Hubballi Political News: ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರವು (Karnataka Government) ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಅನಿಶ್ಚಿತತೆಗೆ ದೂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಕಿಡಿ ಕಾರಿದ್ದಾರೆ. ರಾಜ್ಯ ಸರ್ಕಾರವು ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನವನ್ನು ಶೇಕಡಾ 85 ರಷ್ಟು ಕಡಿತಗೊಳಿಸಿರುವ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಜೋಶಿ, ರಾಜ್ಯದ ಆರ್ಥಿಕತೆಯ ಬೆಳವಣಿಗೆಯನ್ನು ಕುಂಠಿತಗೊಳಿಸಿದ ನಂತರ ಕಾಂಗ್ರೆಸ್ ಸರ್ಕಾರವು ಈಗ ಕರ್ನಾಟಕದ ವಿದ್ಯಾರ್ಥಿಗಳಿಗೆ ಕರಾಳ ದಿನಗಳ ‘ಗ್ಯಾರಂಟಿ’ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರವಾಗಿ ಹರಿಹಾಯ್ದಿರುವ ಅವರು, ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷವು ಕರ್ನಾಟಕದ ಜನರಿಗೆ ನೀಡಿದ್ದ ವಚನದಂತೆ ‘ಗ್ಯಾರಂಟಿ’ ಯೋಜನೆಗಳೂ ಜನರಿಗೆ ಸಿಗುತ್ತಿಲ್ಲ. ಇತ್ತ ಜನರಿಗೆ ತಲುಪಬೇಕಿದ್ದ ಸರ್ಕಾರದ ಯೋಜನೆಗಳ ಪ್ರಯೋಜನಗಳೂ ಜನರಿಗೆ ತಲುಪುತ್ತಿಲ್ಲ ಎಂದು ಟೀಕಿಸಿದ್ದಾರೆ.
ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನದ ಶೇಕಡಾ 85 ರಷ್ಟನ್ನು ರಾಜ್ಯ ಸರ್ಕಾರ ಕಡಿತಗೊಳಿಸಿದೆ ಎಂಬುದು ತಿಳಿದು ನನಗೆ ಆಘಾತವಾಗಿದೆ ಎಂದಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು, ರಾಜ್ಯ ಸರ್ಕಾರದ ನಡೆ ಬಗ್ಗೆ ಭಾರೀ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Crime News: ಉಡುಪಿ ತಾಯಿ- ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆ ಬಂಧನ
‘ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಅವರು ರಾಜೀನಾಮೆ ಕೊಡಲಿ’
ಸಾಕು ನಾಯಿ ಕಚ್ಚಿದ ಪ್ರಕರಣ: 15 ನಿಮಿಷ ವಿಚಾರಣೆಗೆ ಹಾಜರಾದ ನಟ ದರ್ಶನ್




