ ಹೋದ್ರೆ ಮತ್ತೊಂದು ಸ್ಥಳದಲ್ಲಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದೆ. ಹುಲಿ ಒಂದು ದಿನ ಬಂಡೀಪುರ ಕಾಡಿನಲ್ಲಿದ್ರೆ‌ ಮತ್ತೊಂದು ದಿನ ಕಾಡಂಚಿನ ಪ್ರದೇಶದ ಜಮೀನಲ್ಲಿ ಕಾಣಿಸಿಕೊಳ್ಳುತ್ತಿದೆ. ಸದ್ಯ ಇದಕ್ಕಾಗಿ ಇಲಾಖೆ ಸಿಬ್ಬಂದಿಗಳು 30 ಕ್ಕು ಹೆಚ್ಚು ಕ್ಯಾಮರಾ ಟ್ರಾಪ್ ಗಳನ್ಜು ಅಳವಡಿಸಿ ಹುಲಿ ಜಾಡು ಹಿಡಿಯಲು ಮುಂದಾಗಿದ್ದಾರೆ. ಮೈಸೂರಿನ ಜನರಿಗೆ ಹುಲಿ ಕಾಟ ಹೆಚ್ಚಾಗಿದ್ದು ಪ್ರತಿ ದಿನ ದನಮ ಮೇಕೆ, ಮನುಷ್ಯರ ಮೇಲೆ ಹುಲಿ ದಾಳಿ ನಡೆಸುತ್ತಿದೆ.

ಜನತಾ ದರ್ಶನದಲ್ಲಿ ಮನೆಗಾಗಿ ಮೊರೆ ಇಟ್ಟ ವಿಶೇಷ ಚೇತನ ಮಹಿಳೆ: ಇದಕ್ಕೆ ಸಚಿವ ಲಾಡ್ ಹೇಳಿದ್ದೇನು..?

ಮಳೆಗೆ ಧನ್ಯವಾದ ತಿಳಿಸಿದ ಸಚಿವ ಲಾಡ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ..!

‘ಕುಮಾರಸ್ವಾಮಿಯವರು ಇಲ್ಲಿ ಬರುತ್ತಿರುವುದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ’

About The Author