Hubballi News: ಹುಬ್ಬಳ್ಳಿ: ಒಳಮೀಸಲಾತಿ ಸೇರಿದಂತೆ ಸಮಾಜದ ಇನ್ನಿತರ ಬೇಡಿಕೆಗಳನ್ನು ಸರ್ಕಾರ ತೆಗೆದುಕೊಂಡಿರುವ ದಿಟ್ಟ ನಿರ್ಧಾರವನ್ನು ಸಮೂದಾಯದ ಜನರಲ್ಲಿ ಜಾಗೃತಿ ಮತ್ತು ಒಗ್ಗಟ್ಟು ಮೂಡಿಸುವ ಉದ್ದೇಶದಿಂದ ಡಿ.30 ರಂದು ಬೆಳಿಗ್ಗೆ 11 ಕ್ಕೆ ಇಲ್ಲಿನ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಸಮಾವೇಶ ಆಯೋಜಿಸಲಾಗಿದೆ ಎಂದು ಮಾದಿಗ ದಂಡೋರ ಉತ್ತರ ಕರ್ನಾಟಕ ವಿಭಾಗದ ಅಧ್ಯಕ್ಷ ಮಂಜುನಾಥ ಕೊಂಡಪಲ್ಲಿ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 3 ದಶಕಗಳಿಂದ ಒಳಮೀಸಲಾತಿಗಾಗಿ ಒತ್ತಾಯಿಸಿ ಅನೇಕ ಹೋರಾಟಗಳನ್ನು ರಾಜ್ಯಾದ್ಯಂತ ಮಾಡಿದ ಫಲವಾಗಿ ಕಳೆದ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.15 ರಿಂದ 17 ಕ್ಕೆ ಹೆಚ್ಚಿಸಿ ಅಂದಿನ ಕಾನೂನು ಸಚಿವ ಮಾಧೂಸ್ವಾಮಿ ನೇತೃತ್ವದ ಉಪಸಮಿತಿಯ ಶಿಫಾರಸ್ಸಿನಂತೆ ಜನಸಂಖ್ಯೆಯ ಆಧಾರದ ಮೇಲೆ ಒಳಮೀಸಲಾತಿ ಹಂಚಿಕೆ ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ದಿಟ್ಟ ನಿರ್ಧಾರ ಕೈಗೊಂಡಿದೆ.
ಅದರಂತೆ ಕಳೆದ ತಿಂಗಳು ಮಾದಿಗ ದಂಡೋರ ಸಂಘಟನೆಯ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷ ಮಂದಕೃಷ್ಣ ಮಾದಿಗ ಅವರು ಸಿಕಂದರಾಬಾದ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸಿ ಬೃಹತ್ ಸಮಾವೇಶ ನಡೆಸಿದರು. ಅದರಲ್ಲಿ ಸ್ವತಃ ನರೇಂದ್ರ ಮೋದಿ ಅವರು ಒಳಮೀಸಲಾತಿ ಜಾರಿಗೊಳಿಸುವ ಭರವಸೆ ಕೊಟ್ಟಿದ್ದಾರೆ. ಈ ಹಿನ್ನೆಲೆ ಜನರಿಗೆ ತಿಂಗಳಲ್ಲಿ ಏಳು ಜನ ಸದಸ್ಯ ಪೀಠದ ಮುಂದೆ ಈ ಪ್ರಕರಣ ವಿಚಾರಣೆಗೆ ಬರಲಿದ್ದು, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಡೆಪ್ಯುಟಿ ಸಾಲಿಸಿಟರ್ ಜನರಲ್ ವೆಂಕಟರಮಣಿ ಅವರನ್ನು ನೇಮಿಸಿರುವುದು ಐತಿಹಾಸಿಕ ನಿರ್ಣಯ ಆಗಿದೆ.
ಈ ಎಲ್ಲ ಬೆಳವಣಿಗೆಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಧಾರವಾಡ ಜಿಲ್ಲೆಯಲ್ಲಿ ಮಾದಿಗ ಮುನ್ನಡೆ ಸಮಾವೇಶವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ಸಾನಿಧ್ಯವನ್ನು ಬಸನಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಗಳು ವಹಿಸಲಿದ್ದು, ಉದ್ಘಾಟನೆಯನ್ನು ಶಾಸಕ ದುರ್ಯೋಧನ ಐಹೊಳೆ, ಸಂಘದ ರಾಜ್ಯಾಧ್ಯಕ್ಷ ಬಿ.ನರಸಪ್ಪ ದಂಡೋರ, ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮೀ ನಾರಾಯಣ, ಎಂ.ನಾರಾಯಣ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಎ.ನಾರಾಯಣಸ್ವಾಮಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ವಿಪಕ್ಷ ನಾಯಕ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ್ ಸೇರಿದಂತೆ ಮುಂತಾದ ಗಣ್ಯಮಾನ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಗೋಪಾಲ್ ದೊಡ್ಡಮನಿ, ಸತ್ಯಣ್ಣಾ ಎಮ್, ಸಹದೇವ ಮಾಳಗಿ, ಹಂಸವೇಣಿ, ಗುರುನಾಥ ದಾನಪ್ಪನವರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
‘ಬಿಜೆಪಿಗರು ಅಪಪ್ರಚಾರ ಮಾಡುತ್ತಿರುವುದು ಅವರ ಹತಾಶ ಮನಸ್ಥಿತಿಗೆ ಹಿಡಿದ ಕನ್ನಡಿ ಅಷ್ಟೇ’