Thursday, November 7, 2024

Latest Posts

ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿಯಲ್ಲಿ ಸಿಎಂಗೆ ಸದಸ್ಯ ಸ್ಥಾನ

- Advertisement -

Political News: ಮುಂಬರುವ ಲೋಕಸಭಾ ಚುನಾವಣೆಯ ‘ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ’ಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು, ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಖರ್ಗೆ ಮತ್ತು ರಾಹುಲ್ ಗಾಂಧಿಗೆ ಧನ್ಯವಾದ ತಿಳಿಸಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯ ‘ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ’ಯಲ್ಲಿ ನನ್ನನ್ನು ಸದಸ್ಯರನ್ನಾಗಿ ನೇಮಕ ಮಾಡಿರುವುದಕ್ಕಾಗಿ ಎಐಸಿಸಿ ಅಧ್ಯಕ್ಷರಾದ ಖರ್ಗೆ ಅವರಿಗೆ ಧನ್ಯವಾದಗಳು.

ನಮ್ಮ ಸರ್ಕಾರದ ‘ಕರ್ನಾಟಕ ಮಾದರಿ’ ಆಡಳಿತ ಇಂದು ಪಕ್ಷಾತೀತವಾಗಿ ದೇಶದ ಜನ ಗುರುತಿಸುತ್ತಿದ್ದಾರೆ. ಪ್ರಣಾಳಿಕೆ ರಚನೆಯಲ್ಲಿ ನನಗೆ ಅವಕಾಶ ನೀಡಿರುವುದು ಈ ‘ಕರ್ನಾಟಕ ಮಾದರಿ ಆಡಳಿತ’ಕ್ಕೆ ಎಐಸಿಸಿ ನೀಡಿರುವ ಗೌರವ ಎಂದು ನಾನು ತಿಳಿದುಕೊಂಡಿದ್ದೇನೆ.

ಪಕ್ಷದ ಪ್ರಣಾಳಿಕೆ ಎನ್ನುವುದು ಕೇವಲ ಮತದಾರರಿಗೆ ನೀಡುವ ಭರವಸೆಗಳ ಪಟ್ಟಿ ಅಲ್ಲ, ಜನತೆಗೆ ನಾವು ನೀಡುವ ವಚನವಾಗಿದ್ದು ಅದನ್ನು ಅನುಷ್ಠಾನಕ್ಕೆ ತರುವುದು ನಿಜವಾದ ರಾಜಧರ್ಮ ಎಂದು ನಾನು ತಿಳಿದುಕೊಂಡವನು. ಹಿಂದಿನ ನಮ್ಮ ಸರ್ಕಾರ ‘ಸರ್ವರಿಗೂ ಸಮಪಾಲು – ಸಮಬಾಳು’ ನೀಡುವ ಪ್ರಣಾಳಿಕೆಯಲ್ಲಿನ ಎಲ್ಲ ಭರವಸೆಗಳನ್ನು ಅನುಷ್ಠಾನಗೊಳಿಸಿ ಮಾದರಿ ಆಡಳಿತವನ್ನು ನೀಡಿ ಜನತೆಯ ವಿಶ್ವಾಸಾರ್ಹತೆಯನ್ನು ಗಳಿಸಿದ್ದೆವು. ಅದೇ ಹಾದಿಯಲ್ಲಿ ಈಗಿನ ಸರ್ಕಾರ ಕೂಡಾ ಮುನ್ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ದೇಶದ ಜನತೆ ಕೂಡಾ ಕರ್ನಾಟಕ ಮಾದರಿ ಆಡಳಿತದ ಅನುಕೂಲಗಳನ್ನು ಪಡೆಯುವಂತಾಗಲಿ ಎಂದು ಹಾರೈಸುತ್ತೇನೆ.

ನನ್ನ ಎಲ್ಲ ಯೋಚನೆ-ಯೋಜನೆಗಳಿಗೆ ಪ್ರೋತ್ಸಾಹ ನೀಡಿ ಹುರಿದುಂಬಿಸುತ್ತಿರುವ ಪಕ್ಷದ ಹಿರಿಯರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ನಾನು ಆಭಾರಿಯಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸಚಿವರ ಪ್ರೈವೇಟ್ ಜೆಟ್‌ನಲ್ಲಿ ಸಿಎಂ ಪ್ರಯಾಣಿಸಿದ್ದಕ್ಕೆ ಬಿಜೆಪಿ ಅಸಮಾಧಾನ: ಸಿದ್ದು ತಿರುಗೇಟು

ಉಡುಪಿ ಕೃಷ್ಣಮಠಕ್ಕೆ ಭೇಟಿ ಕೊಟ್ಟ ನಟಿ ಸಾಯಿ ಪಲ್ಲವಿ

ರಾಜ್ಯದಲ್ಲಿ ಹಿಜಬ್ ನಿಷೇಧ ವಾಪಸ್: ಸಿಎಂ ಸಿದ್ದರಾಮಯ್ಯ ಘೋಷಣೆ

- Advertisement -

Latest Posts

Don't Miss