Tuesday, August 5, 2025

Latest Posts

‘ಲೂಟಿ‌ ಮಾಡುವವರಿಗೆ ಕೊಳ್ಳೆ ಹೊಡೆಯುವವರಿಗೆ ನಮ್ಮ ಸರ್ಕಾರ ಎಂಬುದನ್ನ ನಿರೂಪಿಸಿದ್ದಾರೆ’

- Advertisement -

Political News: ಡಿಸಿಎಂ ಡಿಕೆಶಿ ವಿರುದ್ಧ ಸಿಬಿಐ ಕೇಸ್ ವಾಪಸ್ ವಿಚಾರಕ್ಕೆ ಸಂಬಂಧಿಸಿದಂತೆ, ರಾಮನಗರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿದ್ದು, ಸಿಎಂ ಸಿದ್ದರಾಮಯ್ಯ ವಕೀಲರಾಗಿ, ವಕೀಲ ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ನಿನ್ನೆ ಅವರ ನೇತೃತ್ವದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಸರಿಯಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಹಲವಾರು ಸುಪ್ರೀಂ ಕೋರ್ಟ್ ತೀರ್ಪುಗಳು ನಮ್ಮ ಕಣ್ಣಮುಂದೆ ಇದೆ. ಈಗಾಗಲೇ ಇದೇ ವಿಷಯವಾಗಿ ಎರಡು ಬಾರಿ ಹೈಕೋರ್ಟ್ ನಲ್ಲಿ ಚರ್ಚೆ ಆಗಿದೆ. ಎರಡು ಅರ್ಜಿ ವಜಾಗೆ ಮನವಿ ಸಲ್ಲಿಸಿದ್ರೂ ಅದು ಆಗಿರಲಿಲ್ಲ. ಸೂಕ್ಷ್ಮ ವಿಚಾರ ನ್ಯಾಯಾಲಯದ ಮುಂದೆ ಇದ್ದಾಗ ಸರ್ಕಾರದ ಏಕಾಏಕಿ ನಿರ್ಧಾರ ತಪ್ಪು. ಕಾನೂನನ್ನ ಧಿಕ್ಕರಿಸಿ, ಯಾರೂ ಕಾನೂನಿಗಿಂತ ನಾವು ದೊಡ್ಡವರು ಎಂಬುದನ್ನ ಪ್ರದರ್ಶನ ಮಾಡಿಕೊಂಡಿದ್ದಾರೆ. ಬಡವರಿಗೆ ರಕ್ಷಣೆ ಇಲ್ಲ, ಲೂಟಿ‌ ಮಾಡುವವರಿಗೆ ಕೊಳ್ಳೆ ಹೊಡೆಯುವವರಿಗೆ ನಮ್ಮ ಸರ್ಕಾರ ಎಂಬುದನ್ನ ನಿರೂಪಿಸಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಡಿಸಿಎಂ ಎಂತಹಾ ದೊಡ್ಡತನ ತೋರಿಸಿದ್ದಾರೆ ಅಂದ್ರೆ. ಈ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆ ಆಗುತ್ತೆ ಅಂತ.
ಪಾಪ ನಿನ್ನೆ ದಿನ ಡಿಸಿಎಂ ಸಂಪುಟ ಸಭೆಗೂ ಹೋಗಿಲ್ಲ. ಇವರ ಸಹಕಾರಕ್ಕೆ ಅಭಿನಂದಿಸಬೇಕು. ಕಳೆದ 3ದಿನಗಳ ಹಿಂದೆ ಸೀನಿಯರ್ ಅಡ್ವಕೇಟ್ ಗಳ ಕರೆದು ಸಭೆಮಾಡಿ ಇದರಿಂದ ಯಾವ ರೀತಿ ರಕ್ಷಣೆ ಪಡೆಯಬೇಕು ಅಂತ ಚರ್ಚೆ ಮಾಡಿದ್ದಾರೆ. ನಮಗೆ ಎಲ್ಲಾ ಮಾಹಿತಿ ಇದೆ, ಮೊನ್ನೆಯೇ ಈ ವಿಚಾರ ಗಮನಕ್ಕೆ ಬಂತು. ಸರ್ಕಾರದ ನಿನ್ನೆಯ ತೀರ್ಮಾನ, ಈ ನಡವಳಿಕೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತೆ. ಈ ವಿಚಾರಗಳನ್ನ ಮುಂದಿನ ಸದನದಲ್ಲಿ ಚರ್ಚೆ ಮಾಡೋಣ ಎಂದಿದ್ದಾರೆ.

