Bengaluru News: ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 14 ವರ್ಷದ ರಾಮ ಎಂಬ ಹೆಸರಿನ ಸಿಂಹ ಸಾವನ್ನಪ್ಪಿದೆ. ಸಿಂಹವು ಬಹು ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದೆ ಎಂದು ಬಿಬಿಎಂಪಿ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. ಅಲ್ಲದೆ, ಪಶುವೈದ್ಯರು ಚಿಕಿತ್ಸೆ ನೀಡಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎಂದಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಬಿಬಿಎಂಪಿ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯ ಸೇನ್, ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 14 ವರ್ಷದ ಸಿಂಹ ಸಾವನ್ನಪ್ಪಿದೆ. ಸಿಂಹಕ್ಕೆ ಬುಧವಾರ ಸಂಜೆ ವಾಂತಿ ಸಂಬಂಧಿತ ಲಕ್ಷಣಗಳನ್ನು ಕಾಣಿಸಿಕೊಂಡಿದೆ ಮತ್ತು ಬಹು ಅಂಗಾಂಗ ವೈಫಲ್ಯದಿಂದ ಗುರುವಾರ ಸಾವನ್ನಪ್ಪಿದೆ ಎಂದು ತಿಳಿಸಿದ್ದಾರೆ.
ಪಶುವೈದ್ಯರ ತಂಡದಿಂದ ಉತ್ತಮ ಆರೈಕೆಯನ್ನು ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಿಂಹ ಮೃತಪಟ್ಟಿದೆ. ಮರಣೋತ್ತರ ಪರೀಕ್ಷೆ ವೇಳೆ ಬಹು ಅಂಗಾಂಗ ವೈಫಲ್ಯಗಳಾಗಿರುವುದು ತಿಳಿದುಬಂದಿದೆ ಮತ್ತು ಸಾವಿಗೆ ಇದೇ ಕಾರಣ ಎಂದು ಶಂಕಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸದ್ಯ, ಒಳಾಂಗಗಳ ಮಾದರಿಗಳನ್ನು ಪರೀಕ್ಷೆಗಾಗಿ ಇನ್ಸ್ಟಿಟ್ಯೂಟ್ ಆಫ್ ಅನಿಮಲ್ ಹೆಲ್ತ್ ಆ್ಯಂಡ್ ವೆಟರ್ನರಿ ಬಯಾಲಜಿಕಲ್ಸ್ ಲ್ಯಾಬ್ಗೆ ಕಳುಹಿಸಲಾಗಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗಣೇಶ ಮತ್ತು ಅನು ಜೋಡಿ ಒಟ್ಟು 12 ಮರಿಗಳನ್ನು ಹೊಂದಿತ್ತು. ಈ ಪೈಕಿ ರಾಮ ಕೂಡ ಒಬ್ಬನಾಗಿದ್ದ. ಈತ 2010 ರ ಫೆಬ್ರವರಿ 4 ರಂದು ರಾಮ ಜನಿಸಿದ್ದನು.
ಧಾರವಾಡದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಸಾವಿರಾರು ಜನ ಅನೇಕ ತಿಂಗಳಿಂದ ರೇಷನ್ ಪಡೆದೇ ಇಲ್ಲ!
ಉಂಡ ಮನೆಗೆ ದ್ರೋಹ ಜ್ಯುವೆಲ್ಲರಿ ಶಾಪ್ನಿಂದ ಕೆಜಿ ಕೆಜಿ ಚಿನ್ನ, ಬೆಳ್ಳಿ ಕದ್ದ ಮನೆ ಕೆಲಸದಾಳು

