ಮದರಸಾದ ಶಿಕ್ಷಕಿಗೆ ಮತ್ತು ಬರುವ ಔಷಧಿ ನೀಡಿ ನಿರಂತರ ಅತ್ಯಾಚಾರವೆಸಗಿದ್ದ ಆರೋಪಿಯ ಬಂಧನ

Hubballi News: ಹುಬ್ಬಳ್ಳಿ: ಮದಾರಾಸಾದ ಶಿಕ್ಷಕಿಗೆ ಮತ್ತು ಬರುವ ಔಷಧಿ ನೀಡಿ ಅತ್ಯಾಚಾರವೆಸಗಿದ ಆರೋಪಿ ಗುಲಾಮ ಜಿಲಾನಿ ಅಜಹರಿ ಮೌಲ್ವಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇನ್ನು ಪ್ರಕರಣದಲ್ಲಿ ಭಾಗಿಯಾಗಿದ್ದ ಗುಲಾಮ್ ಜಿಲಾನಿ ಅಜಹರಿ ಸೇರಿದಂತೆ 8 ಜನರ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ.

ಹುಬ್ಬಳ್ಳಿ ಮೂಲದ 23 ವರ್ಷದ ಯುವತಿ, ಮಧ್ಯಪ್ರದೇಶದ ಖಂಡವಾದಲ್ಲಿರುವ ಮುಫ್ತಿ ಗುಲಾಮ ಜಿಲಾನಿ ಅಜಹರಿಯ ಮದರಸಾದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಗುಲಾಮ ಜಿಲಾನಿ ಅಜಹರಿ ಯುವತಿಯ ತಂದೆಯ ಪರಿಚಯಸ್ಥನಾಗಿದ್ದನು. ಹೀಗಾಗಿ ಗುಲಾಮ ಜಿಲಾನಿ ಅಜಹರಿ ಯುವತಿಯ ತಂದೆಗೆ “ನಿಮ್ಮ ಮಗಳಿಗೆ ನಮ್ಮಲ್ಲಿ ಕೆಲಸ ಇದೆ” ಎಂದು ಹೇಳಿದ್ದ ಹಿನ್ನೆಲೆಯಲ್ಲಿ ಯುವತಿ ಖಂಡವಾ ಪಟ್ಟಣಕ್ಕೆ ಹೋಗಿದ್ದಳು.

ಅಲ್ಲಿ ಯುವತಿಯನ್ನು ಪುಸಲಾಯಿಸಿದ ಮುಫ್ತಿ ಗುಲಾಮ ಜಿಲಾನಿ ಅಜಹರಿ, ನನ್ನ ಮೊದಲ ಹೆಂಡತಿಗೆ ವಿಚ್ಚೆದನ ನೀಡಿದ್ದೇನೆ. ನಾನು ನಿನ್ನನ್ನು ಮದುವೆಯಾಗುತ್ತೇನೆ ಎಂದು ಹೇಳುತ್ತಲೇ ಯುವತಿಗೆ ಮತ್ತು ಬರುವ ಔಷಧ ಕೊಟ್ಟು ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ.

ಮದುವೆ ಮಾಡಿಕೊಳ್ಳುವದಾಗಿ ಹೇಳಿ ಎರಡು ವರ್ಷದ ಅವಧಿಯಲ್ಲಿ ಮೇಲಿಂದ ಮೇಲೆ ಬಲಾತ್ಕಾರ ಮಾಡಿದ್ದಾನೆ. ಎರಡು ವರ್ಷದ ಅವಧಿಯಲ್ಲಿ ಗುಲಾಮ ಜಿಲಾನಿ ಅಜಹರಿ, ಒಟ್ಟು ನಾಲ್ಕು ಬಾರಿ ಆಕೆಯ ಗರ್ಭಪಾತ ಮಾಡಿಸಿದ್ದಾನೆ. ಯುವತಿ ಐದನೇ ಬಾರಿಗೆ ಗರ್ಭಿಣಿಯಾದ ಬಳಿಕ ಆಕೆಯನ್ನು ತವರು ಮನೆ ಹುಬ್ಬಳ್ಳಿಯಲ್ಲಿ ಬಿಟ್ಟು, ನನ್ನ ನಿನ್ನ ನಡುವೆ ಯಾವುದೇ ಸಂಬಂಧ ಉಳಿದಿಲ್ಲ. ಈ ವಿಷಯ ಬಹಿರಂಗ ಮಾಡಿದರೆ ನಿನ್ನನ್ನು ಮತ್ತು ನಿನ್ನ ಕುಟುಂಬವನ್ನು ಜೀವ ಸಮೇತ ಬಿಡಲ್ಲ ಎಂದು ಬೆದರಿಕೆ ಹಾಕಿದ್ದಾನೆ.

ಯಾವಾಗ ಮದುವೆಯಾಗದೆ ಮೌಲ್ವಿ ಮೋಸ ಮಾಡಿದನೋ, ನೊಂದ ಯುವತಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ 18.12.23 ರಂದು ಪ್ರಕರಣ ದಾಖಲಿಸಿದ್ದಾಳೆ. ಒಟ್ಟು ಮುಫ್ತಿ (ಮೌಲ್ವಿ) ಸೇರಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಸದ್ಯ ಆಕೆಯ ದೂರನ್ನು ದಾಖಲಿಸಿಕೊಂಡ ಹಳೇ ಹುಬ್ಬಳ್ಳಿ ಪೊಲೀಸರು, ಅತ್ಯಾಚಾರದ ಆರೋಪಿ ಮುಫ್ತಿ ಗುಲಾಮ ಜಿಲಾನಿ ಅಜಹರಿಯನ್ನು ಮಧ್ಯಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಧ್ಯಪ್ರದೇಶದ ಖಂಡವಾದಿಂದ ಆತನನ್ನು ಹುಬ್ಬಳ್ಳಿಗೆ ಕರೆತರಲಾಗುತ್ತಿದೆ.

‘ಪ್ರಣವಾನಂದ ಸ್ವಾಮೀಜಿ ಅಲ್ಲ ಸ್ವಾಮೀಜಿನೇ ಅಲ್ಲ. ನಾನು ತಲೆಕಟ್ಟೋರಿಗೆ ಉತ್ತರ ಕೊಡಲ್ಲ’

ಕೊಬ್ಬರಿಗೆ ಬೆಲೆ ಏರಿಕೆ: ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಮಾಜಿ ಸಿಎಂ ಕುಮಾರಸ್ವಾಮಿ

2023ರಲ್ಲಿ ನಿಧನರಾದ ಸ್ಯಾಂಡಲ್‌ವುಡ್‌ ಸೆಲೆಬ್ರಿಟಿಗಳು ಇವರು

About The Author