Friday, December 5, 2025

Latest Posts

‘ಪ್ರಚಾರದ ಕಾರಣಕ್ಕಾಗಿ ಬರ ಅಧ್ಯಯನ ಮಾಡುವುದರಿಂದ ಬಂದ ಭಾಗ್ಯವೇನು?’

- Advertisement -

Political News: ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬರ ಅಧ್ಯಯನ ಮಾಡುತ್ತಿರುವ ಕಾರಣಕ್ಕೆ, ಡಿಕೆಶಿ ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದ್ದಾರೆ. ಅಧಿಕಾರ ಇಲ್ಲದಿದ್ದರೂ ಬಿಜೆಪಿ, ಜೆಡಿಎಸ್ ರೈತರ ಮೇಲೆ ಅನುಕಂಪ ತೋರುತ್ತಿದೆ. ಪ್ರಚಾರದ ಕಾರಣಕ್ಕಾಗಿ ಬರ ಅಧ್ಯಯಮ ಮಾಡುವುದರಿಂದ ಬಂದ ಭಾಗ್ಯವೇನು ಅಂತಾ ಡಿಕೆಶಿ ಪ್ರಶ್ನಿಸಿದ್ದಾರೆ. ಇನ್ನು ಅವರು ಟ್ವೀಟ್‌ನಲ್ಲಿ ಹೀಗೆ ಬರೆದಿದ್ದಾರೆ.

ಅಧಿಕಾರ ಇಲ್ಲದ ಸಮಯದಲ್ಲೂ ಬಿಜೆಪಿ ಹಾಗೂ ಜೆಡಿಎಸ್‌ನವರು ರೈತರ ಮೇಲೆ ತುಂಬಾ ಅನುಕಂಪ ಇಟ್ಟು ಬರ ಅಧ್ಯಯನಕ್ಕೆ ಹೊರಟಿದ್ದಾರೆ. ಆದರೆ ಈಗಾಗಲೇ ಕರ್ನಾಟಕ ಸರ್ಕಾರ ವಿಸ್ತೃತ ಅಧ್ಯಯನ ನಡೆಸಿ ಕೇಂದ್ರಕ್ಕೆ ವರದಿ ನೀಡಿದ್ದು, ಕೇಂದ್ರವು ವರದಿ ಸ್ವೀಕರಿಸಿ ಅಧಿಕಾರಿಗಳನ್ನು ಕಳಿಸಿಕೊಟ್ಟಿದೆ. 26 ಜನ ಎಂಪಿಗಳು ದಿಲ್ಲಿಗೆ ಹೋಗಿ ಮೊದಲು ಪ್ರಧಾನಿ ಹಾಗೂ ಸಂಬಂಧಪಟ್ಟ ಮಂತ್ರಿಗಳನ್ನು ಭೇಟಿ ಮಾಡಿ ರಾಜ್ಯದ ರೈತರಿಗೆ ಬರ ಪರಿಹಾರ ಕೊಡಿಸಬೇಕು.ಅದು ಬಿಟ್ಟು ಪ್ರಚಾರದ ಕಾರಣಕ್ಕಾಗಿ ಬರ ಅಧ್ಯಯನ ಮಾಡುವುದರಿಂದ ಬಂದ ಭಾಗ್ಯವೇನು?

ಹಿಂದಿನಿಂದಲೂ ನಡೆದುಕೊಂಡು ಬಂದಿರುವಂತೆ ಬರ ಪರಿಸ್ಥಿತಿಗೆ ಅನುಗುಣವಾಗಿ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಬೇಕು. ಈಗಾಗಲೇ ರಾಜ್ಯ ಸರ್ಕಾರವು 800 ಕೋಟಿ ರೂಪಾಯಿ ಹಣವನ್ನು ಬರ ಪರಿಹಾರಕ್ಕಾಗಿ ನೀಡಿದೆ. 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿ ಎದುರಿಸುತ್ತಿವೆ. ಇಂಥ ಸನ್ನಿವೇಶದಲ್ಲಿ ನರೇಗಾ ಯೋಜನೆಯ ಮಾನವ ದಿನಗಳನ್ನು 150 ದಿನಕ್ಕೆ ವಿಸ್ತರಿಸುವುದು ಕಡ್ಡಾಯ. ಬರ ಬಂದು 2ರಿಂದ 3 ತಿಂಗಳು ಕಳೆದರೂ ಇನ್ನೂ ಕೂಡ ಕೇಂದ್ರ ಯಾವುದೇ ಕ್ರಮ ಕೈಗೊಂಡಿಲ್ಲ.ಬಿಜೆಪಿಯ 26 ಎಂಪಿಗಳು, 65ಜನ ಶಾಸಕರು ಹಾಗೂ ಅವರ ನೆಂಟಸ್ಥನದಲ್ಲಿರುವ ಜೆಡಿಎಸ್‌ನ 19 ಶಾಸಕರು ಕರ್ನಾಟಕದ ರೈತರಿಗೆ ಹಣ ಬಿಡುಗಡೆ ಮಾಡಲು, ನರೇಗಾ ಯೋಜನೆಯ ಮಾನವ ದಿನಗಳನ್ನು ಹೆಚ್ಚಿಸಲು ಕೇಂದ್ರದ ಮೇಲೆ ಒತ್ತಡ ಹೇರಬೇಕು.

ಈ ರೀತಿಯಾಗಿ ಟ್ವೀಟ್ ಮಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಬರಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

- Advertisement -

Latest Posts

Don't Miss