Kolar News: ಕೋಲಾರ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಮಾನವೀಯ ಕೃತ್ಯ ನಡೆದಿದ್ದು, ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಲಾಗಿದೆ.
ಕೋಲಾರ ಜಿಲ್ಲೆ ಮಾಲೂರು ತಾಲೂಕು ಯಲವಳ್ಳಿ ಗ್ರಾಮದ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾಂಶುಪಾಲರ ಎದುರಲ್ಲೇ ಸಿಬ್ಬಂದಿಗಳು ಮಕ್ಕಳಿಂದ ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ್ದಾರೆ. ಕಳೆದ ಹಲವು ದಿನಗಳಿಂದ ಮಕ್ಕಳಿಗೆ ವಿವಿದ ರೀತಿಯಲ್ಲಿ ಕಿರುಕುಳ ನೀಡುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ.
ಪ್ರಾಂಶುಪಾಲೆ ಭರತಮ್ಮ, ಶಿಕ್ಷಕ ಅಭಿಷೇಕ್, ಹಾಗೂ ವಾರ್ಡನ್ ಮಂಜುನಾಥ್ ಸೇರಿ ಕೆಲವು ಶಿಕ್ಷಕರು ಮಕ್ಕಳಿಗೆ ಕಿರುಕುಳ ನೀಡುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ. ಮಕ್ಕಳಿಗೆ ಹೊಡೆಯುವುದು, ಮಕ್ಕಳನ್ನು ರಾತ್ರಿ ಹೊತ್ತಿನಲ್ಲಿ ಬ್ಯಾಗ್ ಹೊರಿಸಿ ಕೂರಿಸುತ್ತಿದ್ದರೆಂಬ ಆರೋಪ ಕೇಳಿಬಂದಿದೆ. ಬರೀ ಆರೋಪ ಮಾತ್ರವಲ್ಲದೇ, ಕಿರುಕುಳ ನೀಡುವ ಪಿಟ್ ಕ್ಲೀನ್ ಮಾಡಿರುವ ದೃಷ್ಯಗಳು ಕೂಡ ಲಭ್ಯವಾಗಿದೆ.
ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ವಸತಿ ಶಾಲೆಯಲ್ಲಿ ಸುಮಾರು 250 ಜನ ಮಕ್ಕಳಿದ್ದಾರೆ. ಇನ್ನು ಮಕ್ಕಳಿಗೆ ಕಿರುಕುಳ ನೀಡಿರುವ ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಪೊಷಕರು ಆಗ್ರಹಿಸಿದ್ದಾರೆ.
ಸಂತ್ರಸ್ತ ಮಹಿಳೆಯ ಭೇಟಿಗೆ ಹೈಕೋರ್ಟ್ ನಿರ್ಭಂದ: ಆದರೂ ಭೇಟಿಯಾದ್ರಾ ಬಿಜೆಪಿಗರು..?
‘ಈ ರೀತಿಯ ಆಡಂಬರ ನನಗೆ ಇಷ್ಟ ಆಗುವುದಿಲ್ಲ. ನಾನು ಇಂತಹುದಕ್ಕೆ ಪ್ರಚೋದನೆ ಕೊಡುವುದೂ ಇಲ್ಲ’




