B.Y .ವಿಜಯೇಂದ್ರ ಬಾಮೈದನ ಮನೆ ಮೇಲೆ ಲೋಕಾಯುಕ್ತ ದಾಳಿ: ಚಿನ್ನ, ನಗದು ಪತ್ತೆ!

Political News: ಕಲಬುರಗಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಾವಮೈದುನ ಮನೆ‌ ಮೇಲೆ‌ ಲೋಕಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಳ್ಳಂ ಬೆಳಗ್ಗೆ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ವಿಜಯೇಂದ್ರ ಅವರ ಪತ್ನಿಯ ಸಹೋದರ, ಡಾ.ಪ್ರಭುಲಿಂಗ್ ಮಾನಕರ್‌ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಾ. ಪ್ರಭುಲಿಂಗ ಮಾನ್ಕರ್ ಯಾದಗಿರಿಯ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ದಾಳಿ ವೇಳೆ 300 ಗ್ರಾಂ ಚಿನ್ನಾಭರಣ 3 ಲಕ್ಷ ನಗದು ಹಣ ಪತ್ತೆಯಾಗಿದೆ. ದಾಳಿಯ ವೇಳೆ ಹಲವು ಮಹತ್ವದ ದಾಖಲೆಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಹುಬ್ಬಳ್ಳಿಯ ಬಾಷಾಪೀರ್ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಯತ್ನಾಳ ಹಠಾವೋ ಆರಂಭಿಸುತ್ತೇವೆ: ಬಿಜೆಪಿ ವಕ್ತಾರರಿಂದ ಎಚ್ಚರಿಕೆ

ಠಾಣೆಯ ಆವರಣದಲ್ಲಿಯೇ ತಾಳಿ ಕಟ್ಟಿದ ಯುವಕ: ಜೈ ಶ್ರೀರಾಮ್ ಘೋಷಣೆ

About The Author