Monday, October 6, 2025

Latest Posts

ಸಿರಿಧಾನ್ಯ ಸೇವನೆ ಬಗ್ಗೆ ಸಚಿವ ಚೆಲುವರಾಯಸ್ವಾಮಿ ಮಾತು

- Advertisement -

Bengaluru News: ಬೆಂಗಳೂರು: ಸಿರಿಧಾನ್ಯ ಪರಿಪೂರ್ಣ ಆಹಾರವಾಗಿದ್ದು, ಜಾಗತಿಕ ಮಾರುಕಟ್ಟೆಯಲ್ಲಿಯೂ ಇದಕ್ಕೆ ಹೆಚ್ಚು ಬೇಡಿಕೆ ಇದೆ. ಹಾಗಾಗಿ ಎಲ್ಲರೂ ಜಂಕ್ ಫುಡ್ ಬಿಟ್ಟು, ಸಿರಿಧಾನ್ಯ ಸೇವನೆ ಮಾಡಿ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ.

ನಗರದ ಕ್ರೈಸ್ಟ್ ವಿವಿ ಆವರಣದಲ್ಲಿ ನಡೆದ ಮಿಲೆಟ್ಸ್ ತಿಂತೀರಾ- ಸಿರಿಧಾನ್ಯ ಸಂಸ್ಕೃತಿ ಉತ್ತೇಜಿಸೋಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ, ಕೃಷಿ ಸಚಿವ ಚೆಲುವರಾಯಸ್ವಾಮಿ, ಸಿರಿ ಧಾನ್ಯಗಳು ದೇಹಕ್ಕೆ ಪುಷ್ಠಿ ನೀಡುತ್ತದೆ. ಧೀರ್ಘಕಾಲ ದೇಹಕ್ಕೆ ಸ್ಥಿರತೆ ನೀಡಲು ನೆರವಾಗುತ್ತದೆ. ಅಲ್ಲದೇ ನೀರಿನಲ್ಲಿ ಸಿರಿಧಾನ್ಯ ಬೆಳೆಯುವುದರಿಂದ ರೈತರಿಗೆ ವೆಚ್ಚ ಕಡಿಮೆಯಾಗಿ, ಹೆಚ್ಚು ಆದಾಯ ತಂದುಕೊಡುತ್ತದೆ ಎಂದು ಸಚಿವರು ಹೇಳಿದರು.

ಹೆಚ್ಚು ಪೌಷ್ಠಿಕತೆ ಹೊಂದಿರುವ ಸಿರಿಧಾನ್ಯ ಸದೃಡ ದೇಹ ಹಾಗೂ ಮನಸ್ಸಿನ ನಿರ್ಮಾಣಕ್ಕೆ ಸಹಕಾರಿಯಾಗಿದೆ. ಯುವ ಸಮುದಾಯ ಇದನ್ನು ಹೆಚ್ಚು ಬಳಸಿ ಸಾರ್ವಜನಿಕರಿಗೂ ಅರಿವು ಮೂಡಿಸಬೇಕು. ಸಿರಿಧಾನ್ಯ ಅತ್ಯಂತ ಪರಿಪೂರ್ಣ ಆಹಾರ, ಜಾಗತಿಕ ಮಾರುಕಟ್ಟೆಯಲ್ಲಿಯೂ ಇದಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ವಿದ್ಯಾರ್ಥಿಗಳು ಸಹ ಜಂಕ್ ಪುಡ್ ಬಿಟ್ಟು ಪ್ರತಿದಿನ ಮಿಲೆಟ್ ಬಳಸುವುದು ಉತ್ತಮ. ಸಿರಿಧಾನ್ಯ ಕಡಿಮೆ ವೆಚ್ಚ, ಮಿತ ನೀರಿನಲ್ಲಿ ಬೆಳೆಯುವ ಆಹಾರವಾಗಿದೆ. ಕರ್ನಾಟಕ ಸರ್ಕಾರ 2013 ರಿಂದಲೂ ಇದರ ಪ್ರೋತ್ಸಾಹಕ್ಕೆ ಹಲವು ಯೋಜನೆ ಜಾರಿಗೆ ತಂದಿದೆ. ಪ್ರತಿವರ್ಷ ಮೇಳಗಳನ್ನು ಆಯೋಜಿಸುತ್ತಿದ್ದು ಈ‌ ಬಾರಿ ಜ 5-7ರ ವರಗೆ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಅಂತರ ರಾಷ್ಟ್ರೀಯ ಮಟ್ಟದ ಸಾವಯವ, ಸಿರಿಧಾನ್ಯ ವಾಣಿಜ್ಯ ಮೇಳ ಆಯೋಜಿಸಲಾಗಿದೆ. ದೇಶ ವಿದೇಶಗಳ ವಿಜ್ಞಾನಿಗಳು, ತಜ್ಞರು ಈ ಮೇಳದಲ್ಲಿ ಪಾಲ್ಗೊಳ್ಳಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಅನುಕೂಲ ಪಡೆಯಬೇಕು ಎಂದು ಸಚಿವರು ಹೇಳಿದರು.

ಬಿಲ್ ಪಾಸ್ ಮಾಡಲು ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

ಧನಕರ್‌ಗೆ ಕರೆ ಮಾಡಿ ನಾನೂ 20 ವರ್ಷಗಳಿಂದ ಅವಮಾನ ಅನುಭವಿಸಿದ್ದೇನೆ, ಬೇಸರಿಸಬೇಡಿ ಎಂದ ಮೋದಿ

ಕೇಂದ್ರ ಗೃಹ ಸಚಿವ ಅಮಿತ್‌ ಶಾರನ್ನನು ಭೇಟಿಯಾಗಿ ಪರಿಹಾರಕ್ಕಾಗಿ ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ

- Advertisement -

Latest Posts

Don't Miss