Monday, January 6, 2025

Latest Posts

‘ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲೂ ಆಗಿದೆ’

- Advertisement -

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲು ಆಗಿದೆ. ಹಾಗಾಗಿಯೇ ಅಲ್ಲಿ 80 ವರ್ಷ ವಯಸ್ಸು ದಾಟಿದವರಿಗೂ ಟಿಕೆಟ್ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ಹೀನಾಯ ಸ್ಥಿತಿಗೆ ತಲುಪಿದೆ. ರಿಪೇರಿ ಮಾಡಲಾರದಷ್ಟು ವ್ಯವಸ್ಥೆ ಹದಗೆಟ್ಟು ಹೋಗಿದೆ. ವಿಜಯೇಂದ್ರ ಪದಗ್ರಹಣಕ್ಕೆ ಯಾವೊಬ್ಬ ಕೇಂದ್ರ ನಾಯಕರು ಬಂದಿರಲಿಲ್ಲ. ವೀಕ್ಷಕರು ಸಹ ಬಂದಿರಲಿಲ್ಲ. ರಾಜ್ಯ ಬಿಜೆಪಿ ಪರಿಸ್ಥಿತಿಗೆ ಇದೇ ಸಾಕ್ಷಿ. ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿರೋದು ಅವರಿಗೆ ಬಿಟ್ಟ ವಿಚಾರ. ಒಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಬೇಕಿತ್ತು, ವಿಜಯೇಂದ್ರರನ್ನು ಮಾಡಿದ್ದಾರೆ. ಆದರೆ ರಾಜ್ಯಾಧ್ಯಕ್ಷ ಸ್ಥಾನಕಾಂಕ್ಷಿಗಳು ಯಾರೂ ಪದಗ್ರಹಣಕ್ಕೆ ಹೋಗಲಿಲ್ಲ. ಒಮ್ಮೆ ನೇಮಕವಾದ ಮೇಲೆ ಎಲ್ಲರೂ ಕೂಡಿ ಕೆಲಸ ಮಾಡಬೇಕೆಂಬ ಮನೋಭಾವ ಬರಬೇಕಿತ್ತು. ಹೀಗಾಗಿ ಬಿಜೆಪಿಯ ಒಳ ಜಗಳ ಎಲ್ಲಿಗೆ ಹೋಗಿ ಮುಟ್ಟುತ್ತೋ ಗೊತ್ತಿಲ್ಲ. ಎಲ್ಲವನ್ನು ಕಾದು ನೋಡಿ, ಮುಂದೆ ನಿಮಗೆ ಗೊತ್ತಾಗುತ್ತೆ ಎಂದು ಶೆಟ್ಟರ್ ಹೇಳಿದ್ದಾರೆ.

ಬಿಜೆಪಿಯಲ್ಲಿ ಹಿರಿಯರನ್ನು ದೂರವಿಡುವ ಕೆಲಸ ಬಹಳ ಹಿಂದಿನಿಂದಲೂ ನಡೆದಿದೆ. ಪಕ್ಷಕ್ಕಾಗಿ ಸಂಘಟನೆ ಮಾಡಿದವರನ್ನು, ದುಡಿದವರನ್ನು ದೂರವಿಡಲಾಗುತ್ತಿದೆ. ಸದಾನಂದ ಗೌಡರನ್ನು ದೆಹಲಿಗೆ ಕರೆಯಿಸಿ ಮೂರು ದಿನ ಕಾಯಿಸಿದರು. ಐದು ನಿಮಿಷ ಮಾತನಾಡುವಷ್ಟು ಸೌಜನ್ಯವನ್ನು ತೋರಲಿಲ್ಲ. ಬಿಜೆಪಿ ಹಿರಿಯರನ್ನು ನಡೆಸಿಕೊಳ್ಳುವ ರೀತಿಗೆ ಇದೊಂದು ಉದಾಹರಣೆ ಎಂದು ಶೆಟ್ಟರ್ ಹೇಳಿದ್ದಾರೆ.

ಎಲ್ ಕೆ ಅಡ್ವಾಣಿ, ಮುರುಳಿಮನೋಹರ ಜೋಷಿ ಮೊದಲಾದವರಿಗೆ ರಾಜಕೀಯ ನಿವೃತ್ತಿ ಕೊಟ್ಟುಬಿಟ್ಟರು.
ನನಗೆ, ಲಕ್ಷ್ಮಣ್ ಸವದಿ ಮತ್ತು ಈಶ್ವರಪ್ಪಗೆ ಕರ್ನಾಟಕದಲ್ಲಿ ಟಿಕೆಟ್ ಕೊಡಲಿಲ್ಲ. ನನಗೆ ಟಿಕೆಟ್ ತಪ್ಪಿಸಲು ಏನು ಕಾರಣ ಅಂತ ಇದುವರೆಗೂ ಹೇಳಿಲ್ಲ. ಇದರ ಪರಿಣಾಮ ಏನಾಯ್ತು ಅಂತ ಇಡೀ ಜಗತ್ತಿಗೆ ಗೊತ್ತಿದೆ. ಬಿಜೆಪಿ ವರಿಷ್ಠರಿಗೆ ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಅನ್ನೋ ಆಸೆ. ಆದರೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿತು ಎಂದಿದ್ದಾರೆ.

