Political News: ಹುಬ್ಬಳ್ಳಿ: ನಾಳೆಯಿಂದ ಬೆಳಗಾವಿ ಚಳಿಗಾಲದ ಅಧಿವೇಶನಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಮಹದಾಯಿ ಕಳಸಾ ಬಂಡೂರಿ, ಬರಗಾಲದ ಸಮಸ್ಯೆ ಬಗ್ಗೆ ತೀವ್ರ ಚರ್ಚೆ ನಡೆಯಲಿದೆ ಎಂದು ಶಾಸಕ ಎನ್.ಎಚ್.ಕೋನರೆಡ್ಡಿ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಂಜುಂಡಪ್ಪ ವರದಿ ಜಾರಿಯಂತೆ ಹೈದರಾಬಾದ್ ಕರ್ನಾಟಕದಂತೆ ಉತ್ತರ ಕರ್ನಾಟಕಕ್ಕೂ ಸ್ಥಾನ ಮಾನವನ್ನು ನೀಡಬೇಕೆಂದು ಈ ಅಧಿವೇಶನದಲ್ಲಿ ಒತ್ತಾಯಿಸಲಾಗುತ್ತದೆ ಎಂದರು..
ಈ ಅಧಿವೇಶನದಲ್ಲಿ ಬೆಂಗಳೂರಿಗೆ ಮಾತ್ರವಲ್ಲದೆ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳನ್ನು ಚರ್ಚಿಸಿ ಸೂಕ್ತ ಪರಿಹಾರ ನೀಡಲು ಈ ಬಗ್ಗೆ ಪ್ರಯತ್ನಿಸುತ್ತೇವೆ ಎಂದು ಅವರು ಹೇಳಿದರು.
‘ಅಲ್ಪಸಂಖ್ಯಾತ ಇಲಾಖೆಗೆ ಕೊನೆಯದಾಗಿ 10 ಸಾವಿರ ಕೋಟಿ ಮಾಡಬೇಕು ಅನ್ಕೊಂಡಿದ್ದೀನಿ’
‘ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ. ಇವರಿಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಬೇಕಾಗಿದೆ’




