SBI ಬ್ಯಾಂಕ್‌ಗೆ ಕನ್ನ:18 ಲಕ್ಷ ದೋಚಿ ಪರಾರಿ!

Bidar News: ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ತೋರಣ ಗ್ರಾಮದ SBI ಬ್ಯಾಂಕ್ಗೆ ಖದೀಮರು ಕನ್ನ ಹಾಕಿ ಬ್ಯಾಂಕ್ನಲ್ಲಿದ್ದ 18 ಲಕ್ಷಕ್ಕೂ ಅಧಿಕ ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಗುರುವಾರ ತಡರಾತ್ರಿ ಖದೀಮರು ಕೈಚಳಕ ತೋರಿದ್ದಾರೆ. ಬ್ಯಾಂಕ್ ಹಿಂಬದಿಯ ಕಿಟಕಿ ಒಡೆದು ಒಳನುಸುಳಿರುವ ಖದೀಮರು ಸ್ಟ್ರಾಂಗ್ ರೂಮ್ ಪ್ರವೇಶಿಸಿ ಗ್ಯಾಸ್ ಕಟರ್ನಿಂದ ಲಾಕರ್ ಒಡೆದು ಹಣ, ಚಿನ್ನಾಭರಣ ದೋಚಿದ್ದಾರೆ. ಕೃತ್ಯಕ್ಕೂ ಮುನ್ನ ಸಿಸಿಟಿವಿ, ಜನರೇಟರ್ ಪವರ್ ಸಪ್ಲೈ ಕಟ್ ಮಾಡಿ ಒಳನುಗ್ಗಿರೋ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್ ಮೆಘಣ್ಣನವರ, ಸಿಪಿಐ ರಘುವೀರಸಿಂಗ್ ಠಾಕೂರ್ ಸೇರಿದಂತೆ ಪೊಲೀಸ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬ್ಯಾಂಕ್ನಲ್ಲಿ ಬೆರಳಚ್ಚು ತಜ್ಞರ ತಂಡ, ಡಾಗ್ ಸ್ಕ್ವಾಡ್ ತಂಡ ಪರಿಶೀಲನೆ ನಡೆಸಿದೆ. ಕಮಲ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

‘ತಮ್ಮ ಎಲೆಯಲ್ಲಿ ಆನೆ ಸತ್ತು ಬಿದ್ದಿರುವಾಗ, ನಮ್ಮ ಎಲೆಯಲ್ಲಿ ನೊಣವನ್ನು ಹುಡುಕಿದಂತಿದೆ ಬಿಜೆಪಿಗರ ದುಸ್ಥಿತಿ’

‘ಮುಟ್ಟು ಅನ್ನೋದು ಅಂಗವೈಕಲ್ಯವಲ್ಲ. ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ’

‘ಹಿಂದಿನ ಕಹಿ ನೆನಪು ಇನ್ನೂ ಇದೆ. ಇದು ಸರ್ಕಾರಕ್ಕೆ ಕೆಟ್ಟ ಹೆಸರು’

About The Author