ಹೀಗಾಗಿ ಪಂಚ ರಾಜ್ಯಗಳ ಚುನಾವಣೆಯಲ್ಲಿ ಹಿರಿಯರಿಗೆ ಮಣೆ ಹಾಕಲಾಗಿದೆ. 70 – 75 ವಯಸ್ಸಾದಂತವರಿಗೂ ಟಿಕೆಟ್ ನೀಡಲಾಗಿದೆ. ಅವರಿಗೆ ಯಾಕೆ ಟಿಕೆಟ್ ಕೊಟ್ಟರು..? ನಿಯಮ ಎಲ್ಲರಿಗೂ ಒಂದೇ ಅನ್ವಯ ಆಗಬೇಕಲ್ಲವೇ..? ಸಅಧಿಕಾರ ಆಸೆಯಲ್ಲಿ ಎಲ್ಲ ನಿಯಮಗಳನ್ನು ಗಾಳಿಗೆ ತೂರುತ್ತಾರೆ. ವಯಸ್ಸಿನ ನೆಪದಲ್ಲಿ ಅಡ್ವಾಣಿ, ಮುರಳಿ ಮನೋಹರ್ ಜೋಶಿಯವರನ್ನು ಮನೆಗೆ ಕಳಿಸಿದ್ರು. ಈಗ ನೋಡಿದರೆ 80 ವರ್ಷ ಆದವರಿಗೂ ಟಿಕೆಟ್ ಕೊಟ್ಟಿದ್ದಾರೆ. ಜಗದೀಶ್ ಶೆಟ್ಟರ್ ಎಫೆಕ್ಟ್ ಪಂಚ ರಾಜ್ಯಗಳಲ್ಲಿಯೂ ಆಗಿದೆ.
ಹಾಗಾಗಿ ವಯಸ್ಸು ದಾಟಿದರೂ ಟಿಕೆಟ್ ನೀಡಲಾಗಿದೆ ಎಂದು ಶೆಟ್ಟರ್ ಮತ್ತೊಮ್ಮೆ ಹೇಳಿದರು.

ನನ್ನ ಪಕ್ಷಾಂತರದ ಎಫೆಕ್ಟ್ ತಿಳಿದುಕೊಂಡು ಮೂರ್ನಾಲ್ಕು ಮಾಜಿ ಸಿಎಂ ಗಳಿಗೆ ಟಿಕೆಟ್ ಕೊಟ್ಟಿದ್ದಾರೆ.
ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವುದರಿಂದ ಏನೂ ಆಗಲ್ಲ. ಬಿಜೆಪಿ ಕುಸಿದಿರುವ ಸಂದರ್ಭದಲ್ಲಿ ಹೆಚ್ಚಿನ ಶಕ್ತಿ ತೋರಿಸಲು ಸಾಧ್ಯವಿಲ್ಲ. ಬಿಜೆಪಿ ಕಾರ್ಯಕರ್ತರು ಧೃತಿಗೆಟ್ಟಿದ್ದಾರೆ, ಭರವಸೆ ಕಳೆದುಕೊಂಡಿದ್ದಾರೆ.
ನಾಯಕನಿಲ್ಲದ ಪಕ್ಷ ಅನ್ನೋ ಕೊರಗು ಅವರನ್ನು ಕಾಡ್ತಿದೆ. ಆಪರೇಷನ್ ಕಮಲ ಪ್ರಕ್ರಿಯೆ ನಡೆದೆ ಇದೆ.
ಈ ರೀತಿ ಮಾಡಿದ್ರೆ ಕೈ ಶಾಸಕರು ತಮ್ಮ ಪಕ್ಷಕ್ಕೆ ಬರ್ತಾರೆ ಅನ್ನೋ ಭ್ರಮೆಯಲ್ಲಿದ್ದಾರೆ. ಆಪರೇಷನ್ ಕಮಲ ಪ್ರಯತ್ನ ಸಫಲವಾಗಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ: ಹೆಚ್.ಡಿ.ಕುಮಾರಸ್ವಾಮಿ

ನಮ್ಮ ಹುಡುಗರ ಆಟವು ಚಂದ, ಗೆಲವಿನ ಹಠವೂ ಬಲು ಚಂದ: ಕ್ರಿಕೇಟ್‌ ತಂಡಕ್ಕೆ ಅಭಿನಂದಿಸಿದ ಡಿಕೆಶಿ

ಧಾರವಾಡದಲ್ಲಿ ಬಿಜೆಪಿ ಭಿನ್ನಮತ, ಆಹ್ವಾನವಿದ್ದರೂ ಕಾರ್ಯಕ್ರಮಕ್ಕೆ ಗೈರಾದ ನಾಯಕರು

- Advertisement -

Latest Posts

Don't Miss