Political News: ಚಿತ್ರದುರ್ಗ: ನಾಗಪುರದ ಆರ್ಎಸ್ಎಸ್ ಕಚೇರಿ ಭೇಟಿಯ ಸಂದರ್ಭದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಎಂಬ ಕಾರಣಕ್ಕೆ ಹೆಡಗೇವಾರ್ ವಸ್ತು ಸಂಗ್ರಹಾಲಯ ಪ್ರವೇಶಕ್ಕೆ ನಿರಾಕರಿಸಿ ಅವಮಾನಿಸಿರುವ ಕುರಿತು ಮಾಜಿ ಶಾಸಕ ಗೂಳಿ ಹಟ್ಟಿ ಶೇಖರ್ ತಿಳಿಸಿದ್ದಾರೆ.
ಕಹಿ ಅನುಭವಕ್ಕೆ ಸಂಬಂಧಿಸಿದ ಹೇಳಿಕೆಯನ್ನು ಆಡಿಯೊ ರೂಪದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು ಇದಕ್ಕೆ ಕಾರಣ ಏನು ಎಂಬುದನ್ನು ಸ್ಪಷ್ಟಪಡಿಸಬಲ್ಲಿರಾ? ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಪ್ರಶ್ನಿಸಿದ್ದಾರೆ.
ಕೆಲ ತಿಂಗಳ ಹಿಂದೆ ಮಹಾರಾಷ್ಟ್ರದ ನಾಗಪುರದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಚೇರಿಗೆ ಭೇಟಿ ನೀಡಿದ್ದೆ. ಪರಿಶಿಷ್ಟ ಜಾತಿಗೆ ಸೇರಿದವನಾದರೂ ಹಿಂದುತ್ವದ ಬಗ್ಗೆ ನನಗೆ ಹೆಮ್ಮೆ ಇದೆ. ನಾನು ಖುಷಿಯಿಂದ ಅಲ್ಲಿಗೆ ತೆರಳಿದ್ದೆ. ಆದರೆ, ಹೆಡಗೇವಾರ್ ವಸ್ತುಸಂಗ್ರಹಾಲಯ ಪ್ರವೇಶದ ಸಂದರ್ಭದಲ್ಲಿ ಕಹಿ ಅನುಭವ ಉಂಟಾಯಿತು ಎಂದು ಬೇಸರ ಹೊರಹಾಕಿದ್ದಾರೆ.
ಮ್ಯೂಸಿಯಂ ವೀಕ್ಷಣೆಗೆ ಬರುವವರ ಮಾಹಿತಿಯನ್ನು ಪ್ರವೇಶದ್ವಾರದಲ್ಲಿ ಸಂಗ್ರಹಿಸಲಾಗುತ್ತಿತ್ತು. ಪುಸ್ತಕದಲ್ಲಿ ಹೆಸರು ನೋಂದಾಯಿಸಿ ಒಳಗೆ ಹೆಜ್ಜೆ ಇಡುತ್ತಿದ್ದಾಗ ವ್ಯಕ್ತಿಯೊಬ್ಬರು ತಡೆದರು. ಪರಿಶಿಷ್ಟ ಜಾತಿಗೆ ಸೇರಿದವರಿಗೆ ಪ್ರವೇಶವಿಲ್ಲ ಎಂಬುದನ್ನು ಸ್ಪಷ್ಟಪಡಿಸಿದರು. ನನ್ನೊಂದಿಗೆ ಇದ್ದವರು ಒಳಗೆ ಹೋದರು. ನಾನು ಹೊರಗೆ ಕಾಯುತ್ತ ಕುಳಿತುಕೊಳ್ಳಬೇಕಾಯಿತು ಎಂದು ಹೇಳಿದ್ದಾರೆ. ನನ್ನನ್ನು ಒಳಗೆ ಬಿಡದಿರುವ ಬಗ್ಗೆ ಬಿ.ಎಲ್.ಸಂತೋಷ್ ಅವರು ಸ್ಪಷ್ಟನೆ ನೀಡಬಲ್ಲಿರಾ’ ಎಂದು ಪ್ರಶ್ನಿಸಿದ್ದಾರೆ.
ನಾನು ಸಿಎಂ ಸಿದ್ಧರಾಮಯ್ಯನವರ ವಕ್ತಾರನಲ್ಲ: ಹರಿಪ್ರಸಾದ್ ಪರೋಕ್ಷ ಅಸಮಾಧಾನ..!
ಸಿಎಂ ಹೇಳಿದ್ದು, ನೂರಕ್ಕೆ ನೂರು ಸತ್ಯ, ಇಲ್ಲಿರುವ ಮುಸ್ಲಿಂಮರು ಪಾಕಿಸ್ತಾನದವರಾ..?: ಸಚಿವ ತಿಮ್ಮಾಪೂರ
ಎರಡು ದಿನಗಳ ಕಾಲ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ನಡೆಯುತ್ತದೆ: ಸಚಿವ ಜಾರಕಿಹೊಳಿ