Political News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅನಿಲ್ಕುಮಾರ್ ಪಾಟೀಲ್ ಕುಟುಂಬದ ವಿವಾಹ ಸಮಾರಂಭಕ್ಕೆ ಆಗಮಿಸಿದ ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ಸಂತೋಷ ಲಾಡ್ ಸೇರಿದಂತೆ ಸಚಿವರು ಹಾಗೂ ಶಾಸಕರು ಶುಭ ಹಾರೈಸಿದರು.
ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಅಯೋಜಿಸಲಾಗಿದ್ದ ಆರತಕ್ಷತೆಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ಸಂತೋಷ ಲಾಡ್ ವಧುವರರಿಗೆ ಶುಭಕೋರಿದರು.
ಅರ್ಜುನ್ ಪಾಟೀಲ್ ಮತ್ತು ಹೆಜಲ್ ದಂಪತಿಗೆ ಶುಭಕೋರಿದ್ದು, ಹುಬ್ಬಳ್ಳಿಯ ನವೀನ್ ಹೋಟೆಲ್ನಲ್ಲಿ ನಡೆಯುತ್ತಿರುವ ವಿವಾಹ ಸಮಾರಂಭದಲ್ಲಿ ಸಚಿವ ಸಂತೋಷ್ ಲಾಡ್, ಸತೀಶ್ ಜಾರಕಿಹೋಳಿ, ರಾಮಲಿಂಗಾರೆಡ್ಡಿ, ಆರ್.ಬಿ. ತಿಮ್ಮಾಪುರ ಉಪಸ್ಥಿತರಿದ್ದರು.
‘ಅಲ್ಪಸಂಖ್ಯಾತ ಇಲಾಖೆಗೆ ಕೊನೆಯದಾಗಿ 10 ಸಾವಿರ ಕೋಟಿ ಮಾಡಬೇಕು ಅನ್ಕೊಂಡಿದ್ದೀನಿ’
‘ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ. ಇವರಿಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಬೇಕಾಗಿದೆ’




