Hubballi News: ಹುಬ್ಬಳ್ಳಿ: ಹುಬ್ಬಳ್ಳಿಗೆ ಭೇಟಿ ಕೊಟ್ಟಿದ್ದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಕೋವಿಡ್ ಆತಂಕ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು.
ನಾನು ನಿನ್ನೆ ಆರೋಗ್ಯ ಸಚಿವರ ಜೊತೆ ಮಾತಾಡಿದ್ದೇನೆ. ತಜ್ಞರ ಜೊತೆ ಮೀಟಿಂಗ್ ಮಾಡಲು ಸೂಚಿಸಿದ್ದೇನೆ. ಎಲ್ಲಾ ರೀತಿಯ ಕ್ರಮಕ್ಕೆ ಸರ್ಕಾರ ಸಿದ್ಧವಾಗಿದೆ ಎಂದಿದ್ದಾರೆ. ಮಾಲೂರಿನಲ್ಲಿ ಮಲ ಕ್ಲೀನ್ ಮಾಡಲು ಮಕ್ಕಳ ಬಳಕೆ ವಿಚಾರದ ಬಗ್ಗೆ ಮಾತನಾಡಿದ ಸಿಎಂ, ಆ ವಿಚಾರ ನನ್ನ ಗಮನಕ್ಕೆ ಬಂದಿದೆ. ರಿಪೋರ್ಟ್ ಕರೆಸಿಕೊಳ್ಳುತ್ತೇನೆ. ಯಾರೆ ತಪ್ಪಿತಸ್ಥರಿದ್ರೂ ಕ್ರಮ ಕೈಗೊಳ್ತಿವಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿ ವಂಟಮುರಿ ಘಟನೆಯಲ್ಲಿ ರಾಜಕೀಯ ಮಾಡುತ್ತಿದೆ. ಪ್ರಕರಣ ಗೊತ್ತಾದ ತಕ್ಷಣವೇ ಗೃಹ ಸಚಿವರು ಮಹಿಳೆ ಭೇಟಿ ಮಾಡಿದ್ದಾರೆ ಸಾಂತ್ವನ ಹೇಳಿದ್ದಾರೆ. ಎಲ್ಲಿ ಸರ್ಕಾರ ಫೇಲ್ ಆಗಿದೆ ನನಗೆ ಗೊತ್ತಾಗಬೇಕು. ಅವರು ರಾಜಕೀಯ ಮಾಡುತ್ತಿದ್ದಾರೆ.. ಉತ್ತರ ಪ್ರದೇಶದಲ್ಲಿ ಶಾಸಕ 9 ವರ್ಷ ಹುಡುಗಿ ಮೇಲೆ ರೇಪ್ ಮಾಡಿ ಜೈಲು ಸೇರಿದ್ದಾನೆ. ಇದಕ್ಕೆ ಜೆಪಿ ನಡ್ಡಾ ಮತ್ತು ಬಿಜೆಪಿ ನಾಯಕರು ಏನು ಹೇಳತ್ತಾರೆ..? ಇಂತಹ ಎಂಎಲ್ಎ ಇಟ್ಟುಕೊಂಡವರು, ಹೆಣ್ಣುಮಕ್ಕಳು ಮೇಲೆ ದೌರ್ಜನ್ಯ ಮಾಡುವವರು. ಬಿಜೆಪಿ ಅವರಿಗೆ ನಮ್ಮ ಬಗ್ಗೆ ಮಾತನಾಡಲು ಏನು ನೈತಿಕತೆಯಿದೆ..? ನ್ಯಾಷನಲ್ ಕ್ರೈಂ ಬ್ಯಿರೋ ಅವರ ವರದಿ ನೋಡಲಿ. ಯಾರ ಕಾಲದಲ್ಲಿ ಎಷ್ಟು ಪ್ರಕರಣ ಆಗಿವೆ ಅಂತ. ಯಾರ ಮೇಲೆ ದೌರ್ಜನ್ಯ ಆದ್ರೂ ಅವರ ಮೇಲೆ ನಾವು ಕಠಿಣ ಕ್ರಮ ತೆಗೆದುಕೊಳ್ಳತ್ತವೆ. ಇದು ಅನಾಗರಿಕ ಘಟನೆ ಇದು ನಾಗರಿಕ ಸಮಾಜದಲ್ಲಿ ನಡೆಯಬಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸಂತ್ರಸ್ತ ಮಹಿಳೆಯ ಭೇಟಿಗೆ ಹೈಕೋರ್ಟ್ ನಿರ್ಭಂದ: ಆದರೂ ಭೇಟಿಯಾದ್ರಾ ಬಿಜೆಪಿಗರು..?
‘ಈ ರೀತಿಯ ಆಡಂಬರ ನನಗೆ ಇಷ್ಟ ಆಗುವುದಿಲ್ಲ. ನಾನು ಇಂತಹುದಕ್ಕೆ ಪ್ರಚೋದನೆ ಕೊಡುವುದೂ ಇಲ್ಲ’