ರಾಜಕಾರಣ ಯಾವ್ದೇ ಮನೆತನಕ್ಕೆ ಸಿಮೀತವಲ್ಲ – ವಿಜಯೇಂದ್ರ ಆಯ್ಕೆಗೆ ಸೋಮಣ್ಣ ಅಸಮಾಧಾನ

Political News: ಮೈಸೂರು: ಹೈಕಮಾಂಡ್ ಸೂಚನೆಯನ್ನ ತಲೆ ಮೇಲೆ ಹೊತ್ತು ದುಡಿಮೆ ಮಾಡಿದ ಮೇಲೆ ಯಾವ ರೀತಿ ನನಗೆ ಹೊಡೆತ ಆಯ್ತು ಅನ್ನೋದನ್ನ, ಡಿಸೆಂಬರ್ 6ರ ನಂತರ ಹೇಳ್ತೀನಿ. ಬಿಡಿಬಿಡಿಯಾಗಿ ವಿವರಿಸ್ತೀನಿ ಎಂದು ಮಾಜಿ ಸಚಿವ ವಿ.ಸೋಮಣ್ಣ (V Somanna) ಹೇಳಿದ್ದಾರೆ.

ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿ ಮುದುಕಿ ಕಥೆ ಆಗಿದೆ. ಡಿಸೆಂಬರ್ 6ನೇ ತಾರೀಖಿನ ನಂತರ ನನ್ನ ಮನಸ್ಸಿನ ಭಾವನೆಯನ್ನ ಹೇಳುತ್ತೇನೆ, ಬಿಡಿಬಿಡಿಯಾಗಿ ವಿವರಿಸ್ತೀನಿ. ರಾಜಕಾರಣ ದೊಂಬರಾಟ ಅಲ್ಲ. ರಾಜಕಾರಣ ಯಾವುದೇ ಮನೆತನಕ್ಕೆ ಸಿಮೀತವಲ್ಲ. ರಾಜಕಾರಣ ನಾಟಕ ಕಂಪನಿಯೂ ಅಲ್ಲ. ಒಳ ಒಪ್ಪಂದಕ್ಕೆ ಸಿಮೀತವೂ ಅಲ್ಲ ಎಂದು ಬೇಸರ ಹೊರಹಾಕಿದ್ದಾರೆ.

ಇದೇ ವೇಳೆ ಯಡಿಯೂರಪ್ಪ (BS Yediyurappa) ತಮ್ಮನ್ನು ಸಂಪರ್ಕಿಸಿದ್ದಾರಾ ಎಂಬ ಪ್ರಶ್ನೆಗೆ ಸೋಮಣ್ಣ, ನನ್ನನ್ನು ಯಾರೂ ಸಂಪರ್ಕಿಸಿಲ್ಲ. ನಾನು ಯಾರನ್ನೂ ಸಂಪರ್ಕಿಸಿಲ್ಲ. ಆ ತರಹ ಯಾವ ಪ್ರಯತ್ನವೂ ನಡೆದಿಲ್ಲ ಎಂದು ವಿವರಿಸಿದ್ದಾರೆ.

ಅಂತರ ಕಾಯ್ದುಕೊಂಡ ನಾಯಕರು: ಮಾಜಿ ಸಚಿವ ವಿ.ಸೋಮಣ್ಣ ಅವರಿಂದ ಮೈಸೂರು ಬಿಜೆಪಿ ನಾಯಕರು ಅಂತರ ಕಾಯ್ದುಕೊಂಡರು. ಬಿಜೆಪಿಯ ಓರ್ವ ಶಾಸಕ, ಓರ್ವ ಸಂಸದ ಹಾಗೂ ಮಾಜಿ ಶಾಸಕರು ಸೇರಿದಂತೆ ಅನೇಕ ಮುಖಂಡರು ಸೋಮಣ್ಣ ಭೇಟಿಗೆ ಹಿಂದೇಟು ಹಾಕಿದರು. ಸೋಮಣ್ಣ ಕಟ್ಟಾ ಬೆಂಬಲಿಗರು ಬಿಟ್ಟರೆ ಉಳಿದ ಯಾರೂ ಅವರ ಭೇಟಿಗೆ ಮುಂದಾಗಲಿಲ್ಲ. ತಮ್ಮ ಆಪ್ತರೊಂದಿಗೆ ಉಪಾಹಾರ ಸೇವಿಸಿ, ಖಾಸಗಿ ಹೋಟೆಲ್‌ನಲ್ಲಿ ಗೌಪ್ಯ ಮಾತುಕತೆ ನಡೆಸಿದ್ದಾರೆ.

ಮೈಸೂರು ಕೇಂದ್ರ ಕಾರಾಗೃಹದ ಕಾಂಪೌಂಡ್ ಹಿಂಭಾಗ ಗಾಂಜಾ ಮಾರಾಟ, ಅಬಕಾರಿ ಪೊಲೀಸರ ದಾಳಿ

ರಜೌರಿಯಲ್ಲಿ ಗುಂಡಿನ ಚಕಮಕಿ: ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಹುತಾತ್ಮ

Zameer Ahmed Khan ವಾಸ್ತವ್ಯವಿದ್ದ ಹೋಟೆಲ್ ಮೇಲೆ ತಡರಾತ್ರಿ ಪೊಲೀಸರ ದಾಳಿ

About The Author