Political News: ಹುಬ್ಬಳ್ಳಿ: ರಾಜ್ಯದಲ್ಲಿ ಸರಕಾರ ಬಂದು ಆರು ತಿಂಗಳು ಆದರು ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಏನು ಭರವಸೆ ನೀಡಿದ್ದರು ಅದು ಈಡೇರಿಲ್ಲ. ಅವರೇ ಮಧ್ಯಂತರ ಆರ್ಥಿಕ ಸ್ಥಿತಿಗತಿ ಕುರಿತು ವರದಿ ಮಂಡನೆ ಮಾಡಿದರು. ಆದರೆ ಅದರಿಂದ ಗೊತ್ತಾಗುತ್ತದೆ ಏನು ಸುಧಾರಣೆ ಆಗಿಲ್ಲ. ಎಷ್ಟೇ ಭರವಸೆ ಯೋಜನೆ ಘೋಷಣೆ ಮಾಡಲಿ ಅದಕ್ಕೆ ತಕ್ಕಂತೆ ಕಂದಾಯ ಸಂಗ್ರಹ ಮಾಡಬೇಕೆಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ಬಂದಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದೊಂದು ಕೇವಲ ರಾಜಕೀಯ ನಾವು ರಾಜ್ಯಕ್ಕೆ ಏನು ಅನುದಾನ ಕೊಡಬೇಕು ಅದನ್ನ ಕೊಟ್ಟಾಗಿದೆ. ಆದರೆ ಕೇವಲ ಆರೋಪ ಸುಳ್ಳು ಹೇಳುವುದರಲ್ಲಿಯೇ ಕಾಲಹರಣ ಮಾಡುತಿದ್ದಾರೆ.
ಕೇಂದ್ರ ಸರಕಾರದಿಂದ ನೇರವಾಗಿ ಆಯಾ ಇಲಾಖೆಗೆ ಅನುದಾನ ಹೋಗುತಿದೆ. ಇನ್ನು ಬರಗಾಲ ಕಾಮಗಾರಿ ಸೇರಿದಂತೆ ಯಾವುದೇ ಪರಿಹಾರ ರಾಜ್ಯ ಸರ್ಕಾರದಿಂದ ಕೊಡ್ತಾ ಇಲ್ಲ. ರಾಜ್ಯ ಸರ್ಕಾರ ಅನುದಾನ ಕೊಡ್ತಾ ಇಲ್ಲ ಅಂತಾ ಕೇಂದ್ರ ಸರ್ಕಾರದ ಮೇಲೆ ಅನಗತ್ಯವಾಗಿ ಆರೋಪ ಮಾಡುವುದು ಸರಿಯಲ್ಲ ಎಂದರು. ಕೋಲಾರ ಜಿಲ್ಲೆಯ ಮಾಲೂರು ಘಟನೆ ಸಹ ಇದೊಂದು ಅತ್ಯಂತ ಹೇಯವಾಗಿದೆ ಇದೊಂದು ರಾಜ್ಯ ಸರ್ಕಾರದ ವಿಫಲತೆಗೆ ಕಾರಣ ಎಂದರು.
ಕುಮಾರಸ್ವಾಮಿನೇ ಇರ್ತಾರೋ ಇಲ್ವೋ ಗೊತ್ತಿಲ್ಲಾ: ಮಾಜಿ ಸಿಎಂ ಹೇಳಿಕೆಗೆ ತಿರುಗೇಟು ನೀಡಿದ ಆರೋಗ್ಯ ಸಚಿವರು