Political News: ಸಿಎಂ ಸಿದ್ದರಾಮಯ್ಯ ಅವರು ಕೊರೋನಾ ಸೋಂಕಿನ ಬಗ್ಗೆ ಟ್ವೀಟ್ ಮಾಡಿದ್ದು, ಯಾರೂ ಕೂಡ ಕೋವಿಡ್ ಬಗ್ಗೆ ಹೆದರುವುದು ಬೇಡ, ಇದಕ್ಕಾಗಿ ನಾವು ಮುನ್ನೆಚ್ಚರಿಕೆ ವಹಿಸೋಣ, ಮಾಸ್ಕ್ ಧರಿಸೋಣ. ಈ ಬಾರಿ ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಗೆ ಯಾವುದೇ ನಿರ್ಭಂಧವಿರುವುದಿಲ್ಲ. ಆದರೆ ಸಂಭ್ರಮದ ಜೊತೆಗೆ, ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ ಎಂದು ಸಿಎಂ ಕರೆ ನೀಡಿದ್ದಾರೆ.
ಕೊರೊನಾ ಸಾಂಕ್ರಾಮಿಕ ನಿಯಂತ್ರಣಕ್ಕೆ ನಾವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ. ಈ ಬಗ್ಗೆ ಯಾರೊಬ್ಬರೂ ಆತಂಕಪಡಬೇಕಾದ ಅಗತ್ಯವಿಲ್ಲ. ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧಗಳಿರುವುದಿಲ್ಲ. ಗುಂಪು ಸೇರುವ ಸಂದರ್ಭದಲ್ಲಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಸಂಭ್ರಮದ ಜೊತೆಗೆ ನಿಮ್ಮ ಆರೋಗ್ಯದ ಕಾಳಜಿಯನ್ನು ವಹಿಸಿ. ಸುರಕ್ಷಿತವಾಗಿರಿ.
ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯವಾಗಿದೆ. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು. ಉಳಿದವರು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಮೊದಲೇ ಈ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳುವ ಮೂಲಕ ಕೊರೋನಾದಿಂದ ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳೋಣವೆಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೊರೊನಾ ಸಾಂಕ್ರಾಮಿಕ ನಿಯಂತ್ರಣಕ್ಕೆ ನಾವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ. ಈ ಬಗ್ಗೆ ಯಾರೊಬ್ಬರೂ ಆತಂಕಪಡಬೇಕಾದ ಅಗತ್ಯವಿಲ್ಲ.
ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧಗಳಿರುವುದಿಲ್ಲ. ಗುಂಪು ಸೇರುವ ಸಂದರ್ಭದಲ್ಲಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ.
ಸಂಭ್ರಮದ ಜೊತೆಗೆ ನಿಮ್ಮ ಆರೋಗ್ಯದ… pic.twitter.com/R2huFhRZJm
— Siddaramaiah (@siddaramaiah) December 21, 2023
ಬಿಲ್ ಪಾಸ್ ಮಾಡಲು ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು
ಧನಕರ್‌ಗೆ ಕರೆ ಮಾಡಿ ನಾನೂ 20 ವರ್ಷಗಳಿಂದ ಅವಮಾನ ಅನುಭವಿಸಿದ್ದೇನೆ, ಬೇಸರಿಸಬೇಡಿ ಎಂದ ಮೋದಿ
ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನನು ಭೇಟಿಯಾಗಿ ಪರಿಹಾರಕ್ಕಾಗಿ ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