Friday, July 4, 2025

Latest Posts

ನಕಲಿ ವೈದ್ಯರಿಗೆ ಶಾಕ್ ನೀಡಿದ ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳು

- Advertisement -

Bidar News: ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿ ನಕಲಿ ವೈದ್ಯರ ಹಾವಳಿ ಹಿನ್ನೆಲೆಯಲ್ಲಿ ಇಂದು (ಬುಧವಾರ) ಕಮಲನಗರ ತಾಲೂಕಿನ ಒಟ್ಟು 6 ನಕಲಿ ಕ್ಲಿನಿಕ್‌ಗಳ ಮೇಲೆ ದಿಢೀರ್ ದಾಳಿ ಮಾಡಿ ವೈದ್ಯಾಧಿಕಾರಿಗಳು ನಕಲಿ ವೈದ್ಯರಿಗೆ ಶಾಕ್ ನೀಡಿದ್ದಾರೆ.

ನಕಲಿ ಕ್ಲಿನಿಕ್‌ಗಳಾದ ಡಾ. ಬಿಹಾರಿ ಕ್ಲಿನಿಕ್, ಲಕ್ಷ್ಮೀ ಕ್ಲಿನಿಕ್ ಸೇರಿದಂತೆ ಒಟ್ಟು 6 ಕ್ಲಿನಿಕ್‌ಗಳ ಮೇಲೆ ತಾಲೂಕಿನ ಆರೋಗ್ಯಾಧಿಕಾರಿ ಡಾ. ಗಾಯತ್ರಿ ವಿಜಯಕುಮಾರ್ ಮತ್ತು ತಂಡದಿಂದ ದಾಳಿ ಮಾಡಲಾಗಿದೆ.

ದಾಳಿ ಮಾಡಿ ನಕಲಿ ವೈದ್ಯರ ಮೇಲೆ ಪ್ರಕರಣ ದಾಖಲಿಸಿದ ಜಿಲ್ಲಾ ಆರೋಗ್ಯಾಧಿಕಾರಿಗಳು ಲಕ್ಷಾಂತರ ಮೌಲ್ಯದ ಔಷಧಿಗಳನ್ನು ಜಪ್ತಿ ಮಾಡಿದ್ದಾರೆ. ಜೊತೆಗೆ ಯಾವುದೇ ಪರವಾನಿಗೆ ಇಲ್ಲದ ಕಮಲನಗರ ಗ್ರಾಮೀಣ ಭಾಗದ 2 ಕ್ಲಿನಿಕ್ ಹಾಗೂ ಪಟ್ಟಣದಲ್ಲಿ 4 ನಕಲಿ ಕ್ಲಿನಿಕ್‌ಗಳಿಗೆ ಬೀಗ ಹಾಕಲಾಗಿದೆ.

ಸಾರ್ವಜನಿಕರು ನಕಲಿ ವೈದ್ಯರ ಹತ್ತಿರ ಚಿಕಿತ್ಸೆ ಪಡೆಯದೆ ನೊಂದಾಯಿತ ವೈದ್ಯರ ಬಳಿ ಚಿಕಿತ್ಸೆ ಪಡೆಯಬೇಕು ಎಂದು ಟಿಎಚ್‌ಒ ಮನವಿ ಮಾಡಿದ್ದಾರೆ.

‘ಅಲ್ಪಸಂಖ್ಯಾತ ಇಲಾಖೆಗೆ ಕೊನೆಯದಾಗಿ 10 ಸಾವಿರ ಕೋಟಿ ಮಾಡಬೇಕು ಅನ್ಕೊಂಡಿದ್ದೀನಿ’

‘ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ. ಇವರಿಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಬೇಕಾಗಿದೆ’

ಅರ್ಜುನ’ನ ಸಾವಿಗೆ ಕಂಬನಿ ಮಿಡಿದ ಪ್ರಾಣಿ ಪ್ರಿಯ ‘ಡಿ ಬಾಸ್’ ದರ್ಶನ್

- Advertisement -

Latest Posts

Don't Miss