Davanagere News: ದಾವಣಗೆರೆ: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ 2ನೇ ಪ್ರಕರಣದಲ್ಲಿ ಪೊಲೀಸರು ಮುರುಘಾ ಮಠದ ಶಿವಮೂರ್ತಿ ಶರಣರ ಬಂಧಿಸಿದ್ದಾರೆ.
ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯದ ಅರೆಸ್ಟ್ ವಾರೆಂಟ್ ಜಾರಿ ಮೇರೆಗೆ, ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಮುರುಘಾಶ್ರಿಯನ್ನು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.
ಮಧ್ಯಾಹ್ನ ೧೨ರ ವೇಳೆಗೆ ಬಂಧನದ ವಾರೆಂಟ್ ಹೊರಬಿದ್ದಿತು. ಆದೇಶ ಪ್ರತಿ ಪಡೆದ ಚಿತ್ರದುರ್ಗ ಪೊಲೀಸರು ಮಧ್ಯಾಹ್ನ ೩ ವೇಳೆಗೆ ದಾವಣಗೆರೆಗೆ ಆಗಮಿಸಿ ಶರಣರನ್ನು ಬಂಧಿಸಿ ಕರೆದೊಯ್ದರು. ಚಿತ್ರದುರ್ಗ ತಲುಪುತ್ತಿದ್ದಂತೆ ಶರಣರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂಬ ಮಾಹಿತಿ ಇದೆ. ಈ ನಡುವೆ ಎರಡನೇ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಹೇಳಿರುವ ಶರಣರ ಪರ ವಕೀಲರು ಈ ಅಂಶವನ್ನು ಮುಂದಿಟ್ಟುಕೊಂಡು ಬಂಧನದ ಆದೇಶ ರದ್ದುಪಡಿಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಸಂಜೆ ೪ ರ ವೇಳೆಗೆ ವಿಚಾರಣೆಗೆ ಬರಲಿದೆ.
ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಚಿತ್ರದುರ್ಗದ ಮುರುಘಾಶ್ರೀಗೆ 2ನೇ ಪೋಕ್ಸೋ ಪ್ರಕರಣದಲ್ಲಿ, ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುರುಘಾ ಶರಣರ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ 1ನೇ ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷಕ್ಕಿಂತ ಹೆಚ್ಚು ಕಾಲ ಜೈಲಿನಲ್ಲಿದ್ದು, ಆಚೆ ಬಂದಿರುವ ಮುರುಘಾಶ್ರೀಗಳನ್ನು ಮತ್ತೆ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಕೋರ್ಟ್ ಅರೆಸ್ಟ್ ವಾರೆಂಟ್ ಆದೇಶದ ಪ್ರತಿಪಡೆದುಕೊಂಡ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ನೇರವಾಗಿ ದಾವಣಗೆರೆಯ ಮಠಕ್ಕೆ ತೆರಳಿ ಮುರುಘಾಶ್ರೀಗಳನ್ನು ಬಂಧಿಸಿದ್ದಾರೆ.
ಪ್ರಕರಣವೇನು?: ಚಿತ್ರದುರ್ಗ ಮಠದ ವಸತಿ ಶಾಲೆಯ ಬಾಲಕಿಯರಿಬ್ಬರು ಆಗಸ್ಟ್ 26ರಂದು ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ, ಮೈಸೂರಿನ ನಜರಬಾದ್ ಪೊಲೀಸ್ ಠಾಣೆಗೆ ತೆರಳಿ ಶರಣರ ವಿರುದ್ಧ ದೂರು ನೀಡಿದ್ದರು. ಮಕ್ಕಳ ಕಲ್ಯಾಣ ಸಮಿತಿ ಎದುರು ಸಂತ್ರಸ್ತ ಬಾಲಕಿಯರನ್ನು ಹಾಜರುಪಡಿಸಿ ಹೇಳಿಕೆ ಪಡೆದ ಬಳಿಕ ಶರಣರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಆ ನಂತರದ ಬೆಳವಣಿಗೆಯಲ್ಲಿ ಪ್ರಕರಣವನ್ನು ಮೈಸೂರಿನಿಂದ ಚಿತ್ರದುರ್ಗದ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿತ್ತು. ಪ್ರಕರಣದಲ್ಲಿ ಸ್ವಾಮೀಜಿ, ವಾರ್ಡನ್, ಕಾರ್ಯದರ್ಶಿ, ವಕೀಲ, ಮಠದ ಉತ್ತರಾಧಿಕಾರಿ ಸೇರಿ ಐವರ ವಿರುದ್ಧ ಆರೋಪ ಮಾಡಲಾಗಿತ್ತು. ಬಳಿಕ ಪೊಕ್ಸೊ ಪ್ರಕರಣದ ಅಡಿಯಲ್ಲಿ ಮುರುಘಾ ಶರಣರನ್ನು 2022ರ ಸೆಪ್ಟೆಂಬರ್ 1ರಂದು ಚಿತ್ರದುರ್ಗ ಪೊಲೀಸರು ಬಂಧಿಸಿದ್ದರು.
‘ಪೆನ್’ಡ್ರೈವ್ ಇದೆ, ಕಳೆದಿಲ್ಲ. ಅದನ್ನು ತೋರಿಸಿದೊಡನೆ ನನ್ನಲ್ಲಿಗೆ ಓಡಿ ಬಂದವರ ಪಟ್ಟಿ ಕೊಡಲೇ?’
ಕರ್ನಾಟಕ ಬಿಜೆಪಿಗೆ ದಕ್ಷಿಣ ಭಾರತದ ಭದ್ರಕೋಟೆಯಾಗಿ ಪರಿವರ್ತನೆಗೆ ಶ್ರಮ: ವಿಜಯೇಂದ್ರ ಯಡಿಯೂರಪ್ಪ