ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Political News: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ನಂದಿಹಳ್ಳಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಸಚಿವರ ಕಾರು ಗುದ್ದಿದ್ದು, ಕಾರ್ ಮುಂಭಾಗ ಸಂಪೂರ್ಣ ಜಖಂ ಆಗಿದೆ.

ಅದೃಷ್ಟವಶಾತ್ ಸಚಿವರು ಸೇರಿ, ಕಾರ್‌ನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗಕ್ಕೆ ಭೇಟಿ ಕೊಟ್ಟು, ಪುನಃ ಬೆಂಗಳೂರಿಗೆ ಬರುವಾಗ, ಮಾರ್ಗಮಧ್ಯೆ ಈ ಘಟನೆ ಸಂಭವಿಸಿದೆ. ಘಟನೆ ಬಳಿಕ, ಕಾರ್ ಚೇಂಜ್ ಮಾಡಿಕೊಂಡು ಸಚಿವರು ಬೆಂಗಳೂರಿಗೆ ಬಂದಿಳಿದಿದ್ದಾರೆ. ಇನ್ನು ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಸ್ಕರ್ ಪ್ರಶಸ್ತಿ ವಿಜೇತ ನಟ ಲೀ ಸನ್ ಕಾರಿನಲ್ಲಿ ಶವವಾಗಿ ಪತ್ತೆ

ಜ.14ರಿಂದ ಭಾರತ್ ನ್ಯಾಯ ಯಾತ್ರೆ ಆರಂಭಿಸಲಿದ್ದಾರೆ ರಾಹುಲ್ ಗಾಂಧಿ

ಕುಸ್ತಿಪಟುಗಳೊಂದಿಗೆ ಸಮಯ ಕಳೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

About The Author