Saturday, July 5, 2025

Latest Posts

‘ಬಿಜೆಪಿಯ ಪಕ್ಷದ MPಗಳನ್ನು ಮಾತ್ರ ಇಟ್ಟುಕೊಂಡು ಸಂಸತ್ ಅಧಿವೇಶನ ನಡೆಸುವುದು ನಾಚಿಕೆಗೇಡು’

- Advertisement -

Political News: ಲೋಕಸಭೆಯಲ್ಲಿ 141 ಸಂಸದರನ್ನು ಅಮಾನತ್ತು ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ, ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸತ್ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಕಾಂಗ್ರೆಸ್‌ನ ಕೆಲ ಸಂಸದರು ತಮ್ಮ ಬೇಡಿಕೆಗಳನ್ನು ಈಡೇರಿಸಿ ಎಂದು ಬಿಜೆಪಿ ವಿರುದ್ಧ ಘೋಷಣೆ ಕೂಗಿ, ಫಲಕಗಳನ್ನು ತೋರಿಸಿದ್ದರು. ಹೀಗಾಗಿ ಕಲಾಪವನ್ನು ಕೆಲ ಕಾಲ ಮುಂದೂಡಲಾಯಿತು. ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ, ವಿರೋಧ ಪಕ್ಷದ 141 ಮಂದಿ ಸಂಸದರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ.

141 ಸಂಸದರನ್ನು ಒಂದೇ ಬಾರಿಗೆ ಅಮಾನತ್ತು ಮಾಡಿದ ಉದಾಹರಣೆ ಸಂಸತ್ತಿನ ಇತಿಹಾದಲ್ಲೇ ಇಲ್ಲ. ಇಷ್ಟು ಮಂದಿ ಸಂಸದರನ್ನು ಅಮಾನತ್ತು ಮಾಡಿರುವುದು ಸರ್ವಾಧಿಕಾರವನ್ನೂ ಮೀರಿದ ಕ್ರಮ. ಇದನ್ನು ಪ್ರಜಾಪ್ರಭುತ್ವ ಅಂತ ಕರೆಯಲು ಸಾಧ್ಯವಿಲ್ಲ. ಚರ್ಚೆ ಪ್ರಜಾಪ್ರಭುತ್ವದ ಮೂಲ. ಒಳ್ಳೆಯ ಸರ್ಕಾರ, ಬಲಿಷ್ಠ ವಿರೋಧ ಪಕ್ಷ ಇದ್ದಾಗ ಮಾತ್ರ ಪ್ರಜಾಪ್ರಭುತ್ವದ ಯಶಸ್ಸು ಸಾಧ್ಯ. ಸಂಸತ್ತಿನಲ್ಲಿ ಸರ್ಕಾರದ ತಪ್ಪುಗಳನ್ನು ವ್ಯಕ್ತಪಡಿಸುವ ಆರೋಗ್ಯಪೂರ್ಣ ವಾತಾವರಣ ಇರಬೇಕು. ಬಿಜೆಪಿಯ ಪಕ್ಷದ MP ಗಳನ್ನು ಮಾತ್ರ ಇಟ್ಟುಕೊಂಡು ಸಂಸತ್ ಅಧಿವೇಶನ ನಡೆಸುವುದು ನಾಚಿಕೆಗೇಡು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಜಗದೀಶ್ ಶೆಟ್ಟರ್ ಲೋಕಸಭಾ ಅಭ್ಯರ್ಥಿ ಆಗಬೇಕು, ನನ್ನಿಂದ ಮುಕ್ತ ಆಹ್ವಾನ: ಶಾಸಕ ಮಹೇಶ್ ಟೆಂಗಿನಕಾಯಿ

19 ಮೊರಾರ್ಜಿ ದೇಸಾಯಿ ವಸತಿ ಶಾಲೆ, 50 ಮೆಟ್ರಿಕ್ ನಂತರದ ಹಾಸ್ಟೆಲ್ ನಿರ್ಮಾಣಕ್ಕೆ 675 ಕೋಟಿ ರೂ. ಅನುದಾನಕ್ಕೆ ಮನವಿ

‘ರಾಜ್ಯದಲ್ಲಿ ಸರಕಾರ ಬಂದು ಆರು ತಿಂಗಳು ಆದರು ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ’

- Advertisement -

Latest Posts

Don't Miss