Thursday, August 21, 2025

Latest Posts

ಪಕ್ಷದ ಅಧ್ಯಕ್ಷನಾಗಿ ನಾನು ಎಲ್ಲಾ ವರ್ಗದ ಜನರನ್ನು ಸಮಾನವಾಗಿ ನೋಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

- Advertisement -

Political News: ಜಾತಿ ಗಣತಿ ಬಗ್ಗೆ ಹಲವು ರಾಜಕೀಯ ಗಣ್ಯರು ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ, ಸ್ಪಷ್ಟನೆ ನೀಡಿದ್ದಾರೆ.

ಜಾತಿ ಗಣತಿಗೆ ನಾನು ಎಲ್ಲಿಯೂ ವಿರೋಧ ವ್ಯಕ್ತಪಡಿಸಿಲ್ಲ ಬದಲಾಗಿ ಸಮೀಕ್ಷೆ ವೈಜ್ಞಾನಿಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯಬೇಕು ಎಂದಷ್ಟೇ ಹೇಳಿದ್ದೇನೆ. ಜಾತಿ ಗಣತಿ ಸಮೀಕ್ಷೆ ಸರಿಯಾಗಿ ನಡೆದಿಲ್ಲ ಎಂದು ನಮ್ಮ ಅನೇಕ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮನೆ, ಮನೆಗೆ ತೆರಳಿ ಸಮೀಕ್ಷೆ ನಡೆಸಿಲ್ಲ ಎಂಬ ದೂರುಗಳು ಬಂದಿವೆ. ಎಲ್ಲಾ ಸಮುದಾಯಗಳು ಅವರ ಜನಸಂಖ್ಯೆಗೆ ಅನುಗುಣವಾಗಿ ತಮ್ಮ ಹಕ್ಕನ್ನು ಪಡೆಯಬೇಕು.

ಸಮಾಜದ ಎಲ್ಲಾ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಿಕೊಡುವ ಕಾಂಗ್ರೆಸ್ ಪಕ್ಷದ ಬದ್ಧತೆಗೆ ನಾನು ಬೆಂಬಲವಾಗಿ ನಿಲ್ಲುತ್ತೇನೆ. ಕೇಂದ್ರ ಸರಕಾರದ ವರ್ಗಿಕರಣದ ಅನ್ವಯ ನಾನು ಕೂಡ ಇತರೆ ಹಿಂದುಳಿದ ವರ್ಗದ ಸಮುದಾಯದ ನಾಯಕ. ಪಕ್ಷದ ಅಧ್ಯಕ್ಷನಾಗಿ ನಾನು ಎಲ್ಲಾ ವರ್ಗದ ಜನರನ್ನು ಸಮಾನವಾಗಿ ನೋಡಬೇಕು.

ಅಲ್ಪಸಂಖ್ಯಾತರು, ಪರಿಶಿಷ್ಟರು ಸೇರಿದಂತೆ ಎಲ್ಲರೂ ತಮ್ಮ ಜನಸಂಖ್ಯೆಗೆ ಅನುಗುಣವಾಗಿ ಹಕ್ಕು ಹಾಗೂ ಅನುದಾನ ಕೇಳುತ್ತಾರೆ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಮೇಲೆ ನಂಬಿಕೆ ಇದೆ. ಈ ಜಾತಿ ಗಣತಿಯನ್ನು ವೈಜ್ಞಾನಿಕವಾಗಿ ಮಾಡಲಾಗಿದೆಯೇ ಎಂಬ ವಿಚಾರವಾಗಿ ನಾವು ಸ್ಪಷ್ಟೀಕರಣ ಕೇಳಿದ್ದೇವೆ ಅಷ್ಟೆ ಡಿಕೆಶಿ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಹಮಾಸ್‌ ಜೊತೆ ಗುಂಡಿನ ಚಕಮಕಿ; ತಿಂಗಳ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಭಾರತೀಯ ಮೂಲದ ಇಸ್ರೇಲಿ ಯೋಧ ಸಾವು

ಗಣ್ಯರ ಮಾಹಿತಿ ಮೊದಲೇ ಗೊತ್ತಿತ್ತು – ಸಿಎಂ ಭದ್ರತಾ ವಿಚಾರದಲ್ಲಿ ಎಡವಿದ್ರಾ ಧಾರವಾಡ ಪೊಲೀಸರು?

ಯತ್ನಾಳ್ ಆರೋಪಿಸಿದ ಅದೇ ಮೌಲ್ವಿ ಜೊತೆ ಗಡ್ಕರಿ ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್ ಮುಖಂಡ

- Advertisement -

Latest Posts

Don't Miss