Saturday, April 19, 2025

Latest Posts

ಒಣಗಿದ ಬೆಳೆ ತಂದು ಡಿಸಿಗೆ ತೋರಿಸಿದ ಜೆಡಿಎಸ್ ಬರ ಅಧ್ಯಯನ ತಂಡ

- Advertisement -

Dharwad News: ಧಾರವಾಡ: ಬರಗಾಲದ ಹಿನ್ನೆಲೆಯಲ್ಲಿ ಮಾಜಿ ಸಚಿವ ಹನುಮಂತಪ್ಪ ಅಲ್ಕೋಡ ನೇತೃತ್ವದಲ್ಲಿ ಜೆಡಿಎಸ್ ಬರ ಅಧ್ಯಯನ ತಂಡವು ಧಾರವಾಡ ಜಿಲ್ಲೆಯ ವಿವಿಧ ಊರುಗಳಿಗೆ ತೆರಳಿ ಬರ ಅಧ್ಯಯನ ನಡೆಸಿದ್ದಾರೆ. ಬರ ಅಧ್ಯಯನಕ್ಕೆಂದು ಹೋದ ಊರುಗಳಲ್ಲಿನ ಒಣಗಿದ ಬೆಳೆಯನ್ನು ತಂದು ಜಿಲ್ಲಾಧಿಕಾರಿಗೆ ಈ ತಂಡ ತೋರಿಸಿದೆ.

ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟ ಪರಿಣಾಮ ರೈತ ಬೆಳೆದ ಬೆಳೆಗಳೆಲ್ಲ ನೀರಿಲ್ಲದೇ ಒಣಗಿವೆ. ರೈತ ತೀವ್ರ ಸಂಕಷ್ಟದಲ್ಲಿದ್ದಾನೆ. ಇದುವರೆಗೂ ರೈತರಿಗೆ ಬೆಳೆ ಪರಿಹಾರ ಸಿಕ್ಕಿಲ್ಲ. ಬೆಳೆವಿಮೆ ಕೂಡ ಸಿಕ್ಕಿಲ್ಲ. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ವಿದ್ಯುತ್ ಸಮರ್ಪಕವಾಗಿ ಪೂರೈಕೆಯಾಗದೇ ಬೆಳೆಗಳಿಗೆ ನೀರು ಹಾಯಿಸಲು ಆಗುತ್ತಿಲ್ಲ ಎಂದು ಜಿಲ್ಲಾಧಿಕಾರಿಗೆ ರೈತರ ಸಂಕಷ್ಟ ಮನವರಿಕೆ ಮಾಡಿಕೊಟ್ಟರು.

ರಾಜ್ಯ ಕಾಂಗ್ರೆಸ್ ಸರ್ಕಾರ ರೈತರಿಗೆ 8 ಗಂಟೆ ವಿದ್ಯುತ್ ಕೊಡುತ್ತೇವೆ ಎಂದು ಹೇಳಿ ಕೇವಲ 5 ಗಂಟೆ ಮಾತ್ರ ವಿದ್ಯುತ್ ಕೊಡುತ್ತಿದೆ. ಸುಳ್ಳು ಗ್ಯಾರಂಟಿಗಳನ್ನು ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ರೈತರ ಬಗ್ಗೆ ಶೀಘ್ರ ಕಾಳಜಿ ವಹಿಸಬೇಕು. ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವರಿಕೆ ಮಾಡಿ ಪರಿಹಾರ ತರಬೇಕು ಇದ್ದಲ್ಲೇ ಪರಿಹಾರ ಬರೋದಿಲ್ಲ. ಈಗಾಗಲೇ ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬರ ಅಧ್ಯಯನ ನಡೆಸಿದ್ದು, ಈ ವರದಿಯನ್ನು ಕುಮಾರಸ್ವಾಮಿ ಅವರಿಗೆ ಸಲ್ಲಿಸಲಿದ್ದೇವೆ. ಈ ಬಗ್ಗೆ ಸದನದ ಒಳಗೂ ಮತ್ತು ಹೊರಗೂ ನಾವು ಪ್ರತಿಭಟನೆ ನಡೆಸುತ್ತೇವೆ ಎಂದು ಜೆಡಿಎಸ್ ಮುಖಂಡರು ಎಚ್ಚರಿಸಿದರು.

ಕುಡಿದ ಮತ್ತಿನಲ್ಲಿ ಚಾಕು ಹಿಡಿದು ಓಡಾಟ – ಸ್ಥಳೀಯರಿಗೆ ಬೆದರಿಕೆ ಹಾಕುವ ದೃಶ್ಯ ಸೆರೆ

ಇಸ್ರೇಲ್‌ಗೆ ಪಾಕ್ ಸಪೋರ್ಟ್: ಹಮಾಸ್ ವಿರುದ್ಧ ಶಸ್ತ್ರಾಸ್ತ್ರ ಸರಬರಾಜು..?

World Cup 2023ಯಲ್ಲಿ ಭಾರತಕ್ಕೆ ಸೋಲು: ಟಿವಿ ಮುಂದೆ ಕುಸಿದು ಬಿದ್ದು ಅಭಿಮಾನಿ ಸಾವು

- Advertisement -

Latest Posts

Don't Miss