‘₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ’

Political News: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಸುವರ್ಣಸೌಧದಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ, ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಯಾವ ಸ್ಥಳದಲ್ಲಿ ಎಷ್ಟು ಕೋಟಿ ಹೂಡಿಕೆ ಮಾಡಲಾಗಿದೆ. ಮತ್ತು ಎಷ್ಟು ಜನರಿಗೆ ಉದ್ಯೋಗಾವಕಾಶ ಸಿಗಲಿದೆ ಎಂಬ ಬಗ್ಗೆ ವಿವರಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ ಒಟ್ಟು ₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. ಇದರಿಂದ 13,308 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಹೆಚ್ಚುವರಿ ರೂ.13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್‌ಕಾನ್‌ನ ಪ್ರಸ್ತಾವನೆಯನ್ನು ಸಮಿತಿಯು ಅನುಮೋದಿಸಿದೆ.

ಫಾಕ್ಸ್‌ಕಾನ್‌ ಈಗಾಗಲೇ ರಾಜ್ಯದಲ್ಲಿ ರೂ. 8,000 ಕೋಟಿ ಬಂಡವಾಳ ಹೂಡಿಕೆ ಮಾಡಲು ಅನುಮೋದನೆ ಪಡೆದಿದೆ. ಜೆಎಸ್‌ಡಬ್ಲ್ಯು ರಿನ್ಯೂ ಎನರ್ಜಿ ಫೋರ್ ಲಿಮಿಟೆಡ್ (ರೂ 4,960 ಕೋಟಿ ), ಜೆಎಸ್‌ಡಬ್ಲ್ಯು ಸ್ಟೀಲ್ ಲಿಮಿಟೆಡ್ (ರೂ 3,804 ಕೋಟಿ ), ಟೊಯೊಟಾ ಕಿರ್ಲೋಸ್ಕರ್ ಮೋಟರ್ ಪ್ರೈವೇಟ್ ಲಿಮಿಟೆಡ್ (ರೂ 3237.30 ಕೋಟಿ ), ಟಿಆರ್‌ಐಎಲ್‌ ಬೆಂಗಳೂರು ರಿಯಲ್ ಎಸ್ಟೇಟ್ ಸಿಕ್ಸ್ ಲಿಮಿಟೆಡ್ (ರೂ 3273 ಕೋಟಿ ಹೂಡಿಕೆ), ಜಾನಕಿ ಕಾರ್ಪ್‌ ಲಿಮಿಟೆಡ್‌ (ರೂ 607 ಕೋಟಿ ಮೊತ್ತದ ಹೆಚ್ಚುವರಿ ಹೂಡಿಕೆ) ಪ್ರಸ್ತಾವನೆಗಳು ’ಎಸ್‌ಎಚ್‌ಎಲ್‌ಸಿಸಿ’ ಅನುಮೋದನೆ ಪಡೆದಿರುವ ದೊಡ್ಡ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಲ್ಲಿ ಸೇರಿವೆ.

“ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದ ಒಟ್ಟು ರೂ. 9,461 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ. ಇವುಗಳಿಂದ ಈ ಪ್ರದೇಶದಲ್ಲಿ 3,538 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಸರ್ಕಾರದ ಕಡೆಯಿಂದ ನಡೆಯುತ್ತಿರುವ ಇಂತಹ ಸಂಘಟಿತ ಪ್ರಯತ್ನಗಳು ‘ಬೆಂಗಳೂರಿನ ಆಚೆ’ ಉಪಕ್ರಮದ ಭಾಗವಾಗಿವೆ” ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಆಯ್ಕೆ..

‘ನನ್ನ ಸಲುವಾಗಿ ಏನನ್ನಾದರೂ ಕೇಳುವ ಬದಲು, ನಾನು ಸಾಯುವುದೇ ಮೇಲು’

ಲೋಕಸಭೆಯಲ್ಲಿ ನಮ್ಮ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಪ್ರಧಾನಿಗೆ ಸಂಸದೆ ಸುಮಲತಾ ವಿನಂತಿ

About The Author