Friday, June 20, 2025

Latest Posts

ಬಿಜೆಪಿ ಜೊತೆಗೆ ನನ್ನ ಸಂಬಂಧ ಮುಗಿದ ಅಧ್ಯಾಯ: ಕೆಆರ್ಪಿಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ

- Advertisement -

Political News: ಬೆಂಗಳೂರು: ಬಿಜೆಪಿ ಜೊತೆಗೆ ನನ್ನ ಸಂಬಂಧ ನೂರಕ್ಕೆ ನೂರು ಮುಗಿದ ಅಧ್ಯಾಯ ಎಂದು ಗಂಗಾವತಿ ಕ್ಷೇತ್ರದ ಕೆಆರ್ಪಿಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ವಿಧಾನಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ (BJP) ಗಾಲಿ ಜನಾರ್ದನ ರೆಡ್ಡಿ ಅವರು ಕಟ್ಟಿದ ಕೆಆರ್ಪಿಪಿ ಪಕ್ಷ ದೊಡ್ಡ ಹೊಡೆತ ನೀಡಿತ್ತು. ಇದರಿಂದಾಗಿ ಎಚ್ಚೆತ್ತ ಬಿಜೆಪಿ, ಗಾಲಿ ಜನಾರ್ದನ ರೆಡ್ಡಿ ಅವರನ್ನು ಪಕ್ಷಕ್ಕೆ ಮರು ಸೇರ್ಪಡೆ ಮಾಡಲು ಮುಂದಾಗಿದ್ದಾರೆ.

ಈ ಬಗ್ಗೆ ಮಾದ್ಯಮದ ಜೊತೆ ಮಾತನಾಡಿದ ಜನಾರ್ದನ ರೆಡ್ಡಿ, ಬಿಜೆಪಿಗೆ ಮರಳಿ ಹೋಗುವುದನ್ನು ನಾನು ಕನಸು ಮನಸಿನಲ್ಲೂ ಯೋಚನೆ ಮಾಡಲ್ಲ. ಕೆಆರ್ಪಿಪಿ ಪಕ್ಷದ ಸ್ಥಾಪಿಸಿದಾಗ ಯಾರೆಲ್ಲಾ ಎಷ್ಟೇ ಪ್ರಯತ್ನಿಸಿದರೂ ಯಾರ ಜೊತೆಗೂ ನಾನು ಹೊಂದಾಣಿಕೆ ಮಾಡಿಕೊಳ್ಳಲಿಲ್ಲ. ಸ್ವತಂತ್ರವಾಗಿಯೇ ನಾನು ಮುಂದೆ ಹೋಗುತ್ತೇನೆ ಎಂದರು.

ಲೋಕಸಭಾ ಚುನಾವಣೆ ದೃಷ್ಟಿಯಿಂದ ಯಾರೂ ನನ್ನ ಸಂಪರ್ಕ ಮಾಡಿಲ್ಲ, ನಾನೂ ಯಾರನ್ನೂ ಸಂಪರ್ಕ ಮಾಡಿಲ್ಲ.ನಾನು ಲೋಕಸಭಾ ಚುನಾವಣೆಗೆ ಸ್ಫರ್ಧೆ ಮಾಡುವುದಿಲ್ಲ. ಆದರೆ, ಎಂಟು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕೆಲಸ ಮಾಡುತ್ತೇನೆ ಎಂದರು.

ಬಿಜೆಪಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ನನ್ನ ಸಹಾಯ ಕೇಳುವ ಪರಿಸ್ಥಿತಿ ಇಂದು ಇಲ್ಲ. ಯಡಿಯೂರಪ್ಪ ಅವರನ್ನು ತಂದೆಯ ಸ್ಥಾನದಲ್ಲಿ ಗೌರವಿಸಿದರೆ, ಶ್ರೀರಾಮುಲು ಅವರನ್ನು ಮಗು ರೂಪದಲ್ಲಿ ನೋಡುತ್ತೇನೆ. ಅವರು ಆಯಾ ಪಕ್ಷದಲ್ಲಿ ಚೆನ್ನಾಗಿರಲಿ ಎಂದು ಬಯಸುತ್ತೇನೆಯೇ ಹೊರತು ಆಹ್ವಾನ ಮಾಡಲ್ಲ ಎಂದರು.

ರಾಜಕೀಯಕ್ಕಾಗಿ ಕೌಟುಂಬಿಕ ಸಂಬಂಧ ಕಡಿದುಕೊಂಡ ವಿಚಾರವಾಗಿ ಮಾತನಾಡಿದ ಜನಾರ್ದನ ರೆಡ್ಡಿ, ರಾಜಕೀಯ, ಸಿದ್ಧಾಂತ ಇಟ್ಟುಕೊಂಡು ನಾನು ಹೋಗುವಾಗ ಯಾವ ಸ್ನೇಹ, ಸಂಬಂಧದ ಪ್ರಶ್ನೆ ಬರುವುದೇ ಇಲ್ಲ. ನನ್ನ ಯೋಚನೆ, ಯೋಜನೆಗಳೇ ಪ್ರತ್ಯೇಕವಾಗಿರುವಾಗ ನನ್ನ ಹಾದಿಯಲ್ಲೇ ನಾನು ಹೋಗುತ್ತೇನೆ. ಯಾರಿಗೆ ಯಾವ ಹಾದಿ ಇಷ್ಟ ಆಗುತ್ತದೋ ಆ ಹಾದಿಯಲ್ಲಿ ಅವರು ಹೋಗಬಹುದು ಎಂದರು.

‘ಅದೆಂತದ್ದೋ ಗ್ಲೋಬಲ್ ಸಿಟಿ ಮಾಡಲು, ಲೂಟಿ ಮಾಡೋಕೆ ಈ ಕೆಲಸ’

‘ಲೂಟಿ‌ ಮಾಡುವವರಿಗೆ ಕೊಳ್ಳೆ ಹೊಡೆಯುವವರಿಗೆ ನಮ್ಮ ಸರ್ಕಾರ ಎಂಬುದನ್ನ ನಿರೂಪಿಸಿದ್ದಾರೆ’

‘ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ. ಸಿಬಿಐಗೆ ಸವಾಲ್ ಅಲ್ಲ, ನ್ಯಾಯಾಲಯಕ್ಕೆ ಸವಾಲ್’

- Advertisement -

Latest Posts

Don't Miss