Political News: ಧಾರವಾಡ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೆರವಣಿಗೆಯಲ್ಲಿ, ಕಾಂಗ್ರೆಸ್ ಕಾರ್ಯಕರ್ತರು ನಿಯಮ ಉಲ್ಲಂಘನೆ ಮಾಡಿದ್ದು, ಬಿ.ಆರ್.ಟಿ.ಎಸ್ ಕಾರಿಡಾರ್‌ನಲ್ಲಿ ಬೈಕ್ ರ್ಯಾಲಿ ಮಾಡುವ ಮೂಲಕ, ಅನಧಿಕೃತ ಪ್ರವೇಶ ಮಾಡಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಧಾರವಾಡ ಲೋಕಸಭಾ ಕ್ಷೇತ್ರದ ವೀಕ್ಷಕಿಯಾಗಿದ್ದು, ನಿನ್ನೆ ಧಾರವಾಡದ ಮಯೂರ ಹೊಟೇಲ್‌ಗೆ ಸಭೆಗಾಗಿ ಆಗಮಿಸಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು, ಅವರನ್ನು ಸ್ವಾಗತಿಸಲು, ಬೃಹತ್ ಮೆರವಣಿಗೆ ಏರ್ಪಡಿಸಿ, ಹೂವಿನ ಹಾರ ಹಾಕಿ, ಘೋಷಣೆ ಕೂಗಿ, ಬರಮಾಡಿಕೊಂಡರು. ಆದೆರ ಈ ವೇಳೆ ಎಡವಟ್ಟು ಮಾಡಿಕೊಂಡಿದ್ದು, ಹುಬ್ಬಳ್ಳಿ-ಧಾರವಾಡ ಮಧ್ಯೆ ಇರುವ ಬಿ.ಆರ್.ಟಿ.ಎಸ್ ಕಾರಿಡಾರ್‌ನಲ್ಲಿ ಅನಧಿಕೃತ ಪ್ರವೇಶ ಮಾಡಿದ್ದಾರೆ. ಚಿಗರಿ ಬಸ್ ಮತ್ತು ಅಂಬ್ಯುಲೆನ್ಸ್ ಓಡಾಡಕ್ಕೆ ಮಾತ್ರ ಇಲ್ಲಿ ಅವಕಾಶವಿದ್ದು, ಇವರನ್ನು ಬಿಟ್ಟು ಬೇರೆ ವಾಹನಗಳಿಗೆ ಇಲ್ಲಿ ಪ್ರವೇಶವಿಲ್ಲ.
ಇನ್ನನು ಈ ಬಗ್ಗೆ ಪ್ರತಿಕ್ರಿಯಿಸಿರುವ ಹೆಬ್ಬಾಳ್ಕರ್, ಈ ರೀತಿ ಬೇಕಾಗಿರಲಿಲ್ಲ. ಈ ರೀತಿಯ ಆಡಂಬರ ನನಗೆ ಇಷ್ಟ ಆಗುವುದಿಲ್ಲ. ನಾನು ಇಂತಹುದಕ್ಕೆ ಪ್ರಚೋದನೆ ಕೊಡುವುದೂ ಇಲ್ಲ. ನನಗೆ ಇದು ಬೇಕಾಗಿಯೂ ಇರಲಿಲ್ಲ ಎಂದಿದ್ದಾರೆ.
ಅಲ್ಲದೇ, ಸಭೆ ಈಗಾಗಲೇ ಆಗಬೇಕಾಗಿತ್ತು. ಗೃಹ ಲಕ್ಷ್ಮಿ ಯೋಜನೆಯಲ್ಲಿ ನಾನು ಬ್ಯುಸಿಯಾಗಿದ್ದೆ. ನಾನು ಉಡುಪಿಯ ಉಸ್ತುವಾರಿಯೂ ಹೌದು. ಬೆಳಗಾವಿಗೆ ಹೋಗಲು ವಾರಕ್ಕೆ ಎರಡು ದಿನ ಸಿಗ್ತಾ ಇತ್ತು. ಹೀಗಾಗಿ ಧಾರವಾಡಕ್ಕೆ ಬರೋದಕ್ಕೆ ಸ್ವಲ್ಪ ತಡ ಆಗಿದೆ. ಡಿ. 30ರೊಳಗೆ ಆಕಾಂಕ್ಷಿಗಳ ಪಟ್ಟಿ ಕೊಡಬೇಕಿದೆ. ಈ ಸಂಬಂಧ ನನಗೆಸೂಚನೆ ಕೊಟ್ಟಿದ್ದಾರೆ. ಈ ಭಾಗದ ಶಾಸಕರು, ಸಚಿವರೊಂದಿಗೆ ಮಾತನಾಡಿಕೊಳ್ಳಬೇಕಿದೆ. ಆಕಾಂಕ್ಷಿಗಳೆಲ್ಲ ಖುದ್ದಾಗಿ ಭೇಟಿಯಾಗಿ ಅರ್ಜಿ ಕೊಡಬೇಕು. ಅಲ್ಪಸಂಖ್ಯಾತರದ್ದು ಇಡೀ ರಾಜ್ಯದಲ್ಲಿ 3 ಕ್ಷೇತ್ರದ ಬೇಡಿಕೆ ಇದೆ. ಎಲ್ಲವನ್ನೂ ಪಕ್ಷದ ಅಧ್ಯಕ್ಷರಿಗೆ ವರದಿ ಮಾಡುತ್ತೇನೆ. ಧಾರವಾಡದಿಂದ ಅಲ್ಪಸಂಖ್ಯಾತರು ಯಾರು ಅರ್ಜಿ ಸಲ್ಲಿಸಿಲ್ಲ. ನಾನು ಈಗ ಎಲ್ಲ ಮುಖಂಡರೊಂದಿಗೆ ಸಭೆ ಮಾಡ್ತೀನಿ ಎಂದು ಹೇಳಿದರು.
ಉಳ್ಳಾಗಡ್ಡಿಮಠ ಬೆಂಬಲಿಗರಿಂದ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಭರ್ಜರಿ ಸ್ವಾಗತ: ರಜತ್‌ಗೆ ಟಿಕೆಟ್ ನೀಡುವಂತೆ ಮನವಿ
‘ನಡ್ಡಾ ಅವರಿಗೆ ದಮ್ಮು-ತಾಕತ್ ಇದ್ದರೆ, ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು ಕಳಿಸಲಿ’