ಕಾರು ಅಪಘಾತ: ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪಆಸ್ಪತ್ರೆಗೆ ದಾಖಲು

Political News: ವಿಜಯಪುರ: ಕೆಪಿಸಿಸಿ ಮಹಿಳಾ ಘಟಕದ ಉಪಾಧ್ಯಕ್ಷೆಯೂ ಆಗಿರುವ ಬಾಗಲಕೋಟೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಕಾರು ಅಪಘಾತಕ್ಕೀಡಾಗಿದೆ.

ಅಪಘಾತದಲ್ಲಿ ವೀಣಾ ಕಾಶಪ್ಪನವರ ಹಾಗೂ ಕಾರನಲ್ಲಿದ್ದ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭಾಗಿಯಾಗಿದ್ದ ಅಖಿಲ ಭಾರತ 70 ನೇ ಸಹಕಾರ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ವಾಪಾಸ್ಸಾಗುತ್ತಿದ್ದ ವೇಳೆಯಲ್ಲಿ ಅಪಘಾತ ಸಂಭವಿಸಿದೆ.

ವಿಜಯಪುರ ನಗರದ ಸಿಂದಗಿ ಬೈಪಾಸ್ ಬಳಿ ಈ ಅಫಘಾತ ನಡೆದಿದ್ದು, ಬೈಕ್ಗೆ ಡಿಕ್ಕಿ ತಪ್ಪಿಸಲು ಹೋಗಿ ಮುಂದಿನ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಫಘಾತ ಸಂಭವಿಸಿದೆ. ಗಾಯಗೊಂಡಿರುವ ವೀಣಾ ಅವರನ್ನು ವಿಜಯಪುರ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಡಿದ ಮತ್ತಿನಲ್ಲಿ ಚಾಕು ಹಿಡಿದು ಓಡಾಟ – ಸ್ಥಳೀಯರಿಗೆ ಬೆದರಿಕೆ ಹಾಕುವ ದೃಶ್ಯ ಸೆರೆ

ಇಸ್ರೇಲ್‌ಗೆ ಪಾಕ್ ಸಪೋರ್ಟ್: ಹಮಾಸ್ ವಿರುದ್ಧ ಶಸ್ತ್ರಾಸ್ತ್ರ ಸರಬರಾಜು..?

World Cup 2023ಯಲ್ಲಿ ಭಾರತಕ್ಕೆ ಸೋಲು: ಟಿವಿ ಮುಂದೆ ಕುಸಿದು ಬಿದ್ದು ಅಭಿಮಾನಿ ಸಾವು

About The Author