ಹೆಸರು ‌ನೋಂದಾಯಿಸಿ ಪ್ರವೇಶ ನೀಡುವ ವ್ಯವಸ್ಥೆಯೇ ನಾಗಪುರ ಕಚೇರಿಯಲ್ಲಿಲ್ಲ: ಗೂಳಿಹಟ್ಟಿ ಆರೋಪಕ್ಕೆ RSS ಸ್ಪಷ್ಟನೆ

Political News: ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನಾಗಪುರ ಕಚೇರಿಯ ಡಾ. ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶ ನಿರಾಕರಿಸಲಾಗಿತ್ತು ಎಂಬ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ (Gulihatti D. Shekhar) ಆರೋಪಕ್ಕೆ ಆರ್ಎಸ್ಎಸ್ ಕರ್ನಾಟಕ ಘಟಕ ಸ್ಪಷ್ಟೀಕರಣ ನೀಡಿದೆ. ನಾಗಪುರದ ಸಂಘದ ಕಾರ್ಯಾಲಯ ನೋಡಲು ಬಂದವರ ಹೆಸರು ‌ನೋಂದಾಯಿಸಿ ಪ್ರವೇಶ ನೀಡುವ ವ್ಯವಸ್ಥೆಯೇ ಇಲ್ಲ ಎಂದು ಆರ್ಎಸ್ಎಸ್ ಮಾಧ್ಯಮ ಪ್ರಕಟಣೆ ತಿಳಿಸಿದೆ.

ಆರ್ಎಸ್ಎಸ್ ಹೇಳಿದ್ದೇನು?
ಹೊಸದುರ್ಗದ ಮಾಜಿ ಶಾಸಕರಾದ ಗೂಳಿಹಟ್ಟಿ ಶೇಖರ್ ಅವರ ಆಡಿಯೋ ಹೇಳಿಕೆಯಲ್ಲಿ ‘ತಮಗೆ ಜಾತಿ ಕಾರಣಕ್ಕೆ ನಾಗಪುರದ ಡಾ. ಹೆಡಗೇವಾರ್ ಸ್ಮಾರಕ ಕಟ್ಟಡದಲ್ಲಿ ಪ್ರವೇಶ ನಿರಾಕರಿಸಲಾಯಿತು’ ಎಂದು ಆರೋಪಿಸಿದ್ದಾರೆ. ನಾಗಪುರದಲ್ಲಿ ಸಂಘ ಕಾರ್ಯಾಲಯವನ್ನು ನೋಡಲು ಬಂದವರ ಹೆಸರನ್ನು ನೋಂದಾಯಿಸಿ ಪ್ರವೇಶ ನೀಡುವ ವ್ಯವಸ್ಥೆಯೇ ಇಲ್ಲ. ಇದೊಂದು ನಿರಾಧಾರದ ಹಾಗೂ ಹುರುಳಿಲ್ಲದ ಆರೋಪವಾಗಿದೆ. ಆರ್ಎಸ್ಎಸ್ನ ಯಾವುದೇ ಕಚೇರಿಯಲ್ಲಾಗಲಿ, ಅಥವಾ ಈ ರೀತಿಯ ಸ್ಮಾರಕ ಕಟ್ಟಡಗಳಲ್ಲಾಗಲಿ ಎಲ್ಲರಿಗೂ ಮುಕ್ತ ಪ್ರವೇಶವಿದೆ. ಎಲ್ಲಾ ಜಾತಿ, ವರ್ಗದ ಸಾವಿರಾರು ಜನ ನಿತ್ಯ ಬಂದು ಹೋಗುತ್ತಲೇ ಇದ್ದಾರೆ. ಯಾರಿಗೂ ಪ್ರವೇಶ ನಿರಾಕರಣೆಯ ಪ್ರಶ್ನೆಯೇ ಬಂದಿಲ್ಲ’ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಆರ್ಎಸ್ಎಸ್ ತಿಳಿಸಿದೆ.

‘ಇಷ್ಟಾಗಿ ರಾಜ್ಯ ವಿಧಾನಸಭಾ ಚುನಾವಣೆಗೆ ನಾಲ್ಕು ತಿಂಗಳು ಮೊದಲು ಈ ಘಟನೆ ನಡೆದಿತ್ತು ಎನ್ನುವ ಗೂಳಿಹಟ್ಟಿ ಶೇಖರ್ ಅವರು ಆನಂತರ ಅನೇಕ ಸಂಘದ ಪ್ರಮುಖರನ್ನು ಭೇಟಿಯಾದರೂ ಎಲ್ಲಿಯೂ ತಮಗಾದ ಈ ‘ಅವಮಾನ’ದ ಬಗ್ಗೆ ಹೇಳಿರಲಿಲ್ಲ. ಈಗ ಹತ್ತು ತಿಂಗಳ ನಂತರ ಈ ರೀತಿ ಹೇಳಿಕೆ ನೀಡಿರುವುದು ಆಶ್ಚರ್ಯಕರವಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘವು ಎಲ್ಲರನ್ನೂ ಸದಾ ತೆರೆದ ಮನಸ್ಸಿನಿಂದ ಸ್ವಾಗತಿಸುತ್ತದೆ’ ಎಂದು ಆರ್ಎಸ್ಎಸ್ ತಿಳಿಸಿದೆ.

‘ಮುಸ್ಲಿಂ ಹಿತರಕ್ಷಣೆ ಮಾಡ್ತೀನಿ ಅಂತಾ ಸಿಎಂ ಹೇಳಿದ್ದಾರೆ. ಅದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ’

ಜಾತಿ ಕಾರಣಕ್ಕೆ ನನ್ನನ್ನು ಆರ್ಎಸ್ಎಸ್ ಕಚೇರಿ ಪ್ರವೇಶಕ್ಕೆ ನಿರಾಕರಿಸಿದ್ದಾರೆ: ಗೂಳಿಹಟ್ಟಿ ಶೇಖರ್

‘ಡೈನಾಮಿಕ್ ಶಾಸಕ ಬಸವರಾಜ ಪಾಟೀಲ್ ಯತ್ನಾಳ ಅವರು ಸುಖಾಸುಮ್ಮನೆ ಆರೋಪ ಮಾಡ್ತಾ ಇದ್ದಾರೆ’

About The Author