‘ಮಿಸ್ಟರ್ ನರೇಂದ್ರ ಮೋದಿ ಅವರೇ, ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂದು ದೇಶದ ಜನರಿಗೆ ಲೆಕ್ಕ ಕೊಡಿ’

Political News: ಇಂದು ಕಾಂಗ್ರೆಸ್ ಸರ್ಕಾರ ತನ್ನ 5ನೇ ಗ್ಯಾರಂಟಿಯಾದ ಯುವನಿಧಿ ಯೋಜನೆ ನೋಂದಣಿಗೆ ಸಾಲನೆ ನೀಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಪ್ರಧಾನಿ ನರೇಂದ್ರ ಮೋದಿಗೆ ಸವಾಲ್ ಹಾಕಿದ್ದಾರೆ.

ನಾವು ನುಡಿದಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಕೊಟ್ಟು, ವಚನ ಪಾಲನೆ ಮಾಡಿದ್ದೇವೆ. ಮಿಸ್ಟರ್ ನರೇಂದ್ರ ಮೋದಿ ಅವರೇ, ವರ್ಷಕ್ಕೆ 2 ಕೋಟಿಯಂತೆ ನಿಮ್ಮ ಸರ್ಕಾರ ಹತ್ತು ವರ್ಷಕ್ಕೆ 20 ಕೋಟಿ ಉದ್ಯೋಗ ಸೃಷ್ಟಿ ಮಾಡಬೇಕಿತ್ತು. ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂದು ದೇಶದ ಜನರಿಗೆ ಲೆಕ್ಕ ಕೊಡಿ ಎಂದು ಪ್ರಶ್ನಿಸಿದ್ದಾರೆ.

ವಿಧಾನಸೌಧದ ಬ್ಲ್ಯಾಂಕೇಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸಿಎಂ ಸಿದ್ದರಾಮಯ್ಯನವರು, ಈ ಯೋಜನೆಗೆ ಚಾಲನೆ ನೀಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ, ಹಲವು ಕಾಂಗ್ರೆಸ್ ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

2022-23ನೇ ಸಾಲಿನಲ್ಲಿ ಪದವಿ ಪಡೆದು ಆರು ತಿಂಗಳಾದರೂ ಉದ್ಯೋಗ ಸಿಗದ ನಿರುದ್ಯೋಗಿ ಯುವಜನರ ಮೇಲಿನ ಆರ್ಥಿಕ ಒತ್ತಡವನ್ನು ತಗ್ಗಿಸಿ, ಇಷ್ಟದ ಉದ್ಯೋಗ ಪಡೆಯಲು ನೆರವಾಗುವ ಉದ್ದೇಶದೊಂದಿಗೆ ರೂಪಿಸಿರುವ ಯೋಜನೆಯೇ ಯುವನಿಧಿ.

‘ಕೋವಿಡ್ ಸಮಯದಲ್ಲಿ ಕೋಟಿ ಕೋಟಿ ಲೂಟಿ ಮಾಡಲಾಗಿದೆ’

ದೇವಾಲಯದ ಎತ್ತರ ಮೀರಿ ಯಾವುದೇ ಕಟ್ಟಡ ಕಟ್ಟುವಂತಿಲ್ಲ: ಯೋಗಿ ಆದಿತ್ಯನಾಥ್ ಆದೇಶ

‘ವಿಕೃತ ಮನಸ್ಸುಗಳನ್ನು ಹೊಂದಿರುವಂತಹ ಇವರಿಬ್ಬರು ಸೇರಿ ಒಂದು ಪಕ್ಷವನ್ನು ಪ್ರಾರಂಭಿಸುದು ಒಳ್ಳೆಯದು’

About The Author