Political News: ಧಾರವಾಡ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಧಾರವಾಡ ಕ್ಷೇತ್ರದ ಉಸ್ತುವಾರಿಯಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇಂದು ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಮುಖಂಡರ ಸಭೆ ಆಯೋಜಿಸಿದ್ದರು. ಈ ಹಿನ್ನಲೆಯಲ್ಲಿ ಆಗಮಿಸುತ್ತಿದ್ದ ವೇಳೆ ಧಾರವಾಡದ ಟೋಲ್ ನಾಕಾ ಬಳಿ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ಮಠ ಬೆಂಬಲಿಗರು, ಭರ್ಜರಿಯಾಗಿ ಸಚಿವರನ್ನು ವಿಜೃಂಭಣೆಯಿಂದ ಬರಮಾಡಿಕೊಂಡಿದ್ದಾರೆ.
50 ಅಡಿ ಎತ್ತರದ ಹೂವಿನ ಬೃಹತ್ ಹಾರವನ್ನು ಕ್ರೇನ್ ಮೂಲಕ ಹಾಕಿ, ಜೆಸಿಬಿ ಮೂಲಕ ಹೂ ಮಳೆ ಸುರಿಸಿ, ಪಟಾಕಿ ಸಿಡಿಸಿ ಸ್ವಾಗತ ಕೋರಿದರು. ಅಲ್ಲದೇ ಈ ಬಾರಿಯ ಲೋಕಸಭೆ ಟಿಕೆಟ್ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ಮಠ ಅವರಿಗೆ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಯೂತ್ ಕಾಂಗ್ರೆಸ್ ಮುಖಂಡರು, ಸ್ಥಳೀಯ ಕಾಂಗ್ರೆಸ್ ನಾಯಕರು ಸೇರಿದಂತೆ ನೂರಾರು ಜನ ಸೇರಿದ್ದರು.
ಸ್ವಾಗತದ ನಂತರ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಖಾಸಗಿ ಹೋಟೆಲ್ ಗೆ ಸಭೆ ನಡೆಸಲು ತೆರಳಿದರು.
‘ಮಹದಾಯಿ, ಕೃಷ್ಣಾ ಮೇಲ್ದಂಡೆಗೂ ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಾವು ಸಿದ್ದರಿದ್ದೇವೆ’

