Political News: ಸಚಿವ ಜಮೀರ್ ಅಹಮದ್ ತಮ್ಮ ಪ್ರೈವೇಟ್ ಜೆಟ್ನಲ್ಲಿ ಸಂಚರಿಸುತ್ತಿರುವ ವೀಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದು, ಈ ಬಗ್ಗೆ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.
“ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ ಜನರ ದುಡ್ಡು ಆಕಾಶದಲ್ಲಿ ಜಾತ್ರೆ”. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮ ಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ, ಇಂಥಾ ಗಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು, ಮಸ್ತಿಯೇ ತನ್ನ ಜೀವನ ಶೈಲಿ ಎಂದು ಪ್ರದರ್ಶಿಸಿಕೊಳ್ಳುತ್ತಿರುವ ಸಚಿವ ಜಮೀರ್ ಅಹಮದ್ ಅವರ ಜೊತೆ ಜನರ ತೆರಿಗೆ ಹಣ ವ್ಯಯಿಸಿ ಐಶಾರಾಮಿ ಜೆಟ್ ವಿಮಾನದಲ್ಲಿ ಪ್ರಯಾಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮೋಜಿನ ಭಾಗವಾಗಿರುವುದು ಈ ರಾಜ್ಯದ ದೌರ್ಭಾಗ್ಯವಲ್ಲದೇ ಮತ್ತಿನ್ನೇನು ಅಲ್ಲ. ಮುಖ್ಯಮಂತ್ರಿ ಮತ್ತವರ ಮಂತ್ರಿಮಂಡಲದ ಸದಸ್ಯರ ಆಡಂಬರ, ವೈಭವದ ಪ್ರದರ್ಶನ ಗಳನ್ನು ನೋಡಿದರೆ “ರೋಮ್ ದೊರೆ ನೀರೋ” ಉಲ್ಲೇಖಿಸುವ ಬದಲು “ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ….” ಎಂದು ವರ್ಣಿಸಬಹುದಾಗಿದೆ ಎಂದು ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.
"ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ
ಜನರ ದುಡ್ಡು ಆಕಾಶದಲ್ಲಿ ಜಾತ್ರೆ".
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮ ಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ, ಇಂಥಾ ಗಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು, ಮಸ್ತಿಯೇ ತನ್ನ ಜೀವನ ಶೈಲಿ ಎಂದು… pic.twitter.com/Bx5VLq1hsB— Vijayendra Yediyurappa (@BYVijayendra) December 22, 2023
ಡಿಸಿಎಂ ಡಿಕೆಶಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮುಂದೆ ಇಟ್ಟ ಬೇಡಿಕೆಗಳಿವು..