ಸರ್ಕಾರಕ್ಕೆ ಡಿಕೆಶಿ ಒತ್ತಡ ಹಾಕಿದ್ರಾ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ,  ಇಲ್ಲಿ ಒತ್ತಡದ ಪ್ರಶ್ನೆ ಅಲ್ಲ, ಸರ್ಕಾರ ಇರೋದು ಕಾನೂನು ವ್ಯಾಪ್ತಿಯಲ್ಲಿ ಕೆಲಸ ಮಾಡೋದಕ್ಕೆ. ತಿಳುವಳಿಕೆ ಇರುವವರೇ ಇಂತ ನಿರ್ಣಯ ಮಾಡಿರೋದು ಸರ್ಕಾರಕ್ಕೆ ಛೀಮಾರಿ ಹಾಕಿದಂತೆ. ಒಂದು ಬಾರಿ ಆದೇಶ ಮಾಡಿದ ಮೇಲೆ ಬದಲಾವಣೆ ಮಾಡಲು ಆಗಲ್ಲ. ಸಿಬಿಐಬಿಂದ ವಾಪಸ್ಸ್ ತಗೆದು ಲೋಕಾಯುಕ್ತ ಅಥವಾ ಸ್ಥಳೀಯ ಪೊಲೀಸರಿಂದ ಇದನ್ನ ತನಿಖೆ ಮಾಡಲು ಆಗುತ್ತಾ.? ಲೋಕಾಯುಕ್ತ ಅಥವಾ ಪೊಲೀಸರು ಇದನ್ನ ಮಾಡಲಹ ಸಾಧ್ಯವೇ.? ಹಿಂದಿನ ಸರ್ಕಾರ ಸ್ಪೀಕರ್ ಅನುಮತಿ ಪಡೆದಿರಲಿಲ್ಲ ಎನ್ನುವುದಾದರೆ. ಇವರು ಸ್ಪೀಕರ್ ನಿಂದ ಅನುಮತಿ ಪಡೆದಿದ್ದಾರಾ.? ಇದೆಲ್ಲಾ ಕೇವಲ ಸಬೂಬುಗಳು. ಈಗಾಗಲೇ ತನಿಖೆ ಮುಂದುವರಿಸಿ ಅಂತ ಕೋರ್ಟ್ ಆದೇಶ ಆಗಿದೆ. ಈಗ ಸ್ಪೀಕರ್ ಅನುಮತಿ ಪಡೆದ್ರೂ ವಾಪಸ್ಸ್ ಪಡೆಯಲು ಆಗುತ್ತಾ.? ನಿನ್ನೆ ಕ್ಯಾಬಿನೆಟ್ ನಲ್ಲಿ ಏನು ತೀರ್ಮಾನ ಆಗಿದೆ..? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇದೇ ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ರದ್ದು ಮಾಡಿ, ಅಕ್ರಮ ಮುಚ್ಚಿಹಾಕಿದ್ರು. ಇದರಲ್ಲಿ ಸಿದ್ದರಾಮಯ್ಯ ನಿಪುಣರು. ಈ ಬಗ್ಗೆ ಅವರಿಗೆ ಬಹಳ ಅನುಭವ ಇದೆ. ಹಾಗಾಗಿ ಕಾನೂನು ವ್ಯವಸ್ಥೆಯಲ್ಲಿ ಹೊಸ ಹೆಜ್ಜೆಹಾಕಲು ಹೊರಟಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

‘ಅನ್ನಭಾಗ್ಯ ಅಂತೀರಿ.. ನನಗೆ ರೇಷನ್ ಕಾರ್ಡೇ ಮಾಡಿ ಕೊಡ್ತಿಲ್ಲ.. ಏನ್ ಸ್ವಾಮಿ ಇದು?’

ಡಿಸಿಎಂ ಡಿಕೆಶಿ ಸಿಬಿಐ ತನಿಖೆ ಹಿಂಪಡೆದ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದೇನು..?

‘ಮೋದಿ ವಿರುದ್ಧ ಹೇಳಿಕೆ ನೀಡಿದಷ್ಟು, ಮೋದಿಯವರ ಮೇಲೆ ಜನಾಶೀರ್ವಾದ ಹೆಚ್ಚಾಗುತ್ತೆ’

- Advertisement -

Latest Posts

Don't Miss