Thursday, November 7, 2024

Latest Posts

ಸಚಿವರ ಪ್ರೈವೇಟ್ ಜೆಟ್‌ನಲ್ಲಿ ಸಿಎಂ ಪ್ರಯಾಣಿಸಿದ್ದಕ್ಕೆ ಬಿಜೆಪಿ ಅಸಮಾಧಾನ: ಸಿದ್ದು ತಿರುಗೇಟು

- Advertisement -

Political News: ಸಚಿವ ಜಮೀರರ್ ಅಹಮದ್ ಅವರ ಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪ್ರಯಾಣಿಸಿದ್ದರ ಬಗ್ಗೆ, ಬಿಜೆಪಿಗರು ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದ ರೈತರು ಬರಗಾಲದಿಂದ ತತ್ತರಿಸಿ ಹೋಗಿರುವಾಗ, ಸಿಎಂ ಸಚಿವರ ಪ್ರೈವೇಟ್ ಜೆಟ್‌ನಲ್ಲಿ ಆರಾಮವಾಗಿ ಓಡಾಡಿಕೊಂಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದಕ್ಕೆ ಟ್ವೀಟ್ ಮೂಲಕ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ ಪ್ರಧಾನಿಗಳು ಪ್ರಯಾಣಿಸುವ ಜೆಟ್ ಯಾವುದು..? ಆಪರೇಷನ್ ಕಮಲವಾದಾಗ, ಬಳಸಿದ ಜೆಟ್ ಕೂಲಿ ಮಾಡಿ ಕೂಡಿಟ್ಟಿದ್ದಾ ಎಂದು ಪ್ರಶ್ನಿಸಿದ್ದಾರೆ.

ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರ ಬೀಳಿಸಿ, ಶಾಸಕರನ್ನು ವಿಶೇಷ ವಿಮಾನದಲ್ಲಿ ದೆಹಲಿ, ಮುಂಬೈ ಸುತ್ತಾಡಿಸಿದ, ಐಷಾರಾಮಿ ಹೋಟೆಲ್‌ಗಳಲ್ಲಿ ವಾರಗಟ್ಟಲೆ ಠಿಕಾಣಿ ಹಾಕಿಸಿ ಮೋಜು ಮಸ್ತಿಗಾಗಿ ಖರ್ಚು ಮಾಡಿದ ನೂರಾರು ಕೋಟಿ ಹಣ ಬಿಜೆಪಿಯವರು ನರೇಗಾ ಯೋಜನೆಯಲ್ಲಿ ಕೂಲಿ ಮಾಡಿ ಕೂಡಿಟ್ಟದ್ದಲ್ಲ, ರಾಜ್ಯದ ಬಡಜನರು ಕಷ್ಟಪಟ್ಟು ಕಟ್ಟಿದ ತೆರಿಗೆ ಹಣ.

ರಾಜ್ಯದ ಬರ ಪರಿಸ್ಥಿತಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚಿಸುವ ಸಲುವಾಗಿ ವಿಶೇಷ ವಿಮಾನದಲ್ಲಿ ನಾನು ಪ್ರಯಾಣ ಬೆಳೆಸಿದ್ದನ್ನು ವಿರೋಧಿಸುವ ನೈತಿಕತೆ ರಾಜ್ಯ ಬಿಜೆಪಿ ನಾಯಕರಿಗೆ ಇದೆಯೇ?

2014ರ ಜೂನ್ 15ರಿಂದ 2023ರ ಸೆಪ್ಟೆಂಬರ್‍‌ವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು 74 ಬಾರಿ ವಿದೇಶಿ ಪ್ರವಾಸ ಮಾಡಿದ್ದಾರೆ. ಪ್ರಧಾನಿಗಳ ಅಧಿಕೃತ ತಾಣದ ಅಂಕಿ ಅಂಶಗಳ ಪ್ರಕಾರ ಪ್ರತಿ ಪ್ರವಾಸದ ಸರಾಸರಿ ವೆಚ್ಚ 8.9 ಕೋಟಿ ರೂಪಾಯಿ.

ದೇಶ ಹಸಿವಿನ ಸೂಚ್ಯಂಕದಲ್ಲಿ 111ನೇ ಸ್ಥಾನದಲ್ಲಿದೆ. ದೇಶದ ಜನ ಹಸಿವಿನಿಂದ ಬಳಲುತ್ತಿರುವ ವೇಳೆ ಪ್ರಧಾನಿಗಳು ವಿಶೇಷ ವಿಮಾನದ ಮೂಲಕ ವಿದೇಶ ಯಾತ್ರೆ ಮಾಡಿಕೊಂಡು, ಮೋಜು ಮಾಡುತ್ತಾರೆಂದು ಹೇಳಲು ಬರುತ್ತದೆಯಾ? ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ಖರ್ಗೆ ಹೆಸರು ಪ್ರಧಾನಮಂತ್ರಿ ಅಭ್ಯರ್ಥಿಯಾಗಿ ಪ್ರಸ್ತಾಪವಾದ ಬಗ್ಗೆ ಸಿಎಂ ಹೇಳಿದ್ದೇನು..?

ಉಡುಪಿ ಕೃಷ್ಣಮಠಕ್ಕೆ ಭೇಟಿ ಕೊಟ್ಟ ನಟಿ ಸಾಯಿ ಪಲ್ಲವಿ

“ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ..”

- Advertisement -

Latest Posts

Don't Miss