Political News: ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ಕರೆದು, ಸಿಎಂ ಸಿದ್ದರಾಮಯ್ಯ ಮತ್ತು ಅವರ ಮಗ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಟ್ವೀಟ್ ಮಾಡಿ, ಆಕ್ರೋಶ ವ್ಯಕ್ತಪಡಿಸಿದ್ದರು. ಕುಮಾರಸ್ವಾಮಿ ಸುಳ್ಳು ಹೇಳುತ್ತಾರೆ. ಸುಳ್ಳೇ ಅವರ ಮನೆದೇವರು. ನನ್ನ ಮಗ ಯತೀಂದ್ರ ಕ್ಷೇತ್ರದ ಅಭಿವೃದ್ಧಿಗೆ ಕಷ್ಟಪಡುತ್ತಿದ್ದಾರೆ. ಆದರೆ ಕುಮಾರಸ್ವಾಮಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆಂದು ಹೇಳಿದ್ದರು.
ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿ, ಆದೇಶವೊಂದರ ಪ್ರತೀಯನ್ನು ಲಗತ್ತಿಸಿ, ಸಿಎಂ ಸಿದ್ದರಾಮಯ್ಯ ಮತ್ತು ಅವರ ಮಗ ಯತೀಂದ್ರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ.
ಸತ್ಯ ಹೇಳಿದರೆ ಗುಂಪುಗುಂಪಾಗಿ ಮೇಲೆ ಬೀಳುತ್ತೀರಿ.. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್ & ರನ್ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ.
ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. ‘ವರ್ಗಾವರ್ಗಿ ಬಜೆಟ್’ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! ‘ಕಾಸಿಗಾಗಿ ಹುದ್ದೆ& ಕಾಂಗ್ರೆಸ್ ಹುಂಡಿ’ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-TCM ನಿರ್ಮಾಪಕ, ಡೂಪ್ಲಿಕೇಟ್ ಸಿಎಂ-DCM ನಿರ್ದೇಶಕ.. ಹೇಗಿದೆ?
ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ… ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ.. ನಾಚಿಕೆ ಆಗಬೇಕು.
ಈ ರೀತಿಯಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಟ್ವೀಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ.
ಸತ್ಯ ಹೇಳಿದರೆ ಗುಂಪುಗುಂಪಾಗಿ ಮೇಲೆ ಬೀಳುತ್ತೀರಿ.. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್ & ರನ್ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ.6/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 18, 2023
ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. 'ವರ್ಗಾವರ್ಗಿ ಬಜೆಟ್'ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! 'ಕಾಸಿಗಾಗಿ ಹುದ್ದೆ& ಕಾಂಗ್ರೆಸ್ ಹುಂಡಿ' ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-TCM ನಿರ್ಮಾಪಕ, ಡೂಪ್ಲಿಕೇಟ್ ಸಿಎಂ-DCM ನಿರ್ದೇಶಕ.. ಹೇಗಿದೆ? 5/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 18, 2023
ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ…
ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ.. ನಾಚಿಕೆ ಆಗಬೇಕು. 1/6#ಕಾಸಿಗಾಗಿಹುದ್ದೆ #CashForPosting pic.twitter.com/Ss55GDJmr0— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 18, 2023
ತುಮಕೂರು ತಾಲೂಕು ಕಚೇರಿಗೆ ಸಚಿವರ ಧಿಡೀರ್ ಭೇಟಿ: ಕಕ್ಕಾಬಿಕ್ಕಿಯಾದ ಅಧಿಕಾರಿಗಳು
‘ಪ್ರಧಾನಿ ಮೋದಿಯವರ ಈ ನಡೆಯನ್ನು ರಾಜಕೀಯ ಇಬ್ಬಂದಿತನ ಎಂದು ಕರೆಯದೆ ಬೇರೇನು ಹೇಳಬೇಕು?’
‘ಕುಮಾರಸ್ವಾಮಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನೂ ತಿಳಿದಿಲ್ಲ. ಸುಳ್ಳೇ ಅವರ ಮನೆದೇವರು’




