ನಟಿ ಹೇಮಾ ಚೌಧರಿ ಆರೋಗ್ಯದಲ್ಲಿ ಏರುಪೇರು: ಐಸಿಯುನಲ್ಲಿ ಚಿಕಿತ್ಸೆಗೆ ಸ್ಪಂದನೆ

Movie News: ಹಿರಿಯ ನಟಿ ಹೇಮಾ ಚೌಧರಿಗೆ ಎರಡು ದಿನಗಳ ಹಿಂದೆ ಬ್ರೇನ್ ಹ್ಯಾಮರೇಜ್ ಆಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಪರೇಷನ್ ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಚಿಕಿತ್ಸೆಗೆ ಸ್‌ಪಂದಿಸುತ್ತಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.

ಒಂದು ವಾರದ ಹಿಂದೆ ಆರೋಗ್ಯವಾಗಿದ್ದ ಹೇಮಾ, ಲೀಲಾವತಿಯವರ 11ನೇ ದಿನದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆಧರೆ ಎರಡು ದಿನಗಳ ಹಿಂದೆ ಅವರಿಗೆ ಬ್ರೇನ್ ಹ್ಯಾಮರೇಜ್ ಆಗಿ, ಆಪರೇಷನ್ ಮಾಡಲಾಗಿತ್ತು. ಬೆಳಿಗ್ಗೆ ಅವರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಸದ್ಯ ಹೇಮಾ ಚೌದರಿ ಚಿಕಿತ್ಸೆ ಸ್ಪಂದಿಸುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಹೇಮಾ ಅವರ ಪುತ್ರ ವಿದೇಶದಲ್ಲಿದ್ದು. ವಿಷಯ ತಿಳಿದ ಬಳಿಕ ಬೆಂಗಳೂರಿಗೆ ಹೊರಟಿದ್ದಾರೆ.

‘ಪ್ರಧಾನಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ, ನೆರವು ನೀಡುತ್ತಾರೆಂದು ಭಾವಿಸಿದ್ದೇನೆ’

ಬಿಜೆಪಿಗೆ ನಾನೇ ಟಾರ್ಗೆಟ್ ಆಗ್ತಿದ್ದೇನೆ! ನನ್ನ ಬಗ್ಗೆ ಅವರಿಗೆ ಈಗ ಅರ್ಥವಾಗಿದೆ ಎಂದ ಶೆಟ್ಟರ್

‘ಬಿಜೆಪಿಯ ಪಕ್ಷದ MPಗಳನ್ನು ಮಾತ್ರ ಇಟ್ಟುಕೊಂಡು ಸಂಸತ್ ಅಧಿವೇಶನ ನಡೆಸುವುದು ನಾಚಿಕೆಗೇಡು’

About The Author