Political News: ನಿನ್ನೆ ಮೈಸೂರಿನ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ, ಭಾಷಣ ಮಾಡುತ್ತಿದ್ದ ವೇಳೆ ಸಿಎಂ ಹಿಜಬ್ ನಿಷೇಧ ವಾಪಸ್ ಪಡೆದಿದ್ದೇನೆ ಎಂದು ಘೋಷಣೆ ಮಾಡಿದ್ದರು. ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವುದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೊಡ್ಡ ಕುತಂತ್ರ ಅಡಗಿದೆ ಎಂದಿದ್ದಾರೆ.
ಗ್ಯಾರೆಂಟಿಗಳಿಂದ ಬರಿದಾದ ಖಜಾನೆ, ಅನುದಾನಕ್ಕಾಗಿ ಶಾಸಕರ ಒತ್ತಡ, ನಿಗಮ ಮಂಡಳಿ ನೇಮಕಕ್ಕೆ ಸೊಪ್ಪು ಹಾಕದ ಹೈಕಮಾಂಡ್ ಇವೆಲ್ಲದರಿಂದ ತಾವೇ ಸೃಷ್ಟಿಸಿಕೊಂಡ ಚಕ್ರವ್ಯೂಹದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದಾಮಯ್ಯನವರು ಹಿಜಾಬ್ ವಿಷಯವನ್ನು ಪ್ರಸ್ತಾಪಿಸಿ ಜನರನ್ನು ದಿಕ್ಕು ತಪ್ಪಿಸಲು ಹೊರಟಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಟ್ವೀಟ್ ಮಾಡಿದ್ದಾರೆ.
ಅಲ್ಲದೇ, ಕೋಲಾರದ ಮಾಲೂರಿನ ಮಕ್ಕಳಿಂದ, ಶೌಚಾಲಯ ಕ್ಲೀನ್ ಮಾಡಿಸಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಆರ್.ಅಶೋಕ್, ಮಾಲೂರಿನ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಗಿಳಿಸಿದ ಘಟನೆಯ ಬೆನ್ನಲ್ಲೆ ಯಶವಂತಪುರ ವಿಧಾನಸಭೆ ಕ್ಷೇತ್ರದ ಅಂದ್ರಹಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದಲೇ ಶೌಚಾಲಯ ಶುಚಿಗೊಳಿಸಿದ ಪ್ರಕರಣ ಬೆಳಕಿಗೆ ಬಂದಿದೆ. ತಮ್ಮ ಸರ್ಕಾರ ಎಚ್ಚೆತ್ತುಕೊಳ್ಳಲು ಇನ್ನು ಎಷ್ಟು ಬಡ ವಿದ್ಯಾರ್ಥಿಗಳ ಶೋಷಣೆಯಾಗಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ? ಈ ರೀತಿ ಮಕ್ಕಳ ಶೋಷಣೆ, ಬವಣೆ ಇನ್ನು ಅದೆಷ್ಟು ಶಾಲೆಗಳಲ್ಲಿ ನಡೆಯುತ್ತಿದೆಯೋ ಏನೋ. ರಾಜ್ಯದಲ್ಲಿ ಸರ್ಕಾರ ಬದುಕಿದೆಯೋ ಅಥವಾ ಸತ್ತಿದೆಯೋ ಎಂದು ಜನರಲ್ಲಿ ಅನುಮಾನ ಮೂಡುತ್ತಿದೆ ಎಂದು ಹೇಳಿದ್ದಾರೆ.
ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವುದರ ಹಿಂದೆ ಮುಖ್ಯಮಂತ್ರಿ @siddaramaiah ನವರ ದೊಡ್ಡ ಕುತಂತ್ರ ಅಡಗಿದೆ.
ಗ್ಯಾರೆಂಟಿಗಳಿಂದ ಬರಿದಾದ ಖಜಾನೆ, ಅನುದಾನಕ್ಕಾಗಿ ಶಾಸಕರ ಒತ್ತಡ, ನಿಗಮ ಮಂಡಳಿ ನೇಮಕಕ್ಕೆ ಸೊಪ್ಪು ಹಾಕದ ಹೈಕಮಾಂಡ್ ಇವೆಲ್ಲದರಿಂದ ತಾವೇ ಸೃಷ್ಟಿಸಿಕೊಂಡ ಚಕ್ರವ್ಯೂಹದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ…
— R. Ashoka (ಆರ್. ಅಶೋಕ) (@RAshokaBJP) December 23, 2023
ಮಾಲೂರಿನ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಗಿಳಿಸಿದ ಘಟನೆಯ ಬೆನ್ನಲ್ಲೆ ಯಶವಂತಪುರ ವಿಧಾನಸಭೆ ಕ್ಷೇತ್ರದ ಅಂದ್ರಹಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದಲೇ ಶೌಚಾಲಯ ಶುಚಿಗೊಳಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ತಮ್ಮ ಸರ್ಕಾರ ಎಚ್ಚೆತ್ತುಕೊಳ್ಳಲು ಇನ್ನು ಎಷ್ಟು ಬಡ ವಿದ್ಯಾರ್ಥಿಗಳ ಶೋಷಣೆಯಾಗಬೇಕು ಮುಖ್ಯಮಂತ್ರಿ…
— R. Ashoka (ಆರ್. ಅಶೋಕ) (@RAshokaBJP) December 22, 2023
ಸಚಿವರ ಪ್ರೈವೇಟ್ ಜೆಟ್ನಲ್ಲಿ ಸಿಎಂ ಪ್ರಯಾಣಿಸಿದ್ದಕ್ಕೆ ಬಿಜೆಪಿ ಅಸಮಾಧಾನ: ಸಿದ್ದು ತಿರುಗೇಟು

